ETV Bharat / state

ನಾಳೆಯಿಂದ ವಿಧಾನಮಂಡಲ ಅಧಿವೇಶನ : ಪ್ರತಿಧ್ವನಿಸಲಿದೆ ಶಾಸಕರ ರಾಜೀನಾಮೆ ಪ್ರಹಸನ - kannada news

ಆಡಳಿತ ಪಕ್ಷದ ಶಾಸಕರ ರಾಜೀನಾಮೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಬಿಜೆಪಿ ಈಗಾಗಲೇ ಪಟ್ಟುಹಿಡಿದು ಹೋರಾಟ ಮುಂದುವರಿಸಿದೆ.

ವಿಧಾನಮಂಡಲ ಅಧಿವೇಶನ
author img

By

Published : Jul 11, 2019, 9:09 PM IST

ಬೆಂಗಳೂರು : ಮೈತ್ರಿ ಸರ್ಕಾರದ ಶಾಸಕರ ಸರಣಿ ರಾಜೀನಾಮೆ ನಡುವೆಯೂ ನಾಳೆಯಿಂದ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗುತ್ತಿದೆ.

ರಾಜ್ಯದ ಜ್ವಲಂತ ಸಮಸ್ಯೆಗಳಿಗಿಂತ ವಿಧಾನಮಂಡಲದಲ್ಲಿ ರಾಜ್ಯ ರಾಜಕೀಯ ವಿದ್ಯಮಾನಗಳ ವಿಚಾರವೇ ಹೆಚ್ಚು ಪ್ರಸ್ತಾಪವಾಗುವ ಸಾಧ್ಯತೆ ಇದೆ. ಆಡಳಿತ ಪಕ್ಷದ ಶಾಸಕರ ರಾಜೀನಾಮೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಬಿಜೆಪಿ ಈಗಾಗಲೇ ಪಟ್ಟುಹಿಡಿದು ಹೋರಾಟ ಮುಂದುವರಿಸಿದೆ.

ದಿನದಿಂದ ದಿನಕ್ಕೆ ಮೈತ್ರಿ ಸರ್ಕಾರದ ಸಂಕಷ್ಟ ಹೆಚ್ಚಾಗುತ್ತಿದ್ದು, ಸರ್ಕಾರವನ್ನು ಉಳಿಸಿಕೊಳ್ಳಲು ಜೆಡಿಎಸ್-ಕಾಂಗ್ರೆಸ್ ನಾಯಕರು ನಿರಂತರ ಹರಸಾಹಸ ನಡೆಸುತ್ತಿದ್ದಾರೆ. ರಾಜೀನಾಮೆ ನೀಡಿರುವ ಅತೃಪ್ತ ಶಾಸಕರ ಮನವೊಲಿಸುವ ಪ್ರಯತ್ನ ಒಂದೆಡೆ ನಡೆದಿದ್ದರೆ, ಮತ್ತೊಂದೆಡೆ ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಕಾನೂನು ಹೋರಾಟಕ್ಕೆ ಆಡಳಿತ ಪಕ್ಷ ಮುಂದಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು, ನಾಳೆಯಿಂದ ಜುಲೈ 26ರ ವರೆಗೆ ಚಳಿಗಾಲದ ಅಧಿವೇಶನ ನಡೆಯಬೇಕಿದೆ.

ಅಧಿವೇಶನಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್‍ನ ಸಚಿವಾಲಯಗಳು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿವೆ. ಉಭಯ ಸದನಗಳ ಸದಸ್ಯರು ತಮ್ಮ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಈಗಾಗಲೇ ಸಲ್ಲಿಸಿದ್ದಾರೆ. ಬಜೆಟ್‍ನ ಮುಂದುವರಿದ ಅಧಿವೇಶನ ಇದಾಗಿದ್ದು, ಜುಲೈ ಅಂತ್ಯದೊಳಗೆ ಪೂರ್ಣ ಪ್ರಮಾಣದ ಬಜೆಟ್‍ಗೆ ಅನುಮೋದನೆ ಪಡೆಯಬೇಕಾದ ಅನಿವಾರ್ಯತೆ ಇದೆ.

