ETV Bharat / state

ಲಂಬಾಣಿ ತಾಂಡ, ಕುರುಬರ ಹಟ್ಟಿ ಕಂದಾಯ ಗ್ರಾಮಗಳೆಂದು ಘೋಷಣೆ : ಸಚಿವ ಅಶೋಕ್

ರಾಜ್ಯದಲ್ಲಿ 3227 ತಾಂಡ, ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಕಂದಾಯ ಸಚಿವ ಆರ್. ಅಶೋಕ್
ಕಂದಾಯ ಸಚಿವ ಆರ್. ಅಶೋಕ್
author img

By

Published : Aug 8, 2022, 6:25 PM IST

ಬೆಂಗಳೂರು: ರಾಜ್ಯದ ಲಂಬಾಣಿ ತಾಂಡ, ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಲಾಗಿದ್ದು, ಇದುವರೆಗೂ 1034 ತಾಂಡಾ ಮತ್ತು ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಲಂಬಾಣಿ ತಾಂಡ ಹಾಗೂ ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಬೇಕು ಎಂಬ ಬೇಡಿಕೆ ಇತ್ತು. ಯಾವುದೇ ಸರ್ಕಾರ ಇದನ್ನು ಈಡೇರಿಸಲು ಇದೇ ಮೊದಲ ಬಾರಿಗೆ 1034 ತಾಂಡಾ ಮತ್ತು ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಅಧಿಸೂಚನೆ ಹೊರಡಿಸಿದೆ ಎಂದು ಹೇಳಿದರು.

ಇಂದು ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಲಂಬಾಣಿ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಸಂಬಂಧ ಲಂಬಾಣಿ ಅಭಿವದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ರಾಜೀವ್ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ಜಮೀನಿನ ಮಾಲೀಕರಿಗೆ ಪರಿಹಾರ: ಇಡೀ ರಾಜ್ಯದಲ್ಲಿ 3227 ತಾಂಡ, ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗುವುದು. ಸರ್ಕಾರಿ ಜಾಗದಲ್ಲಿರುವ ತಾಂಡಾಗಳನ್ನು ಗ್ರಾಮಗಳನ್ನಾಗಿ ಘೋಷಿಸಿ ಮುಂದಿನ ದಿನಗಳಲ್ಲಿ ಖಾಸಗಿ ಭೂಮಿಗಳನ್ನು ತಾಂಡಾಗಳನ್ನು ಘೋಷಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಇದಕ್ಕಾಗಿ ಖಾಸಗಿ ಜಮೀನಿನ ಮಾಲೀಕರಿಗೆ ಪರಿಹಾರ ನೀಡುವುದಾಗಿ ಸಚಿವರು ತಿಳಿಸಿದರು.

ಕಂದಾಯ ಸಚಿವ ಆರ್. ಅಶೋಕ್ ಅವರು ಮಾತನಾಡಿದರು

ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವುದರಿಂದ ಅವರಿಗೆ ಎಲ್ಲ ರೀತಿಯ ಸರ್ಕಾರದ ಸವಲತ್ತುಗಳು ಸಿಗುತ್ತವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ರಾಜೀವ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಓದಿ: ರಾಷ್ಟದ್ವಜ ಬಣ್ಣ ಕೆಂಪು, ಬಿಳಿ, ಹಸಿರು ಅಂದ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.