ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಲಾಗುತ್ತಿದೆ. ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವ ಕುರಿತು ಮಹತ್ವದ ಸಭೆ ಆರಂಭವಾಗಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆರಂಭವಾಗಿರುವ ಮಹತ್ವದ ಸಭೆಯಲ್ಲಿ ಬೆಂಗಳೂರಿನ ಸಚಿವರು, ಮೂರು ಪಕ್ಷಗಳ ಶಾಸಕರು, ಸಂಸದರು ಭಾಗಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ವರ್ಚುಯಲ್ ಮೂಲಕ ಚರ್ಚೆ ನಡೆಸುತ್ತಿದ್ದಾರೆ.
ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅಬಕಾರಿ ಸಚಿವ ಕೆ.ಗೋಪಾಲಯ್ಯ, ವಸತಿ ಸಚಿವ ವಿ.ಸೋಮಣ್ಣ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಸಂಸದರಾದ ಬಚ್ಚೇಗೌಡ, ಪಿ.ಸಿ.ಮೋಹನ್, ಶಾಸಕರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಸತೀಶ್ ರೆಡ್ಡಿ, ಎಸ್.ಆರ್.ವಿಶ್ವನಾಥ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
![Meeting Vidhana Soudha about corona control](https://etvbharatimages.akamaized.net/etvbharat/prod-images/kn-bng-04-corona-meeting-script-7208083_19042021152717_1904f_1618826237_225.jpg)
ಓದಿ: ಸಿಎಂ ಆಸ್ಪತ್ರೆಯಲ್ಲಿದ್ದಾರೆ, ರಾಜ್ಯ ಸರ್ಕಾರ ಐಸಿಯುನಲ್ಲಿದೆ : ಸಿದ್ದರಾಮಯ್ಯ ಲೇವಡಿ
ಬೆಂಗಳೂರಿಗೆ ಯಾವ ರೀತಿ ಟಫ್ ರೂಲ್ಸ್ ಜಾರಿಗೊಳಿಸಬೇಕೆಂಬುದರ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ. ಸಚಿವರು, ಕಾಂಗ್ರೆಸ್, ಜೆಡಿಎಸ್ ಶಾಸಕರು ಹಲವು ಸಲಹೆಗಳನ್ನು ನೀಡುತ್ತಿದ್ದಾರೆ.