ಕಳೆದ ಅಧಿವೇಶನದಲ್ಲಿ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಜೆಟ್ ಮಂಡಿಸಿದ್ದರು. ಜುಲೈ ಅಂತ್ಯದವರೆಗೆ ಲೇಖಾನುದಾನಕ್ಕೆ ಮಾತ್ರ ಉಭಯ ಸದನಗಳು ಒಪ್ಪಿಗೆ ನೀಡಿದ್ದವು. ಈ ಅಧಿವೇಶನದಲ್ಲಿ ಇಲಾಖಾವಾರು ಬೇಡಿಕೆಗಳ ಮೇಲೆ ಚರ್ಚೆ ನಡೆದು ಬಜೆಟ್ ಉಭಯ ಸದನಗಳಲ್ಲಿ ಅನುಮೋದನೆಯಾಗಬೇಕಿದೆ. ಈ ನಡುವೆ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ನಿರಂತರವಾಗಿ ರಾಜೀನಾಮೆ ನೀಡುತ್ತಿದ್ದಾರೆ.

ಸರ್ಕಾರವನ್ನು ಉಳಿಸಿಕೊಳ್ಳಲು ಎಲ್ಲ ಸಚಿವರ ರಾಜೀನಾಮೆ ಪಡೆದು ಸಂಪುಟ ಪುನಾರಚನೆ ಮಾಡುವುದಾಗಿ ಸಿಎಂ ಪ್ರಕಟಿಸಿದ್ದಾರೆ. ಸಂಪುಟ ಪುನಾರಚನೆ ಸಂದರ್ಭದಲ್ಲಿ ಅತೃಪ್ತ ಶಾಸಕರಿಗೆ ಅವಕಾಶ ಕಲ್ಪಿಸುವ ಭರವಸೆ ನೀಡಿದ್ದರೂ ರಾಜೀನಾಮೆ ನೀಡಿರುವ ಯಾವ ಶಾಸಕರೂ ಮಣಿಯುತ್ತಿಲ್ಲ. ಇಂತಹ ಸಂದರ್ಭದಲ್ಲಿ ನಾಳೆ ಮಧ್ಯಾಹ್ನ ಅಧಿವೇಶನ ಆರಂಭವಾಗಲಿದೆ. ಶಾಸಕರ ರಾಜೀನಾಮೆ ವಿಚಾರ ಉಭಯ ಸದನಗಳಲ್ಲಿ ಪ್ರತಿಧ್ವನಿಸುವ ಸಾಧ್ಯತೆಯೇ ಹೆಚ್ಚಾಗಿದೆ.

