ಬೆಂಗಳೂರು : ರಾಜ್ಯದ 20 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾವೇರಿ, ಕೊಪ್ಪಳ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆಯಾಯ ಜಿಲ್ಲಾಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದೆ.
ರಾಜ್ಯದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ ಕೊಪ್ಪಳ ಮತ್ತು ಗದಗ ಜಿಲ್ಲೆಯಲ್ಲಿ ಮಳೆಯಾಗಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ ಎಂದು ಹೇಳಿದೆ.
ಏಪ್ರಿಲ್ 9 ಮತ್ತು 10ರಂದು ಮತ್ತೆ ಮಳೆ: ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಏಪ್ರಿಲ್ 9 ಮತ್ತು 10ರಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜಿಲ್ಲಾಧಿಕಾರಿಗಳು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಗೋಕರ್ಣದಲ್ಲಿ ಹೆಚ್ಚಿದ ಕಸದ ರಾಶಿ: ರಾಷ್ಟ್ರೀಯ ಹಸಿರು ನ್ಯಾಯ ಪೀಠದಿಂದ ನೋಟಿಸ್