ಬೆಂಗಳೂರು : ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎನ್ನುವ ನಿಯಮವಿದೆ. ಅದರಂತೆ ಸಂಘಟನೆಯ ಜವಾಬ್ದಾರಿಯಾದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದರು. ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಿರುವ ಲಿಂಬಾವಳಿ ಅವರಿಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ನೀಡಲಾಗಿದೆ.
ಸರ್ಕಾರದ ಭಾಗವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಿನ್ನೆಲೆ ಪಕ್ಷದ ರಾಜ್ಯ ಉಪಾಧ್ಯಕ್ಷ ಸ್ಥಾನದ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಕೆ ಮಾಡಿದ್ದಾರೆ.
ಓದಿ: ಬೆಂಗಳೂರು ಗಲಭೆ ಪ್ರಕರಣ: ಎನ್ಐಎ ಸಲ್ಲಿಸಿದ 7 ಸಾವಿರ ಪುಟಗಳ ಚಾರ್ಜ್ಶೀಟ್ನಲ್ಲಿ ಏನಿದೆ?
ಈ ಹಿಂದೆ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ವೇಳೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದಾಗ, ಒಬ್ಬರಿಗೆ ಒಂದೇ ಹುದ್ದೆ ಎನ್ನುವ ನಿಯಮದಂತೆ ಬಿಎಸ್ವೈ ಕೂಡ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದೇ ರೀತಿ ಇದೀಗ ಅರವಿಂದ ಲಿಂಬಾವಳಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.