ETV Bharat / state

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಿದ ವಿವಿಧ ದಲಿತ ಸಂಘಟನೆ ಸದಸ್ಯರು - ಈಟಿವಿ ಭಾರತ ಕರ್ನಾಟಕ

ಕೆಪಿಸಿಸಿ ಕಚೇರಿಯಲ್ಲಿಂದು ವಿವಿಧ ದಲಿತ ಸಂಘಟನೆ ಮುಖಂಡರನ್ನು ಕೆಪಿಸಿಸಿ ಎಸ್​ಸಿ ಘಟಕದ ಅಧ್ಯಕ್ಷ ಧರ್ಮಸೇನಾ​ ಪಕ್ಷಕ್ಕೆ ಬರಮಾಡಿಕೊಂಡರು.

members-of-various-dalit-organizations-joined-to-congress-party
ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಿದ ವಿವಿಧ ದಲಿತ ಸಂಘಟನೆ ಸದಸ್ಯರು
author img

By

Published : May 6, 2023, 3:15 PM IST

ಬೆಂಗಳೂರು: ವಿವಿಧ ದಲಿತ ಸಂಘಟನೆ ಮುಖಂಡರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಎಸ್​ಸಿ ಘಟಕದ ಅಧ್ಯಕ್ಷ ಧರ್ಮಸೇನಾ, ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕೃಷ್ಣಪ್ಪ, ಭೀಮ್ ಪ್ರಜಾಸಂಘದ ರಾಜ್ಯಾಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್, ಕರ್ನಾಟಕ ಸಮಗ್ರ ಸೈನಿಕ ದಳ ಮಹಿಳಾ ಅಧ್ಯಕ್ಷರಾದ ಕಮಲಮ್ಮ, ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸೇರಿದಂತೆ ರಾಜ್ಯದ ವಿವಿಧ ದಲಿತ ಸಂಘಟನೆ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಧರ್ಮಸೇನಾ, "ಇಂದು ದಲಿತರೆಲ್ಲರೂ ಒಗ್ಗೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಲಿತರ ಏಳಿಗೆ, ಅಭಿವೃದ್ಧಿಗೆ ಕಂಟಕ, ಅಪಾಯ ಎದುರಾದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ದಲಿತರಿಗೆ ಚೈತನ್ಯ ತುಂಬಿದೆ. ಇನ್ನು ಪರಮೇಶ್ವರ್ ಅವರನ್ನು ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದೆ. ಆ ಮೂಲಕ ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಸ್ಥಾನಮಾನ ನೀಡಿ ಸಮುದಾಯಕ್ಕೆ ಶಕ್ತಿ ತುಂಬಲಾಗಿದೆ" ಎಂದು ತಿಳಿಸಿದರು.

ಈ ರಾಜ್ಯದಲ್ಲಿ ಅಂಬೇಡ್ಕರ್ ಅವರ ಹೆಸರಿನಲ್ಲಿ ಸುಮಾರು 20 ಸಾವಿರ ಸಂಘಟನೆಗಳಿವೆ. ನಾನು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷನಾಗಿ ನೇಮಕಗೊಂಡ ನಂತರ ದಲಿತರ ನಡೆ ಕಾಂಗ್ರೆಸ್ ಕಡೆ ಎಂಬ ಕಾರ್ಯಕ್ರಮದ ಮೂಲಕ ಸ್ಥಳೀಯ ಮಟ್ಟದಲ್ಲಿ ಒಬ್ಬರೇ ಆದರೂ ಅವರನ್ನು ನೀರ್ಲಕ್ಷಿಸದೇ ದಲಿತ ಸಮುದಾಯದವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತರಬೇಕು ಎಂದು ನಮ್ಮ ಘಟಕದ ಎಲ್ಲ ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದೆ ಎಂದು ಹೇಳಿದರು.

ಇದನ್ನೂ ಓದಿ:ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಶತಸಿದ್ಧ: ಹಿಮಾಚಲ ಪ್ರದೇಶ ಸಿಎಂ

ಕಳೆದ ಒಂದು ವರ್ಷಗಳಿಂದ ಇದೇ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ದಲಿತರಿಗಾಗಿ ಕಾಂಗ್ರೆಸ್ ಈಗಾಗಲೇ 10 ವಿಶೇಷ ಕಾರ್ಯಕ್ರಮ ಪ್ರಕಟಿಸಿದೆ. ಇದರ ಹೊರತಾಗಿ ದಲಿತರ ಸಮಸ್ಯೆ ಏನೇ ಇದ್ದರೂ ಅದನ್ನು ಬಗೆಹರಿಸಲು ಕಾಂಗ್ರೆಸ್ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರುತ್ತಿರುವ ಎಲ್ಲರನ್ನೂ ಪಕ್ಷಕ್ಕೆ ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ನಮ್ಮ ನೆಚ್ಚಿನ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹತ್ಯೆಗೆ ಸಂಚು ರೂಪಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇನ್ನು ಪರಮೇಶ್ವರ್ ಅವರ ತಲೆಗೆ ಕಲ್ಲೇಟು ಬಿದ್ದಿದೆ. ಈ ದಾಳಿ ಯಾರಿಂದ ಆಗಿದೆ ಎಂದು ಪತ್ತೆಹಚ್ಚಲು ಸರ್ಕಾರ ವಿಫಲವಾಗಿದೆ. ದೊಡ್ಡ ನಾಯಕರ ಪರಿಸ್ಥಿತಿ ಹೀಗಾದರೆ ಹಳ್ಳಿಗಳಲ್ಲಿರುವ ದಲಿತರ ಪರಿಸ್ಥಿತಿ ಏನು? ಖರ್ಗೆ ಅವರ ಹತ್ಯೆಗೆ ಸಂಚು ರೂಪಿಸಿರುವ ವಿಚಾರ ಖಂಡನೀಯ. ಈ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣಾ ಆಯೋಗ ಈ ವಿಚಾರದಲ್ಲಿ ಸೂಕ್ತ ಕ್ರಮಕೈಗೊಂಡು ದಲಿತರ ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆ, ಕುಟುಂಬಸ್ಥರ ಹತ್ಯೆಗೆ ಬಿಜೆಪಿ ನಾಯಕನ ಸಂಚು: ಸುರ್ಜೇವಾಲ ಗಂಭೀರ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.