Intro:ಬೆಂಗಳೂರು : ಮೈತ್ರಿ ಸರ್ಕಾರದ ಶಾಸಕರ ಸರಣಿ ರಾಜೀನಾಮೆ ನಡುವೆಯೂ ನಾಳೆಯಿಂದ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗುತ್ತಿದೆ.Body:ರಾಜ್ಯದ ಜ್ವಲಂತ ಸಮಸ್ಯೆಗಳಿಗಿಂತ ವಿಧಾನಮಂಡಲದಲ್ಲಿ ರಾಜ್ಯ ರಾಜಕೀಯ ವಿದ್ಯಮಾನಗಳ ವಿಚಾರವೇ ಹೆಚ್ಚು ಪ್ರಸ್ತಾಪವಾಗುವ ಸಾಧ್ಯತೆ ಇದೆ.
ಆಡಳಿತ ಪಕ್ಷದ ಶಾಸಕರ ರಾಜೀನಾಮೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಬಿಜೆಪಿ ಈಗಾಗಲೇ ಪಟ್ಟುಹಿಡಿದು ಹೋರಾಟ ಮುಂದುವರಿಸಿದೆ.
ದಿನದಿಂದ ದಿನಕ್ಕೆ ಮೈತ್ರಿ ಸರ್ಕಾರದ ಸಂಕಷ್ಟ ಹೆಚ್ಚಾಗುತ್ತಿದ್ದು, ಸರ್ಕಾರವನ್ನು ಉಳಿಸಿಕೊಳ್ಳಲು ಜೆಡಿಎಸ್-ಕಾಂಗ್ರೆಸ್ ನಾಯಕರು ನಿರಂತರ ಹರಸಾಹಸ ನಡೆಸುತ್ತಿದ್ದಾರೆ.
ರಾಜೀನಾಮೆ ನೀಡಿರುವ ಅತೃಪ್ತ ಶಾಸಕರ ಮನವೊಲಿಸುವ ಪ್ರಯತ್ನ ಒಂದೆಡೆ ನಡೆದಿದ್ದರೆ, ಮತ್ತೊಂದೆಡೆ ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಕಾನೂನು ಹೋರಾಟಕ್ಕೆ ಆಡಳಿತ ಪಕ್ಷ ಮುಂದಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು, ನಾಳೆಯಿಂದ ಜುಲೈ 26ರ ವರೆಗೆ ಚಳಿಗಾಲದ ಅಧಿವೇಶನ ನಡೆಯಬೇಕಿದೆ. ಅಧಿವೇಶನಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್‍ನ ಸಚಿವಾಲಯಗಳು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿವೆ.
ಉಭಯ ಸದನಗಳ ಸದಸ್ಯರು ತಮ್ಮ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಈಗಾಗಲೇ ಸಲ್ಲಿಸಿದ್ದಾರೆ. ಬಜೆಟ್‍ನ ಮುಂದುವರಿದ ಅಧಿವೇಶನ ಇದಾಗಿದ್ದು, ಜುಲೈ ಅಂತ್ಯದೊಳಗೆ ಪೂರ್ಣ ಪ್ರಮಾಣದ ಬಜೆಟ್‍ಗೆ ಅನುಮೋದನೆ ಪಡೆಯಬೇಕಾದ ಅನಿವಾರ್ಯತೆ ಇದೆ.
ಕಳೆದ ಅಧಿವೇಶನದಲ್ಲಿ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡಿಸಿದ್ದರು. ಜುಲೈ ಅಂತ್ಯದವರೆಗೆ ಲೇಖಾನುದಾನಕ್ಕೆ ಮಾತ್ರ ಉಭಯ ಸದನಗಳು ಒಪ್ಪಿಗೆ ನೀಡಿದ್ದವು. ಈ ಅಧಿವೇಶನದಲ್ಲಿ ಇಲಾಖಾವಾರು ಬೇಡಿಕೆಗಳ ಮೇಲೆ ಚರ್ಚೆ ನಡೆದು ಬಜೆಟ್ ಉಭಯ ಸದನಗಳಲ್ಲಿ ಅನುಮೋದನೆಯಾಗಬೇಕಿದೆ. ಈ ನಡುವೆ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ನಿರಂತರವಾಗಿ ರಾಜೀನಾಮೆ ನೀಡುತ್ತಿದ್ದಾರೆ. ಸರ್ಕಾರವನ್ನು ಉಳಿಸಿಕೊಳ್ಳಲು ಎಲ್ಲ ಸಚಿವರ ರಾಜೀನಾಮೆ ಪಡೆದು ಸಂಪುಟ ಪುನಾರಚನೆ ಮಾಡುವುದಾಗಿ ಸಿಎಂ ಪ್ರಕಟಿಸಿದ್ದಾರೆ.
ಸಂಪುಟ ಪುನಾರಚನೆ ಸಂದರ್ಭದಲ್ಲಿ ಅತೃಪ್ತ ಶಾಸಕರಿಗೆ ಅವಕಾಶ ಕಲ್ಪಿಸುವ ಭರವಸೆ ನೀಡಿದ್ದರೂ ರಾಜೀನಾಮೆ ನೀಡಿರುವ ಯಾವ ಶಾಸಕರೂ ಮಣಿಯುತ್ತಿಲ್ಲ. ಇಂತಹ ಸಂದರ್ಭದಲ್ಲಿ ನಾಳೆ ಮಧ್ಯಾಹ್ನ ಅಧಿವೇಶನ ಆರಂಭವಾಗಲಿದೆ.
ಶಾಸಕರ ರಾಜೀನಾಮೆ ವಿಚಾರ ಉಭಯ ಸದನಗಳಲ್ಲಿ ಪ್ರತಿಧ್ವನಿಸುವ ಸಾಧ್ಯತೆಯೇ ಹೆಚ್ಚಾಗಿದೆ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.