ETV Bharat / state

Rain alert: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ.. ಈ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ - etv bharat kannada

ಹವಾಮಾನ ಇಲಾಖೆ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

meteorological-department-announced-yellow-alert-to-6-districts-due-to-rain
ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ.. 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
author img

By ETV Bharat Karnataka Team

Published : Sep 3, 2023, 5:47 PM IST

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 7ನೇ ತಾರೀಖಿನವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ನೀಡಿದೆ. ಮುಖ್ಯವಾಗಿ ಉತ್ತರ ಒಳನಾಡಿನ ಆರು ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಸೆ. 3 ಮತ್ತು 4 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ ಜಿಲ್ಲೆಗಳಿಗೆ ಇಂದು ಮತ್ತು ರಾಯಚೂರು ಜಿಲ್ಲೆಗೆ ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೊಂಚ ವಿರಾಮ ನೀಡಿರುವ ಮಳೆರಾಯ ಸೆಪ್ಟೆಂಬರ್ 6 ಮತ್ತು 7ರಂದು ಭೋರ್ಗರೆಯಲ್ಲಿದ್ದಾನೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಮತ್ತು ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಸೆ. 6 ಮತ್ತು 7 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ ಇಲ್ಲ: ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಇಂದು ಮಳೆಯಾಗಿದೆ. ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯು ಬರುವ ಸಾಧ್ಯತೆ ಇದೆ. ಆದರೆ ಈ ದಿನಗಳಲ್ಲಿ ಮೀನುಗಾರರಿಗೆ ಯಾವುದೇ ಎಚ್ಚರಿಕೆಯನ್ನು ನೀಡಲಾಗಿಲ್ಲ.

ಸಿಲಿಕಾನ್ ಸಿಟಿಯಲ್ಲೂ ಮಳೆ: ಮುಂದಿನ 24 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಬಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್​ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಒಡಿಶಾದಲ್ಲಿ ಭಾರಿ ಮಳೆ: ಸಿಡಿಲು ಬಡಿದು 10 ಮಂದಿ ಸಾವು, ಮೂವರಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.