ETV Bharat / state

ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗರಿಷ್ಠ ಉಷ್ಣಾಂಶ : ಇಲ್ಲಿದೆ ಮಳೆ ಮಾಹಿತಿ - Rain on the state's coast

ಪ್ರಬಲ ಯಾಸ್ ಚಂಡಮಾರುತವು ಬಂಗಾಳ ಉಪಸಾಗರದಲ್ಲಿದ್ದು, ಮತ್ತಷ್ಟು ತೀವ್ರಗೊಳ್ಳಲಿದೆ. ಮೇ‌ 26 ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದೆ..

Rain
ಮಳೆ
author img

By

Published : May 25, 2021, 6:56 PM IST

Updated : May 25, 2021, 7:13 PM IST

ಬೆಂಗಳೂರು : ರಾಜ್ಯದ ಕರಾವಳಿಯಲ್ಲಿ ಮೇ 25 ರಿಂದ ಮೇ 29ರವರೆಗೆ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ನಿರ್ದೇಶಕ ಸಿ. ಎಸ್ ಪಾಟೀಲ್ ಮಾತನಾಡಿದರು

ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ಮೆಜೆಸ್ಟಿಕ್, ಗಾಂಧಿನಗರ ಭಾಗಗಳಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಂಟಿಗ್ರೇಡ್, ಕನಿಷ್ಟ ಉಷ್ಣಾಂಶ 21 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದರು.

ಪ್ರಬಲ ಯಾಸ್ ಚಂಡಮಾರುತವು ಬಂಗಾಳ ಉಪಸಾಗರದಲ್ಲಿದ್ದು, ಮತ್ತಷ್ಟು ತೀವ್ರಗೊಳ್ಳಲಿದೆ. ಮೇ‌ 26 ರಂದು ಒರಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದೆ.

ದಾವಣಗೆರೆ 7 ಸೆಂ.ಮೀ, ಯಲ್ಲಾಪುರ 6 ಸೆಂ.ಮೀ, ಬೀದುರ್ಗ 5 ಸೆಂ.ಮೀ, ಬಂಚನಹಳ್ಳಿ ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ಸೆಂ.ಮೀ ಮಳೆಯಾಗಿದೆ.

ಓದಿ: ನಿವೃತ್ತಿಗೆ 5 ದಿನ ಇದ್ದಾಗ ಪಿಎಸ್ಐ ನಿಧನ.. ಇವರ ತಲೆ, ಕಣ್ಣಲ್ಲಿತ್ತು ವೀರಪ್ಪನ್ ಹಾರಿಸಿದ್ದ ಬುಲೆಟ್ಸ್..

Last Updated : May 25, 2021, 7:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.