ಬೆಂಗಳೂರು : ನಾಳೆ (ಭಾನುವಾರ) ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆ-2022 (UPSC Preliminary Exams-2022) ನಡೆಯುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 6 ಗಂಟೆಯಿಂದ ಆರಂಭವಾಗಲಿದೆ.
ಈ ಸಂಬಂಧ ಬಿಎಂಆರ್ಸಿಎಲ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಮೆಟ್ರೋ ಸೇವೆ ಎರಡೂ ಮಾರ್ಗಗಳಲ್ಲಿ ಬೆಳಗ್ಗೆ 7 ಗಂಟೆಗೆ ಬದಲಾಗಿ ಬೆಳಗ್ಗೆ 6 ಗಂಟೆಗೆ ಪ್ರಾರಂಭವಾಗಲಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಗಮವಾಗಿ ತಲುಪಲು ಅನುಕೂಲವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಪಠ್ಯ ಪರಿಷ್ಕರಣೆ ದಲಿತ, ಮಹಿಳಾ, ಸಾಮಾಜಿಕ ನ್ಯಾಯ, ಸಮಾನತೆ ವಿರೋಧಿ ಕ್ರಮ: ಬರಗೂರು