ETV Bharat / state

ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು ಪ್ರಕರಣ : ಆಕ್ಷೇಪಣೆ ಸಲ್ಲಿಸಲು 2 ವಾರ ಕಾಲಾವಕಾಶ ನೀಡಿದ ಹೈಕೋರ್ಟ್ - ETV Bharath Kannada news

ಮೆಟ್ರೋ ಪಿಲ್ಲರ್ ಕುಸಿದ ಪ್ರಕರಣ - ಬೆಂಗಳೂರು ಮೆಟ್ರೋ ರೈಲು ಮಂಡಳಿಗೆ ಆಕ್ಷೇಪಣೆ ಸಲ್ಲಿಸಲು 2 ವಾರ ಕಾಲಾವಕಾಶ - ಪತ್ರಿಕೆಗಳ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ

high court
ಹೈಕೋರ್ಟ್
author img

By

Published : Jan 31, 2023, 7:28 PM IST

ಬೆಂಗಳೂರು: ನಗರದ ನಾಗವಾರದ ಬಳಿ ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್‌ನ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ಮಹಿಳೆ ಮತ್ತು ಗಂಡು ಮಗು ಸಾವನ್ನಪ್ಪಿದ ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ಬೆಂಗಳೂರು ಮೆಟ್ರೋ ರೈಲು ಮಂಡಳಿಗೆ ಎರಡು ವಾರಗಳ ಕಾಲ ಕಾಲಾವಕಾಶ ನೀಡಿದೆ.

ಈ ಸಂಬಂಧ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಆಧರಿಸಿ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ರಾಜ್ಯ ಸರ್ಕಾರ, ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಮೆ. ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪೆನಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಫೆ. 11ಕ್ಕೆ ಮುಂದೂಡಿದೆ.

ಪ್ರಮುಖ ದಿನ ಪತ್ರಿಕೆಗಳ ವರದಿಯನ್ನು ಉಲ್ಲೇಖಿಸಿದರು. ಅಲ್ಲದೆ, ಬೆಂಗಳೂರಿನಲ್ಲಿ ಜನವರಿ 11 ಮತ್ತು 13ರಂದು ಪ್ರತ್ಯೇಕವಾಗಿ ನಡೆದಿರುವ ಪ್ರಕರಣಗಳು ಸಂಜ್ಞೇಯ(ಕಾಗ್ನಿಜೆನ್ಸ್) ಪರಿಗಣಿಸುವಂತೆ ಮಾಡಿದ್ದು, ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು. ನಗರದ ರಸ್ತೆಗಳ ಪರಿಸ್ಥಿತಿಯು ಕಳಕಳಿ ಮತ್ತು ಪ್ರಶ್ನೆ ಹುಟ್ಟುಹಾಕಿದ್ದು, ಇಂಥ ಕಾಮಗಾರಿ ನಡೆಸುವಾಗ ಯಾವ ರೀತಿಯ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ? ಸುರಕ್ಷತಾ ಕ್ರಮಗಳು ಟೆಂಡರ್ ದಾಖಲೆ ಅಥವಾ ಗುತ್ತಿಗೆದಾರರಿನಲ್ಲಿ ಉಲ್ಲೇಖವಾಗಿದೆಯೇ? ಒಂದೊಮ್ಮೆ ಸುರಕ್ಷತಾ ಕ್ರಮಗಳು ಟೆಂಡರ್ ದಾಖಲೆಗಳಲ್ಲಿ ಉಲ್ಲೇಖವಾಗಿರದಿದ್ದರೆ, ಸರ್ಕಾರದ ಆದೇಶ ಅಥವಾ ಅಧಿಸೂಚನೆಯ ರೂಪದಲ್ಲಿ ಸುರಕ್ಷತಾ ಕ್ರಮಕೈಗೊಳ್ಳಲು ಸೂಚಿಸಲಾಗಿದೆಯೇ? ಎಂದು ಪ್ರಶ್ನಿಸಿತ್ತು.

