ಬೆಂಗಳೂರು: 2019-20 ನೇ ಸಾಲಿನ ಪಂಚಾಯತ್ ರಾಜ್ ಇಲಾಖೆಯ ಬಜೆಟ್ ಅನುಷ್ಠಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಭೆ ನಡೆಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಸಭೆ ನಡೆಸಿದ ಸಚಿವರು, 2019-20ನೇ ಸಾಲಿನ ಬಜೆಟ್ನಲ್ಲಿ ಇಲಾಖೆಗೆ ಘೋಷಣೆಯಾದ ಹಾಗೂ ಚಾಲ್ತಿಯಲ್ಲಿದ್ದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಹಾಗೂ 2020-21 ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.
ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ನರೇಗಾ ಆಯುಕ್ತ ಅನಿರುದ್ಧ ಶ್ರವಣ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಆಯುಕ್ತ ವಿಶಾಲ್, ಸಚಿವರ ವಿಶೇಷ ಅಧಿಕಾರಿ ಶ್ರೀ ಜಿ.ಜಯರಾಮ್ ಮತ್ತಿತರರು ಉಪಸ್ಥಿತರಿದ್ದರು.