ಬೆಂಗಳೂರು : ನೆರೆಯ ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಗಡಿ ಭಾಗಗಳಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಸಂಬಂಧ ನಮ್ಮ ಮೆಟ್ರೋ ಪ್ರಯಾಣದಲ್ಲಿ ಕೊಂಚ ಬದಲಾವಣೆಯಾಗಿದೆ.
ರಾಜ್ಯದಲ್ಲಿ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಮತ್ತೊಮ್ಮೆ ನಿರ್ಬಂಧವಿಧಿಸಲಾಗಿದೆ. ಕೊರೊನಾ ನಿಯಂತ್ರಣ ಕ್ರಮಗಳ ಆದೇಶದಂತೆ ಆಗಸ್ಟ್ 7 ರಿಂದ 16ರವರೆಗೆ ರಾಜ್ಯದಲ್ಲಿ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ.
ಓದಿ: ಪ್ರಮುಖ ಐಸಿಸ್ ಕಾರ್ಯಕರ್ತನ ಬಂಧನ : ಭಟ್ಕಳದಲ್ಲಿ NIA 'ಉಗ್ರ' ಬೇಟೆಯ ಕಥೆ
ಈ ನಿಟ್ಟಿನಲ್ಲಿ ಕೊನೆಯ ಮೆಟ್ರೋ ರೈಲು ಸೇವೆಯೂ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಹೊರಡುತ್ತದೆ. ಈ ಬದಲಾವಣೆಯು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ನಮ್ಮ ಮೆಟ್ರೋ ಪ್ರಕಟಣೆ ಹೊರಡಿಸಿದೆ.