ಬೆಂಗಳೂರು: ಉಗ್ರಪ್ಪ ಒಬ್ಬ ವಕೀಲರು, ಏನಾದರೂ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಅನುಮಾನ ಇದ್ದರೆ ಪೊಲೀಸರಿಗೆ ದೂರು ನೀಡಿದರೆ ತನಿಖೆ ಮಾಡುತ್ತೇವೆ. ಅದನ್ನು ಬಿಟ್ಟು ಸುಮ್ಮನೆ ಅವರವರೇ ಮಾತನಾಡಿಕೊಂಡರೆ ಏನು ಪ್ರಯೋಜನ ಆಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿ ಏರ್ಪಡಿಸಿರುವ ದಸರಾ ಮಹೋತ್ಸವದ ಗೊಂಬೆಗಳ ಪ್ರದರ್ಶನ ವೀಕ್ಷಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಸಚಿವರು ಈ ಕುರಿತು ಮಾತನಾಡಿದರು.
ಕರ್ನಾಟಕ ಪೊಲೀಸರು ನಮ್ಮ ಪರಂಪರೆ ಉಳಿಸಿ ಬೆಳೆಸುವ ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಇದಕ್ಕೆ ಬಾಸ್ಕರ್ ರಾವ್ ಮತ್ತು ಅಧಿಕಾರಿ ವರ್ಗ ಹಾಗೂ ಇದಕ್ಕೆ ಅನುವು ಮಾಡಿಕೊಟ್ಟ ರೈಲ್ವೆ ಇಲಾಖಾ ಅಧಿಕಾರಿಗಳಿಗೆ ಅಂಭಿನಂದಿಸುತ್ತೇನೆ ಎಂದರು.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಗೂ ಮುನ್ನ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಜೊತೆ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರು ಡಿಕೆಶಿ ಡೀಲಿಂಗ್ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಉಗ್ರಪ್ಪರಿಗೆ ಪ್ರಾಮಾಣಿಕ ಕಾಳಜಿ ಇದ್ದರೆ ಪೊಲೀಸರಿಗೆ ದೂರು ನೀಡಲಿ, ಖಂಡಿತವಾಗಿ ಕಠಿಣ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವರು ಭರವಸೆ ನೀಡಿದರು.
ಔರಾದ್ಕರ್ ವರದಿ ಜಾರಿ:
ಔರಾದ್ಕರ್ ಅವರ ವರದಿ ಶೇ.80 ರಷ್ಟು ಈಗಾಗಲೇ ಜಾರಿಯಾಗಿದೆ. ಪ್ರತಿ ತಿಂಗಳು ಪೊಲೀಸ್ ಸಿಬ್ಬಂದಿಗೆ ಅಲೋವೆನ್ಸ್ ಕೊಡುತ್ತಿದ್ದೇವೆ. ಹಣಕಾಸು ಇಲಾಖೆಯಲ್ಲಿ ಈ ಬಗ್ಗೆ ಮಾತಾಡಿದ್ದೇನೆ ಎಂದು ತಿಳಿಸಿದರು.
ಕನ್ನಡ ಸಿನಿಮಾ ಪೈರಸಿ:
ಪೈರಸಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಸೈಬರ್ ಕ್ರೈಂ ಪೊಲೀಸರಿಗೆ ಈ ಕುರಿತಂತೆ ತಿಳಿಸಿದ್ದೇನೆ. ಈ ಕೃತ್ಯ ನಡೆಸುತ್ತಿರುವ ಗ್ಯಾಂಗ್ ಅನ್ನು ಶೀಘ್ರದಲ್ಲೇ ಪತ್ತೆ ಹಚ್ಚಲು ಸೂಚಿಸಿದ್ದೇನೆ. ಕೋಟ್ಯಂತರ ಹಣ ಹೂಡಿಕೆ ಮಾಡಿ ಸಿನಿಮಾಗಳನ್ನು ನಿರ್ಮಾಣ ಮಾಡಲಾಗುತ್ತದೆ. ಚಿತ್ರರಂಗವನ್ನೇ ನಂಬಿ ಅನೇಕ ಮಂದಿ ಜೀವನ ನಡೆಸುತ್ತಿದ್ದಾರೆ. ಅಂಥವರನ್ನು ಉಳಿಸಲು ಈ ಪೈರಸಿ ಕಿಡಗೇಡಿಗಳನ್ನು ಬಂಧಿಸಿ ಮುಂದೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಭಯ ನೀಡಿದರು.
ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಡಿಕೆಶಿ ಕುರಿತ ಉಗ್ರಪ್ಪ-ಸಲೀಂ ಸಂಭಾಷಣೆಯ ವಿಡಿಯೋ