ETV Bharat / state

ಮೇಕೆದಾಟು ವಿವಾದ, ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ: ಸಿಎಂ ವಿರುದ್ಧ ಗಜೇಂದ್ರ ಸಿಂಗ್ ಶೇಖಾವತ್ ಕಿಡಿ - ಗಜೇಂದ್ರ ಸಿಂಗ್ ಶೇಖಾವತ್

Mekedatu controversy: ''ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ'' ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

Gajendra Singh Shekhawat
ಗಜೇಂದ್ರ ಸಿಂಗ್ ಶೇಖಾವತ್
author img

By ETV Bharat Karnataka Team

Published : Oct 30, 2023, 10:22 AM IST

ಬೆಂಗಳೂರು: ''ಮೇಕೆದಾಟು ಯೋಜನೆ ವಿಚಾರದಲ್ಲಿ ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ, ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯ ಕರ್ಮವೆಂದು‌‌ ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು'' ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ @siddaramaiah ನವರೇ,
    ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.

    ಮೇಕೆದಾಟು ಯೋಜನೆಯ…

    — Gajendra Singh Shekhawat (@gssjodhpur) October 30, 2023 " class="align-text-top noRightClick twitterSection" data=" ">

''ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ, ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ. ಮೇಕೆದಾಟು ಯೋಜನೆಯ ಸ್ಥಿತಿ- ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ ಎಂದು ಕನ್ನಡದಲ್ಲೇ ಸಾಮಾಜಿಕ ಜಾಲತಾಣವಾದ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

''ಮೊದಲನೆಯದಾಗಿ ಸಿಡಬ್ಲ್ಯೂಎಂಎ ಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ, ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ. ಕಳಸಾ ಮತ್ತು ಬಂಡೂರಿ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ. ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ?'' ಎಂದು ಪ್ರಶ್ನಿಸಿದ್ದಾರೆ.

2017ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY)- ತ್ವರಿತ ನೀರಾವರಿ ಕಾರ್ಯಕ್ರಮದ ಅಡಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಸರಿಯಲ್ಲ. ಅಟಲ್ ಭೂ ಜಲ ಯೋಜನೆ ಅಡಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ, 28.10.2023ರ ವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ'' ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಬೆಳ್ಳಂ ಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ.. ದಾಖಲೆಗಳ ಪರಿಶೀಲನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.