ETV Bharat / state

ಮೇಕೆದಾಟು ಯೋಜನೆ.. ತಮಿಳುನಾಡು ನಿರ್ಣಯ ಖಂಡಿಸಿ ಸದನದಲ್ಲಿ ಸರ್ವಾನುಮತದ ನಿರ್ಣಯ - mekedatu project

ಕಣಿವೆ ರಾಜ್ಯಗಳ ನ್ಯಾಯಸಮ್ಮತ ಪಾಲನ್ನು ನಿರ್ಧರಿಸುವವರೆಗೆ ಗೋದಾವರಿ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೈ-ಗುಂಡಾರ್ ಜೋಡಣೆ ಯೋಜನೆಯ ಡಿಪಿಆರ್ ನ್ನು ಅಂತಿಮಗೊಳಿಸದಂತೆ ಹಾಗೂ ಕರ್ನಾಟಕ ಒಪ್ಪಿಗೆ ಪಡೆದೇ ಅನುಮೋದನೆ ನೀಡಬೇಕು ಹಾಗೂ ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳಿಗೆ ಅನುಮೋದನೆ ನೀಡದಂತೆ ಮತ್ತು ಆ ಯೋಜನೆಗಳನ್ನು ಮುಂದುವರಿಸದಂತೆ ನಿರ್ದೇಶಿಸಲು ಸಂಬಂಧಪಟ್ಟ ಕೇಂದ್ರದ ಸಂಸ್ಥೆಗಳನ್ನು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು.

ತ.ನಾಡು ನಿರ್ಣಯ ಖಂಡಿಸಿ ಸದನದಲ್ಲಿ ಸರ್ವಾನುಮತದ ನಿರ್ಣಯ

author img

By

Published : Mar 24, 2022, 6:12 PM IST

Updated : Mar 24, 2022, 7:33 PM IST

ಬೆಂಗಳೂರು: ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯ ಖಂಡಿಸಿ ಹಾಗೂ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೈ-ಗುಂಡಾರ್ ಜೋಡಣೆ ಯೋಜನೆಗೆ ವಿರೋಧಿಸಿ ಸದನದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು. ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ನಿರ್ಣಯವನ್ನು ಮಂಡನೆ ಮಾಡಿದರು. ಅದರಂತೆ ತಮಿಳುನಾಡು ರಾಜ್ಯಕ್ಕೆ ಯಾವುದೇ ಹಾನಿಯಾಗದ ಮೇಕೆದಾಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಖಂಡನೆ ಮಾಡಲಾಯಿತು. ಮೇಕೆದಾಟು ಯೋಜನೆಗೆ ಈ ಕೂಡಲೇ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗ (Central Water Commission) ಹಾಗೂ ಪರಿಸರ ಮತ್ತು ಅರಣ್ಯ ಮಂತ್ರಾಲಯ (MoEF)ಕ್ಕೆ ಒತ್ತಾಯ ಮಾಡಲಾಯಿತು.

ಕಣಿವೆ ರಾಜ್ಯಗಳ ನ್ಯಾಯಸಮ್ಮತ ಪಾಲನ್ನು ನಿರ್ಧರಿಸುವವರೆಗೆ ಗೋದಾವರಿ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೈ-ಗುಂಡಾರ್ ಜೋಡಣೆ ಯೋಜನೆಯ ಡಿಪಿಆರ್ ನ್ನು ಅಂತಿಮಗೊಳಿಸದಂತೆ ಹಾಗೂ ‌ಕರ್ನಾಟಕ ಒಪ್ಪಿಗೆ ಪಡೆದೇ ಅನುಮೋದನೆ ನೀಡಬೇಕು ಹಾಗೂ ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳಿಗೆ ಅನುಮೋದನೆ ನೀಡದಂತೆ ಮತ್ತು ಆ ಯೋಜನೆಗಳನ್ನು ಮುಂದುವರಿಸದಂತೆ ನಿರ್ದೇಶಿಸಲು ಸಂಬಂಧಪಟ್ಟ ಕೇಂದ್ರದ ಸಂಸ್ಥೆಗಳನ್ನು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಯಿತು.

