ETV Bharat / state

ಕಲಾಪದಲ್ಲಿ ಕಂದಾಯ ಇಲಾಖೆ ಕಾರ್ಯ ವೈಖರಿಗೆ ಆಡಳಿತ ಪಕ್ಷದ ಸದಸ್ಯರಿಂದಲೇ ಅಸಮಾಧಾನ

ಪಹಣಿ ಎಂಟ್ರಿ ಸಾಫ್ಟ್​ವೇರ್‌ ಕಳೆದ ಒಂದು ವರ್ಷದಿಂದ ಹಾಳಾಗಿದೆ. ಯಾವಾಗ ಸರಿಯಾಗಲಿದೆ ಎಂದು ಶೃಂಗೇರಿ ಶಾಸಕ ರಾಜೇಗೌಡ ಕೇಳಿದ ಪ್ರಶ್ನೆಗೆ, ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ್ ಆದಷ್ಟು ಬೇಗ ಸರಿಪಡಿಸುವ ಭರವಸೆ ನೀಡಿದರು. ಇದಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ನಿಮ್ಮ ಅಧಿಕಾರಿಗಳು ಹೇಳಿದ್ದನ್ನು ಓದಿದರೆ ಸಮಸ್ಯೆ ಬಗೆಹರಿಯುವುದಿಲ್ಲ ಎಂದರು.

ಕಲಾಪದಲ್ಲಿ ಕಂದಾಯ ಇಲಾಖೆ ಕಾರ್ಯ ವೈಖರಿಗೆ ಅಸಮಾಧಾನ

author img

By

Published : Dec 7, 2020, 3:31 PM IST

ಬೆಂಗಳೂರು: ಇಂದಿನಿಂದ ಚಳಿಗಾಲ ಅಧಿವೇಶನ ಆರಂಭಗೊಂಡಿದ್ದು, ವಿಧಾನಸಭೆ ಕಲಾಪದ ಮೊದಲ ದಿನವೇ ಕಂದಾಯ ಇಲಾಖೆ ಕಾರ್ಯ ವೈಖರಿಗೆ ಅಸಮಾಧಾನ ವ್ಯಕ್ತವಾಗಿದೆ. ಕಂದಾಯ ಇಲಾಖೆಯ ವಿರುದ್ಧ ಆಡಳಿತ ಪಕ್ಷದ ಸದಸ್ಯರೇ ಅಸಮಾಧಾನ ಹೊರಹಾಕಿದರು.

ಕಂದಾಯ ಗ್ರಾಮಗಳನ್ನು ಗುರುತಿಸಿ ಹಕ್ಕು ಪತ್ರ ನೀಡುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಶಾಸಕರೇ ಕಂದಾಯ ಸಚಿವ ಆರ್. ಅಶೋಕ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಘಟನೆ ವಿಧಾನಸಭೆ ಅಧಿವೇಶನದಲ್ಲಿ ಇಂದು ನಡೆಯಿತು.

ಕಲಾಪದಲ್ಲಿ ಕಂದಾಯ ಇಲಾಖೆ ಕಾರ್ಯ ವೈಖರಿಗೆ ಅಸಮಾಧಾನ

ಪ್ರಶ್ನೋತ್ತರ ವೇಳೆ ಬಿಜೆಪಿ ಶಾಸಕ ಅಶೋಕ್ ನಾಯಕ್ ಕೆ.ಬಿ. ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಉತ್ತರ ತೃಪ್ತಿ ತಂದಿಲ್ಲವೆಂದು ಶಾಸಕರು ಹೇಳಿದರು. ಆಗ, ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಮತ್ತಿತರರು ಸಚಿವ ಅಶೋಕ್ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆಗ ಯಾರೂ ಸಹ ಸಚಿವರ ಬೆಂಬಲಕ್ಕೆ ಬರಲಿಲ್ಲ. ಕಂದಾಯ ಗ್ರಾಮಗಳನ್ನು ಗುರುತಿಸಿ ಹಕ್ಕು ಪತ್ರ ನೀಡುವಲ್ಲಿ ವಿಫಲವಾಗಿರುವ ವಿಚಾರ ಚರ್ಚೆಯಾಯಿತು. ಈ ವೇಳೆ ಕಂದಾಯ ಗ್ರಾಮಗಳನ್ನು ಗುರುತಿಸಿ ಆದೇಶ ಕೊಡುವಲ್ಲಿ ಇಲಾಖೆ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಬಹುತೇಕ ಜಿಲ್ಲೆಗಳ ಡಿಸಿಗಳು ಕಂದಾಯ ಗ್ರಾಮಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಈ ಬಗ್ಗೆ ಒಂದು ಕಾನೂನು ಇದೆ ಎಂಬುದು ಜಿಲ್ಲಾಧಿಕಾರಿಗಳಿಗೆ ಗೊತ್ತಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಸದನದಲ್ಲಿ ಪ್ರಸ್ತಾಪಿಸಿದರು. ಜೆಡಿಎಸ್ ಶಾಸಕರು ಸಹ ಕಂದಾಯ ಗ್ರಾಮಗಳ ಬಗ್ಗೆ ಪ್ರಸ್ತಾಪಿಸಿ ಬೇಸರ ಹೊರಹಾಕಿದರು.

