ಬೆಂಗಳೂರು: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಪ್ರವೀಣ್ ಶೆಟ್ಟಿ ಮತ್ತು ಬಣದಿಂದ ಪಂಜಿನ ಮೆರವಣಿಗೆ ಕೈಗೊಳ್ಳಲಾಯಿತು. ಕನ್ನಡ ಬಾವುಟ ಧ್ವಂಸ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಹಿನ್ನೆಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಹಾಗೂ ಸಂಘಟನೆ ನಿಷೇಧಿಸಬೇಕೆಂದು ಒತ್ತಾಯಿಸಿ ಡಿ.31 ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆೆ ಬೆಂಬಲಿಸುವಂತೆ ಪಂಜಿನ ಮೆರವಣಿಗೆ ಮೂಲಕ ಕರವೇ ಕಾರ್ಯಕರ್ತರು ಮನವಿ ಮಾಡಿದರು.
ರಾಮಮೂರ್ತಿ ನಗರದ ಮುಖ್ಯ ರಸ್ತೆಯಲ್ಲಿ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕರ್ತರು ಬಂದ್ಗೆ ಸಹಕರಿಸುವಂತೆ ಪಂಜಿನ ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ವಿನಂತಿಸಿಕೊಂಡರು. ಈ ವೇಳೆ ಪ್ರವೀಣ್ ಶೆಟ್ಟಿ ಮಾತನಾಡಿ ಬಂದ್ಗೆ ಬೆಂಬಲಿಸಿ ಎಂದು ಮನವಿ ಮಾಡಿಕೊಂಡರು.
ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು ಪಂಜಿನ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಉದ್ಧವ್ ಠಾಕ್ರೆಯ ಭೂತ ದಹನ ಮಾಡಲಾಗಿದೆ. ಎಂಇಎಸ್ ನಿಷೇಧ ಬಗ್ಗೆ ಕೇಂದ್ರ ಸರ್ಕಾರದ ಜೊತೆ ರಾಜ್ಯದ ಸಂಸದರು ಮಾತನಾಡಬೇಕು. ಪೊಲೀಸರ ವಾಹನಗಳಿಗೆ ಬೆಂಕಿ ಹಾಕುವುದು ಹಾಗೂ ಕನ್ನಡಿಗರ ಮೇಲೆ ದಾಳಿ ನಡೆಸುವುದು ಸಹಿಸಲ್ಲ ಎಂದರು.
ರಾಜ್ಯ ಸರ್ಕಾರಕ್ಕೆ ಡಿ. 30 ತನಕ ಗಡುವು ನೀಡಲಾಗಿದೆ. ಈ ಬಗ್ಗೆ ಸರ್ಕಾರ ನಿರ್ದಾರ ತೆಗದುಕೊಳ್ಳಲಿ. ಸರ್ಕಾರ ಎಂಇಎಸ್ ಬ್ಯಾನ್ ಮಾಡಿದರೆ ಬಂದ್ ನ ಹಿಂಪಡೆಯುತ್ತೇವೆ. ಎಂಇಎಸ್ ನ ಗೂಂಡಾಗಿರಿ ಈ ನೆಲದಲ್ಲಿ ಇರಬಾರದು.ಕರ್ನಾಟಕ ಬಂದ್ಗೆ ಹಲವು ಸಂಘಟನೆಗಳು ಬೆಂಬಲವನ್ನು ಸೂಚಿಸಿವೆ ಎಂದರು.