ETV Bharat / state

ವೃಷಭಾವತಿ ನದಿ ಪುನಶ್ಚೇತನ : ಮಧ್ಯಂತರ ವರದಿ ಜಾರಿಗೊಳಿಸಿರುವುದಾಗಿ ಸರ್ಕಾರದ ಮಾಹಿತಿ - ವೃಷಭಾವತಿ ನದಿ

ಮಲಿನಗೊಂಡಿರುವ ವೃಷಭಾವತಿ ನದಿ ಸಂರಕ್ಷಣೆ ಹಾಗೂ ಪುನಶ್ಚೇತನ ಸಂಬಂಧಿಸಿದಂತೆ ಮಧ್ಯಂತರ ವರದಿ ಜಾರಿಗೊಳಿಸಿರುವುದಾಗಿ ರಾಜ್ಯಸರ್ಕಾರ ಹೈಕೋರ್ಟ್​​ಗೆ ತಿಳಿಸಿದೆ..

Vrishabhavati
ವೃಷಭಾವತಿ
author img

By

Published : Jul 20, 2021, 6:55 PM IST

ಬೆಂಗಳೂರು : ವೃಷಭಾವತಿ ನದಿ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರಿಸರ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (ನೀರಿ) ಸಲ್ಲಿಸಿರುವ ಮಧ್ಯಂತರ ವರದಿ ಶಿಫಾರಸುಗಳನ್ನು ತ್ವರಿತವಾಗಿ ಜಾರಿಗೊಳಿಸಲು ಬಿಬಿಎಂಪಿ, ಬಿಡಿಎ, ಕೆಎಸ್‌ಪಿಸಿಬಿ ಸೇರಿ ಸಂಬಂಧಪಟ್ಟ ಎಲ್ಲ ಪ್ರಾಧಿಕಾರಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ಹೈಕೋರ್ಟ್​​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಮಲಿನಗೊಂಡಿರುವ ವೃಷಭಾವತಿ ನದಿ ಸಂರಕ್ಷಣೆ ಹಾಗೂ ಪುನಶ್ಚೇತನ ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಕೆ ಎ ಇದಾಯತ್-ಉಲ್ಲಾ ಅವರು ಸಿದ್ಧಪಡಿಸಿದ ಪ್ರಮಾಣ ಪತ್ರವನ್ನು ಸರ್ಕಾರಿ ವಕೀಲರು ಪೀಠಕ್ಕೆ ಸಲ್ಲಿಸಿದರು. ವರದಿ ಪರಿಶೀಲಿಸಿದ ಪೀಠ, ನದಿಪಾತ್ರ ಸರ್ವೇ ಕಾರ್ಯ ಸೇರಿದಂತೆ ಅಲ್ಪಾವಧಿ ಕ್ರಮಗಳ ಜಾರಿ ವಿಚಾರದಲ್ಲಿ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಕುರಿತು ನಗರಾಭಿವೃದ್ಧಿ ಇಲಾಖೆ, ಬಿಡಿಎ, ಬಿಬಿಎಂಪಿ, ಕೆಎಸ್‌ಪಿಸಿಬಿ ಹಾಗೂ ಜಲಮಂಡಳಿಗಳು ಆಗಸ್ಟ್ 23ರೊಳಗೆ ಸಮಗ್ರ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಆಗಸ್ಟ್ 26ಕ್ಕೆ ಮುಂದೂಡಿತು.

ಪ್ರಮಾಣಪತ್ರದಲ್ಲಿನ ವಿವರ : ನದಿ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ನೀರಿ ವರದಿ ಜಾರಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನಿರ್ದೇಶನದಂತೆ ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೂನ್ 21ರಂದು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬಿಬಿಎಂಪಿ, ಬಿಡಿಎ, ಮಾಲಿನ್ಯ ನಿಯಂತ್ರಣ ಮಂಡಳಿ, ಜಲಮಂಡಳಿ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ಸಂಬಂಧಪಟ್ಟ 21 ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಈ ವೇಳೆ ನೀರಿ ನೀಡಿರುವ ಮಧ್ಯಂತರ ವರದಿಯಲ್ಲಿನ ಅಲ್ಪಾವಧಿ ಮತ್ತು ದೀರ್ಘಾವಧಿ ಶಿಫಾರಸುಗಳನ್ನು ಜಾರಿಗೊಳಿಸುವ ಕುರಿತು ಚರ್ಚಿಸಲಾಯಿತು. ಅದರಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಭೆ ನಿರ್ಧಾರ ತೆಗೆದುಕೊಂಡಿದೆ. ನೀರಿಯ ಅಲ್ಪಾವಧಿ ಶಿಫಾರಸುಗಳನ್ನು ಜಾರಿಗೆ ತರಲು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶಿಸಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಅಲ್ಲದೆ, ಕೆರೆಗಳ ಸುತ್ತಲಿನ ಅನಧಿಕೃತ ಕಟ್ಟಡಗಳನ್ನು ಸರ್ವೇ ನಡೆಸುವ ಮತ್ತು ತಡೆಯುವ ಜವಾಬ್ದಾರಿಯನ್ನು ಬಿಡಿಎ, ಬಿಬಿಎಂಪಿ ಮತ್ತು ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾಧಿಕಾರಿಗೆ ವಹಿಸಲಾಗಿದೆ. ನದಿಗೆ ನೀರು ಸೇರುವ ಜಾಗದಿಂದ ಮಾಲಿನ್ಯ ತಡೆಯುವ ಜವಾಬ್ದಾರಿಯನ್ನು ಜಲಮಂಡಳಿ, ಕೆಎಸ್‌ಪಿಸಿಬಿ ಮತ್ತು ಬಿಬಿಎಂಪಿಗೆ ವಹಿಸಲಾಗಿದೆ.

ತ್ಯಾಜ್ಯ ನೀರಿನ ಗುಣಮಟ್ಟವನ್ನು ಪರೀಕ್ಷಿಸುವುದು ಮತ್ತು ನದಿಗೆ ಬೇಲಿ ಹಾಕುವುದನ್ನು ಬಿಡಿಎ ಮತ್ತು ಬಿಬಿಎಂಪಿಗೆ ವಹಿಸಲಾಗಿದೆ. ಹೀಗೆ ವಹಿಸಿರುವ ವಿವಿಧ ಹೊಣೆಗಾರಿಕೆಯನ್ನು ಪೂರ್ಣಗೊಳಿಸಲು ಆಯಾ ಕೆಲಸಕ್ಕೆ ಅನುಗುಣವಾಗಿ ಕಾಲಮಿತಿ ನಿಗದಿಪಡಿಸಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.