ಇದಕ್ಕೆ ಸಭಾಧ್ಯಕ್ಷ ಕಾಗೇರಿ ಅವರು, ನೀವು ನಿಮ್ಮ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿ. ಕೆಳ ಹಂತದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ಕೊಡಿ. ಆದ ಕಾರಣ ನಿಮ್ಮ ಅಧಕಾರಿಗಳಿಂದ ಸಮರ್ಪಕ ವರದಿ ಪಡೆದುಕೊಂಡು ಮಾಹಿತಿ ಕೊಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್‌ಗೆ ಸೂಚಿಸಿದರು.

ಸಭಾಧ್ಯಕ್ಷ ಕಾಗೇರಿ ಅವರ ಮಾತಿಗೆ ಒಪ್ಪಿಗೆ ನೀಡಿದ ಕಂದಾಯ ಸಚಿವ ಆರ್​.ಅಶೋಕ್, ಕಂದಾಯ ಗ್ರಾಮಗಳನ್ನು ಗುರುತಿಸಿ ಹಕ್ಕು ಪತ್ರ ಕೊಡುವುದಾಗಿ ಭರವಸೆ ನೀಡಿದರು. ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡುವ ಪ್ರಕ್ರಿಯೆ ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಈಗಾಗಲೇ 800 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಪ್ರತಿ ತಿಂಗಳು ಕಂದಾಯ ಗ್ರಾಮಗಳನ್ನು ಘೋಷಣೆ ಮಾಡಲಾಗುವುದು. ಬಾಕಿ ಉಳಿದಿರುವ ಪ್ರಸ್ತಾವನೆ ಕಳುಹಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗುವುದು. ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲು ನಿರಂತರವಾಗಿ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಈ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ. 1,490 ಪ್ರಸ್ತಾವನೆಗಳು ಬಂದಿವೆ. ಅರಣ್ಯ ಭೂಮಿಯಲ್ಲಿ ಕಂದಾಯ ಭೂಮಿಯಾಗಿ ಘೋಷಣೆ ಮಾಡಲು ಸಮಸ್ಯೆ ಇದೆ. 9.5 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ವಿವಾದವಿದೆ. ಈ ಕುರಿತಂತೆ ಅರಣ್ಯ ಸಚಿವರೊಂದಿಗೆ ಸಭೆ ನಡೆಸಲಾಗಿದ್ದು, 6.5 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿವರಿಸಿದರು.

ಪಹಣಿ ಎಂಟ್ರಿ ಸಾಫ್ಟ್​ವೇರ್‌ ಸಮಸ್ಯೆ: ಇದೆ ವೇಳೆ, ಪಹಣಿ ಎಂಟ್ರಿ ಸಾಫ್ಟ್​ವೇರ್‌ ಕಳೆದ ಒಂದು ವರ್ಷದಿಂದ ಹಾಳಾಗಿದೆ. ಯಾವಾಗ ಸರಿಯಾಗಲಿದೆ ಎಂದು ಶೃಂಗೇರಿ ಶಾಸಕ ರಾಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ್ ಆದಷ್ಟು ಬೇಗ ಸರಿಪಡಿಸುವ ಭರವಸೆ ನೀಡಿದರು. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಧ್ಯಪ್ರವೇಶಿಸಿ, ನಿಮ್ಮ ಅಧಿಕಾರಿಗಳು ಹೇಳಿದ್ದನ್ನು ಓದಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ನೀವು ಜವಾಬ್ದಾರಿಯುತ ಇಲಾಖೆಯಲ್ಲಿದ್ದೀರಿ, ಅದರಲ್ಲೂ ನೀವು ಬಹಳಷ್ಟು ಅನುಭವ ಇರುವವರು. ರೈತರು ತುಂಬಾ ಸಮಸ್ಯೆ ಅನುಭವಿಸುತ್ತಿದ್ದಾರೆ. ರೈತರಿಗೆ ಸಹಕಾರ ಸಂಘಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಆದಷ್ಟು ಬೇಗ ಆ ಸಾಫ್ಟ್​ವೇರ್​ ಸರಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.