ನಿರ್ಣಯ ಮಂಡನೆಯಲ್ಲಿ ಕರ್ನಾಟಕ ರಾಜ್ಯ ಯೋಜಿಸಿರುವ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸಿ, ಮಾರ್ಚ್ 21, 2022 ರಂದು ತಮಿಳುನಾಡು ವಿಧಾನ ಸಭೆಯು ಸಭ್ಯವಲ್ಲದ ಭಾಷೆಯಲ್ಲಿ ಅಂಗೀಕರಿಸಿದ ಒಕ್ಕೂಟ ವಿರೋಧಿ ಮತ್ತು ಸಮರ್ಥನೀಯವಲ್ಲದ ನಿರ್ಣಯವನ್ನು ಮತ್ತು ತಮಿಳುನಾಡು ರಾಜ್ಯ ತನ್ನ ಪ್ರಾದೇಶಿಕ ವ್ಯಾಪ್ತಿಯಲ್ಲಿ ಏಕಪಕ್ಷೀಯವಾಗಿ ಯೋಜಿಸಿರುವ ಕಾನೂನುಬಾಹಿರ ಯೋಜನೆಗಳನ್ನು ಸಹ ಈ ಸದನವು ಗಣನೆಗೆ ತೆಗೆದುಕೊಂಡಿರುತ್ತದೆ. ಸರ್ವೋಚ್ಚ ನ್ಯಾಯಾಲಯ ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ತೀರ್ಪನ್ನು ಮಾರ್ಪಡಿಸಿ ಸಾಮಾನ್ಯ ಜಲ ವರ್ಷದಲ್ಲಿ ಬಿಳಿಗುಂಡ್ಲುವಿನಲ್ಲಿ 177.25 ಟಿಎಂಸಿ ನೀರಿನ ಪ್ರಮಾಣವನ್ನು ಖಚಿತಪಡಿಸುವಂತೆ ನಿಗದಿಪಡಿಸಿದೆ. ಸರ್ವೋಚ್ಚ ನ್ಯಾಯಾಲಯವು ಹಂಚಿಕೆ ಮಾಡಿರುವಂತೆ ಬೆಂಗಳೂರು ಮೆಟ್ರೋಪಾಲಿಟನ್ ನಗರದ ಕುಡಿಯುವ ನೀರಿನ ಅಗತ್ಯತೆಗೆ 24 ಟಿಎಂಸಿ (4.75 ಟಿಎಂಸಿ consumptive use) ನೀರನ್ನು ಸುಸ್ಥಿರಗೊಳಿಸಲು ಹಾಗೂ ತತ್ಪರಿಮಾಣವಾಗಿ ಜಲವಿದ್ಯುತ್ ಉತ್ಪಾದನೆಗೆ ಅಂತರ್-ರಾಜ್ಯ ನದಿ ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ಯೋಜಿಸಲಾಗಿದೆ. ಸದರಿ ಯೋಜನೆಯಿಂದ ತಮಿಳುನಾಡು ರಾಜ್ಯಕ್ಕೆ ಯಾವುದೇ ಬಾಧಕ ಅಥವಾ ಹಾನಿಯಾಗುವುದಿಲ್ಲ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ತಮಿಳುನಾಡು ನಿರ್ಣಯ ಖಂಡಿಸಿ ಸದನದಲ್ಲಿ ಸರ್ವಾನುಮತದ ನಿರ್ಣಯ

ಇದನ್ನೂ ಓದಿ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಶ್ರೀಲಂಕಾ: ಪಠ್ಯ ಪುಸ್ತಕ ಮುದ್ರಣಕ್ಕೂ ನೂರೆಂಟು ಅಡ್ಡಿ

ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ನಿರ್ಮಿಸಲು ಕರ್ನಾಟಕ ರಾಜ್ಯವು ತನ್ನ ಸಾಂವಿಧಾನಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿದೆ. ರಾಷ್ಟ್ರೀಯ ಜಲ ನೀತಿಯೂ ಸಹ ಕುಡಿಯುವ ನೀರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತದೆ. ಈ ಕುಡಿಯುವ ನೀರಿನ ಯೋಜನೆಯಿಂದ ನ್ಯಾಯಾಧಿಕರಣದ ಆದೇಶವನ್ನು ಯಾವುದೇ ರೀತಿಯಲ್ಲಿ ಉಲ್ಲಂಘಿಸುವುದಿಲ್ಲ. ಕರ್ನಾಟಕದ ಪ್ರಾದೇಶಿಕ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಾವೇರಿ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಮೂಲಕ ತಮಿಳುನಾಡು ರಾಜ್ಯವು ಏಕಪಕ್ಷೀಯವಾಗಿ ಹಲವಾರು ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗಳಲ್ಲಿ ಕುಂದಾ PSP, ಸಿಲ್ಲಹಳ್ಳ PSP, ಹೊಗೇನಕಲ್ ಹಂತ-II, ಕಾವೇರಿ (ಕಟ್ಟಲೈ)-ವೈಗೈ- ಗುಂಡಾರ್ ಜೋಡಣೆ, ಇತ್ಯಾದಿಗಳು ಒಳಗೊಂಡಿವೆ ಎಂದು ವಿವರಿಸಲಾಗಿದೆ.

ಪೆನಿನ್ಸುಲರ್ ರಿವರ್ ಡೆವಲಪ್‌ಮೆಂಟ್ (Peninsular River Development) ಯೋಜನೆಯಡಿಯಲ್ಲಿ ಗೋದಾವರಿ ಹೆಚ್ಚುವರಿ ನೀರನ್ನು ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೈ-ಗುಂಡಾರ್ ಯೋಜನೆಗೆ ತಿರುವುಗೊಳಿಸುವ ವಿಸ್ತೃತ ಯೋಜನಾ ವರದಿಯನ್ನು ಕರ್ನಾಟಕ ರಾಜ್ಯವು ಸೇರಿದಂತೆ ಕಣಿವ ರಾಜ್ಯಗಳ ನೀರಿನ ಪಾಲನ್ನು ನಿರ್ಧರಿಸುವವರೆಗೆ ಅನುಮೋದಿಸಕೂಡದು. ತಮಿಳುನಾಡು ರಾಜ್ಯ, ಕರ್ನಾಟಕ ರಾಜ್ಯದ ಮೇಕೆದಾಟು ಯೋಜನೆಗೆ ತನ್ನ ಒಪ್ಪಿಗೆಯನ್ನು ಪಡೆಯಬೇಕೆಂದು ಕೋರಿದೆ. ಅದರೆ ಅದೇ ಸಮಯದಲ್ಲಿ ತಮಿಳುನಾಡು ರಾಜ್ಯವು ಕರ್ನಾಟಕದ ರಾಜ್ಯದ ಒಪ್ಪಿಗೆಯನ್ನು ಕೋರದೆ ಏಕಪಕ್ಷೀಯವಾಗಿ ಕಾನೂನುಬಾಹಿರ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸುತ್ತಿದೆ. ತಮಿಳುನಾಡಿನ ಕಾನೂನುಬಾಹಿರ ಯೋಜನೆಗಳನ್ನು ನಾವು ಬಲವಾಗಿ ಖಂಡಿಸುತ್ತಾ, ಎಲ್ಲಾ ವೇದಿಕೆಗಳಲ್ಲಿ ಅವುಗಳನ್ನು ವಿರೋಧಿಸುತ್ತೇವೆ ಎಂದು ಸರ್ಕಾರ ಹೇಳಿದೆ.

Last Updated : Mar 24, 2022, 7:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.