ETV Bharat / state

ಶೆಟ್ಟರ್, ಸವದಿ ಫ್ಯಾಕ್ಟರ್: ವೀರಶೈವ ಲಿಂಗಾಯತ ಬಿಜೆಪಿ ನಾಯಕರ ಸಭೆ ಕರೆದ ಬಿಎಸ್​​ವೈ ..!

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ​ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ತುರ್ತು ಸಭೆ ಕರೆದಿದ್ದಾರೆ.

author img

By

Published : Apr 19, 2023, 12:18 PM IST

ಲಿಂಗಾಯತ ಬಿಜೆಪಿ ನಾಯಕರ ಸಭೆ
ಲಿಂಗಾಯತ ಬಿಜೆಪಿ ನಾಯಕರ ಸಭೆ

ಬೆಂಗಳೂರು: ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಕಾರ್ಯ ಮುಗಿಯುತ್ತಿದ್ದಂತೆ ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ರಾಜ್ಯ ಬಿಜೆಪಿಯ ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ತುರ್ತು ಸಭೆ ಕರೆದಿದ್ದಾರೆ. ಇಂದು ರಾತ್ರಿ ಸಭೆ ನಡೆಯಲಿದ್ದು ಶೆಟ್ಟರ್, ಸವದಿ ಫ್ಯಾಕ್ಟರ್​ಗೆ ಕೌಂಟರ್ ಕೊಡಲು ತಂತ್ರ ರೂಪಿಸಲಾಗುತ್ತದೆ ಎನ್ನಲಾಗಿದೆ.

ಕುಮಾರಪಾರ್ಕ್ ರಸ್ತೆಯಲ್ಲಿರುವ ಬಿಎಸ್​​ವೈ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ರಾತ್ರಿ ಪಕ್ಷದ ವೀರಶೈವ ಲಿಂಗಾಯತ ನಾಯಕರ ಸಭೆ ಕರೆಯಲಾಗಿದೆ. ಮಾಜಿ ಮುಖ್ಯಮಂತ್ರಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಸಚಿವರಾದ ಮುರುಗೇಶ್ ನಿರಾಣಿ, ಸಿಸಿ ಪಾಟೀಲ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಸೇರಿದಂತೆ ಪಕ್ಷದಲ್ಲಿನ ಲಿಂಗಾಯತ ಸಮುದಾಯ ನಾಯಕರು ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ಮತ ಬ್ಯಾಂಕ್ ಆಗಿರುವ ವೀರಶೈವ ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್ ನಾಯಕರು ಪಕ್ಷದ ವಿರುದ್ಧ ಎತ್ತಿ ಕಟ್ಟುತ್ತಿದ್ದು, ಬಿಜೆಪಿ ಲಿಂಗಾಯತ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ ಇದಕ್ಕೆ ತಕ್ಕ ಎದುರೇಟು ನೀಡಬೇಕು ಎನ್ನುವ ಕುರಿತು ಸಭೆಯಲ್ಲಿ‌ ಚರ್ಚೆ ನಡೆಸಲಾಗುತ್ತದೆ. ಪಕ್ಷ ವೀರಶೈವ ಲಿಂಗಾಯತ ಸಮುದಾಯಕ್ಕೆ ನೀಡಿರುವ ಆದ್ಯತೆ , ಅವಕಾಶಗಳನ್ನು ಜನತೆಯ ಮುಂದಿಟ್ಟು ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರ ಎಂದು ತಿಳಿಸುವ ನಿರ್ಣಯ ಕೈಗೊಳ್ಳಲಾಗುತ್ತದೆ.

ಇನ್ನು ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಿದ್ದು, ಈ ವಿಚಾರ ಮುಂದಿಟ್ಟು ಬಿಜೆಪಿ ವಿರುದ್ಧ ಕಾಂಗ್ರೆಸ್ ಲಿಂಗಾಯತ ವಿರೋಧಿ ಅಸ್ತ್ರ ಪ್ರಯೋಗ ಮಾಡುತ್ತಿದೆ, ಸಮುದಾಯವನ್ನು ಪಕ್ಷದ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಇದಕ್ಕೂ ಕಡಿವಾಣ ಹಾಕುವ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ವೀರಶೈವ ಲಿಂಗಾಯತ ಮತಗಳ ಚದುರಬಾರದು, ಶೆಟ್ಟರ್, ಸವದಿ ರಾಜೀನಾಮೆ ಪರಿಣಾಮ ಬಿಜೆಪಿ ಮೇಲಾಗಬಾರದು ಎನ್ನುವ ಕಾರಣಕ್ಕಾಗಿ ತುರ್ತು ಸಭೆ ಕರೆಯಲಾಗಿದ್ದು, ಚುನಾವಣಾ ಕಾರ್ಯತಂತ್ರದ ಕುರಿತು ಮಹತ್ವದ ಸಮಾಲೋಚನೆ ನಡೆಸಲಾಗುತ್ತದೆ ಎನ್ನಲಾಗಿದೆ.

ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ: ಸಿಎಂ ಬೊಮ್ಮಾಯಿ ಇಂದು ಹಾವೇರಿಯ ಶಿಗ್ಗಾಂವಿಯಲ್ಲಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ಏ.15ರಂದು‌ ಸಾಂಕೇತಿಕವಾಗಿ ಬೊಮ್ಮಾಯಿ ನಾಮಪತ್ರ ಸಲ್ಲಿಸಿದ್ದರು. ಇಂದು ಶಿಗ್ಗಾಂವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಚೆನ್ನಮ್ಮ ವೃತ್ತದಿಂದ ಆರಂಭವಾಗಲಿರುವ ರೋಡ್ ಶೋ ಹಳೆ ಬಸ್​ ನಿಲ್ದಾಣದ ಮೂಲಕ‌ ನಗರದ ಪ್ರಮುಖ ಬೀದಿಗಳಲ್ಲಿ ಸುಮಾರು 2 ಕಿ.ಮೀ ಸಾಗಲಿದೆ.

ರೋಡ್ ಶೋನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಂಸದ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್, ಸಚಿವ ಬಿ.ಸಿ ಪಾಟೀಲ್ ಮತ್ತು‌ ಚಿತ್ರನಟ ಸುದೀಪ್‌ ಪಾಲ್ಗೊಳ್ಳಲಿದ್ದರೆ. ತಾಲೂಕು ಕ್ರೀಡಾಂಗಣದಲ್ಲಿ ರೋಡ್ ಶೋ ಮುಕ್ತಾಯಗೊಂಡ ನಂತರ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ನಡ್ಡಾ, ಕಟೀಲ್, ಸುದೀಪ್‌ ಹಾಗೂ ಸಿಎಂ ಬೊಮ್ಮಾಯಿ ಸೇರಿದಂತೆ ವಿವಿಧ ಮುಖಂಡರು ಭಾಷಣ ಮಾಡಲಿದ್ದಾರೆ. ಬಳಿಕ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಸಲಿದ್ದಾರೆ. ಇವರಿಗೆ‌ ನಡ್ಡಾ ಸೇರಿದಂತೆ ವಿವಿಧ ಮುಖಂಡರು ಸಾಥ್ ನೀಡಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್, ಮೋದಿ, ಯೋಗಿ ಸೇರಿ 40 ಮಂದಿಗೆ ಅವಕಾಶ: ಪಟ್ಟಿಯಲ್ಲಿಲ್ಲ ಕಿಚ್ಚ ಸುದೀಪ್ ಹೆಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.