ETV Bharat / state

ಬೆಂಗಳೂರು ಗಲಭೆ ಪ್ರಕರಣ: ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲು ಸಿಎಂ ಸಭೆಯಲ್ಲಿ ನಿರ್ಧಾರ - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಕುರಿತು ಮಹತ್ವದ ಸಭೆ ನಡೆಯಿತು.

DJ village riot case
ಡಿ.ಜೆ ಹಳ್ಳಿ ಗಲಭೆ ಪ್ರಕರಣ ಕುರಿತು ಸಭೆ
author img

By

Published : Aug 17, 2020, 1:57 PM IST

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವುದು ಸೇರುದಂತೆ ಹಲವು ಮಹತ್ವದ ನಿರ್ಣಯಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಕೈಗೊಳ್ಳಲಾಯಿತು.

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಕುರಿತು ಮಹತ್ವದ ಸಭೆ ನಡೆಯಿತು. ಸಿಎಂ ಬಿಎಸ್​​ವೈ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆ ಡಿಜಿ-ಐಜಿಪಿ ಪ್ರವೀಣ್​​ ಸೂದ್, ಗುಪ್ತ ವಾರ್ತೆ ಅಪರ ಮುಖ್ಯ ಕಾರ್ಯದರ್ಶಿ ಬಿ.ದಯಾನಂದ್, ನಗರ ಪೊಲೀಸ್​ ಆಯುಕ್ತ ಕಮಲ್ ಪಂತ್, ಕಾನೂನು ಸುವ್ಯವಸ್ಥೆ ಅಪರ ಮಹಾನಿರ್ದೇಶಕ ಅಮರ್​ ಕುಮಾರ್ ಪಾಂಡೆ ಭಾಗಿಯಾಗಿದ್ದರು‌.

ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಎಲ್ಲಾ ಆಯಾಮದಲ್ಲಿಯೂ ಚರ್ಚೆ ನಡೆಸಲಾಯಿತು. ತನಿಖಾ ಹಂತದಲ್ಲಿ ಯಾವ ಲೋಪವೂ ಆಗಬಾರದು. ಆರೋಪಿಗಳು ತಪ್ಪಿಸಿಕೊಳ್ಳಬಾರದು ಎನ್ನುವುದು ಸೇರಿದಂತೆ ಹಲವು ಆಯಾಮಗಳಲ್ಲಿ ಚರ್ಚೆ ನಡೆಸಲಾಯಿತು.

ಸಭೆಯ ಪ್ರಮುಖ ಅಂಶಗಳು:

• ಬೆಂಗಳೂರು ನಗರದ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಸಂಭವಿಸಿದ ಗಲಭೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲು ಮಾಡುವ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ, ಈಗಾಗಲೇ ನೀಡಲಾಗಿರುವ ದೇಶದ ಉಚ್ಚ ನ್ಯಾಯಾಲಯದ ಆದೇಶದಂತೆ ಕ್ಲೇಮ್ ಕಮಿಷನರ್ ನೇಮಿಸಲು ಕೋರುವ ಬಗ್ಗೆ ತಿರ್ಮಾನಿಸಲಾಯಿತು.

• ಉಪಸ್ಥಿತರಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಈ ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು. ಅಲ್ಲದೆ ಈ ಪ್ರಕರಣಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(UAPA)ಯನ್ನು ಸಹ ಅಳವಡಿಸಿರುವುದರ ಬಗ್ಗೆ ತಿಳಿಸಲಾಯಿತು.

• ಈ ತನಿಖೆಗಳನ್ನು ತ್ವರಿತವಾಗಿ ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

• ಈಗಾಗಲೇ ದಾಖಲಾಗಿರುವ ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ ಮೂರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸಲಾಗುವುದು.

• ಈ ಅಪರಾಧ ಪ್ರಕರಣಗಳಲ್ಲಿ ಬಂಧಿತ ಆರೋಪಿಗಳಿಗೆ ಸಂಬಂಧಪಟ್ಟಂತೆ ಕೆಲವರ ವಿರುದ್ಧ ಗುಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.