ಒಂದೊಮ್ಮೆ ಸುರಕ್ಷತಾ ಕ್ರಮ ಉಲ್ಲೇಖಿಸಿದ್ದರೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಮೇಲಿಂದ ಮೇಲೆ ಅವುಗಳನ್ನು ಪರಿಶೀಲಿಸಲು ಯಾವ ವ್ಯವಸ್ಥೆ ಮಾಡಲಾಗಿದೆ? ಸುರಕ್ಷತಾ ಕ್ರಮ ನಿರ್ವಹಿಸಲು ಹೊಣೆಗಾರಿಕೆ ನಿಗದಿ ಮಾಡಲಾಗಿದೆಯೇ? ಗುತ್ತಿಗೆ ನಡೆಸುತ್ತಿರುವ ಸಂಸ್ಥೆ ಅಥವಾ ಕಾಮಗಾರಿಯ ಮೇಲುಸ್ತುವಾರಿ ನಿಭಾಯಿಸುತ್ತಿರುವ ಅಧಿಕಾರಿಗಳ ಕುರಿತಾದ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಹೀಗಾಗಿ, ಮೇಲೆ ಉಲ್ಲೇಖಿಸಿದ ವಿಚಾರಗಳ ಕುರಿತು ಸಂಜ್ಞೇ ಪರಿಗಣಿಸಬೇಕಿದೆ ಎಂದು ತಿಳಿಸಿದ ನ್ಯಾಯಪೀಠ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪ್ರಕರಣ ದಾಖಲಿಸಲು ಆದೇಶ ನೀಡಿತ್ತು.

ಜೊತೆಗೆ, ರಾಜ್ಯ ಸರ್ಕಾರದ ಸಂಬಂಧಿತ ಇಲಾಖೆಗಳು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಮೆಟ್ರೊ ರೈಲು ಅಭಿವೃದ್ಧಿ ನಿಗಮ (ಬಿಎಂಆರ್ಸಿಎಲ್), ಸಂಬಂಧಿತ ಗುತ್ತಿಗೆದಾರರನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿಸಲು ಸೂಚನೆ ನೀಡಿತ್ತು.

ಪ್ರಕರಣದ ಹಿನ್ನೆಲೆ ಏನು? : ಜನವರಿ 11ರಂದು ಬೆಳಗ್ಗೆ ಮಕ್ಕಳು ಶಾಲೆಗೆ ಬಿಡಲು ಸಾಫ್ಟ್ವೇರ್ ಎಂಜಿಯರ್ ಆದ ತೇಜಸ್ವಿನಿ ಮತ್ತು ಅವರ ಪತಿ ಲೋಹಿತ್ ಕುಮಾರ್ ತೆರಳುತ್ತಿದ್ದರು. ಈ ಸಂದರ್ಭದಲ್ಲಿ 12 ಮೀಟರ್ ಎತ್ತರದ ಕಬ್ಬಿಣದ ಚೌಕಟ್ಟು ಅವರ ಮೇಲೆ ಬಿದಿದ್ದು, ತೇಜಸ್ವಿನಿ ಮತ್ತು ಅವರ ಎರಡೂ ವರ್ಷದ ಪುತ್ರ ವಿಹಾನ್ ಮೃತಪಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರ ಸಂಸ್ಥೆ ನಾಗಾರ್ಜುನ ಕನಸ್ಟ್ರಕ್ಷನ್ ಮತ್ತು ಬಿಎಂಆರ್‌ಸಿಎಲ್​ನ ಕೆಲವು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಘಟನೆ ಮಾಸುವ ಮುನ್ನವೇ ಗುರುವಾರ ಬ್ರಿಗೇಡ್ ರಸ್ತೆಯಲ್ಲಿ ದೊಡ್ಡದಾದ ರಸ್ತೆ ಗುಂಡಿ ನಿರ್ಮಾಣಗೊಂಡಿದ್ದು, ಬೈಕ್ ಸವಾರ ಗಾಯಗೊಂಡಿದ್ದರು. ಈ ಎರಡೂ ಅಂಶಗಳ ವರದಿಯನ್ನು ಆಧರಿಸಿ ನ್ಯಾಯಾಲಯ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.

ಇದನ್ನೂ ಓದಿ: ಬೆಂಗಳೂರು ಮೆಟ್ರೊ ಪಿಲ್ಲರ್ ದುರಂತ: ನಮ್ಮ ಮೆಟ್ರೋ ಸಂಸ್ಥೆಗೆ ವರದಿ ಸಲ್ಲಿಸಿದ ಐಐಎಸ್‌ಸಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.