ETV Bharat / state

ಉಗ್ರ ಚಟುವಟಿಕೆ ಆರೋಪದಡಿ ಬಂಧನ : ಜಾಮೀನು ಅರ್ಜಿ ಹಿಂಪಡೆದ ರಿಯಾಜ್

author img

By

Published : Dec 10, 2020, 6:56 PM IST

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 121 ಎ, 511 ಮತ್ತು ಸ್ಪೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 4, 5, 6 ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯ ಸೆಕ್ಷನ್ 13, 16, 18, 20, 38 ಅಡಿ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಕೂಡ ವಿಚಾರಣೆ ಆರಂಭಿಸಿತ್ತು..

militant activity accused Riaz withdraws bail application
ಜಾಮೀನು ಅರ್ಜಿ ಹಿಂಪಡೆದ ರಿಯಾಜ್

ಬೆಂಗಳೂರು : ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದಡಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಭಟ್ಕಳ ಮೂಲದ ರಿಯಾಜ್ ಅಹ್ಮದ್ ಸಯೀದ್ ಜಾಮೀನು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹಿಂಪಡೆದಿದ್ದಾನೆ.

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ರಿಯಾಜ್ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದ ಪೀಠ, ಅರ್ಜಿ ವಿಚಾರಣೆಗೆ ಯೋಗ್ಯವಲ್ಲ ಎಂದಿತು.

ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಜಾಮೀನು ಕೋರಿ ವಿಶೇಷ ನ್ಯಾಯಾಲಯದಲ್ಲಿಯೇ ಅರ್ಜಿ ಸಲ್ಲಿಸುತ್ತೇವೆ. ಹೀಗಾಗಿ ಅರ್ಜಿ ಹಿಂಪಡೆಯಲು ಅನುಮತಿಸಬೇಕು ಎಂದರು. ಕೋರಿಕೆ ಪುರಸ್ಕರಿಸಿದ ಪೀಠ ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿತು.

ಇದನ್ನೂ ಓದಿ : ಮೆಟ್ರೊಗೆ ಮರ ಕಡಿಯುವ ಮುನ್ನ ತಜ್ಞರ ಅಭಿಪ್ರಾಯ ಆಲಿಸಿ: ಹೈಕೋರ್ಟ್

ಪ್ರಕರಣದ ಹಿನ್ನೆಲೆ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ರಿಯಾಜ್ ಅಹ್ಮದ್ ಸಯೀದ್ ಹಾಗೂ ಮತ್ತೋರ್ವನನ್ನು ಸಿಸಿಬಿ ಪೊಲೀಸರು 2015ರ ಜನವರಿ 7ರಂದು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದರು. ಆ ಬಳಿಕ ಆರೋಪಿಗಳ ಹೇಳಿಕೆ ಆಧರಿಸಿ ಭಟ್ಕಳದ ಮನೆಯಿಂದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 121 ಎ, 511 ಮತ್ತು ಸ್ಪೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 4, 5, 6 ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯ ಸೆಕ್ಷನ್ 13, 16, 18, 20, 38 ಅಡಿ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಕೂಡ ವಿಚಾರಣೆ ಆರಂಭಿಸಿತ್ತು.

ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಗರದ ಎನ್ಐಎ ವಿಶೇಷ ನ್ಯಾಯಾಲಯ 2018ರ ಏಪ್ರಿಲ್ 26ರಂದು ತಿರಸ್ಕರಿಸಿತ್ತು. ಆ ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದ ರಿಯಾಜ್ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವುದು, ತನಿಖೆ ನಡೆಸಿರುವುದು ಸಿಸಿಬಿ ಪೊಲೀಸರು. ಐಎನ್ಐ ಅಧಿಕಾರಿಗಳಲ್ಲ.

ಹೀಗಾಗಿ, ಎನ್ಐಎ ನ್ಯಾಯಾಲಯ ಜಾಮೀನು ನಿರಾಕರಿಸಿರುವ ಕ್ರಮ ಸರಿಯಲ್ಲ ಎಂದು ವಾದಿಸಿದ್ದ. ಈ ವಾದವನ್ನು ಹೈಕೋರ್ಟ್ ತಿರಸ್ಕರಿಸಿ, ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ರಿಯಾಜ್ 2020ರ ಫೆಬ್ರವರಿ 26ರಂದು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.