ETV Bharat / state

ಸಚಿವ ಅಶೋಕ್‌ ಅವರಿಂದ ಭ್ರಷ್ಟ ಅಧಿಕಾರಿಗಳ ರಕ್ಷಣೆ:  ಮಾರಸಂದ್ರ ಮುನಿಯಪ್ಪ ಆರೋಪ - ಬೆಂಗಳೂರು ಮೆಟ್ರೊ ರೈಲು ನಿಗಮ

ಭ್ರಷ್ಟ ಅಧಿಕಾರಿಯನ್ನು ಕೆಲಸದಿಂದ ಅಮಾನತು ಮಾಡುವ ಬದಲು, ವರ್ಗಾವಣೆ ಮಾಡುವ ಮೂಲಕ ಕಂದಾಯ ಸಚಿವ ಆರ್ ಅಶೋಕ್  ಭ್ರಷ್ಟ ಅಧಿಕಾರಿಯ ರಕ್ಷಣೆಗೆ ನಿಂತಿದ್ದಾರೆಂದು ಬಿಎಸ್​ಪಿ ಮುಖಂಡ ಮಾರಸಂದ್ರ ಮುನಿಯಪ್ಪ ಆರೋಪಿದ್ದಾರೆ.

Marasandra Muniyappa
ಮಾರಸಂದ್ರ ಮುನಿಯಪ್ಪ
author img

By

Published : Oct 17, 2020, 6:09 PM IST

ಯಲಹಂಕ: ಬೆಂಗಳೂರು ಮೆಟ್ರೊ ರೈಲು ನಿಗಮದಿಂದ ಭೂಪರಿಹಾರ ಪಡೆಯಲು ಯಲಹಂಕ ತಹಶೀಲ್ದಾರ್ ರಘುಮೂರ್ತಿ ನಕಲಿ ದಾಖಲೆ ಸೃಷ್ಟಿಸಿ 100 ಕೋಟಿ ಹಣವನ್ನು ಹೊಡೆಯಲು ಯತ್ನಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ರಘುಮೂರ್ತಿಯವರ ವರ್ಗಾವಣೆ ಮಾಡಲಾಗಿದ್ದು, ಅವರನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ಬಿಎಸ್​ಪಿ ಮುಖಂಡ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದ್ದಾರೆ.

ಬಿಎಸ್​ಪಿ ಮುಖಂಡ ಮಾರಸಂದ್ರ ಮುನಿಯಪ್ಪ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮ್ಮ ಮೆಟ್ರೊ ಸಂಪರ್ಕ ಕಲ್ಪಿಸಲು ಭೂಸ್ವಾಧೀನ ಪ್ರಕ್ರಿಯೆಗಳು ಆರಂಭವಾಗಿದ್ದು. ಯಲಹಂಕ ತಾಲ್ಲೂಕಿನ ಜಾಲ ಹೋಬಳಿಯ ಶೆಟ್ಟಿಗೆರೆ ಗ್ರಾಮದ ಮೂಲಕ ಮೆಟ್ರೊ ಮಾರ್ಗ ಹೋಗುತ್ತದೆ. ಮೆಟ್ರೋ ಯೋಜನೆಯ ಪರಿಹಾರಕ್ಕೆ ಹಿಂದಿನ ತಹಶೀಲ್ದಾರ್ ರಘುಮೂರ್ತಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.

ಯಲಹಂಕ ತಾಲೂಕು ಜಾಲ ಹೋಬಳಿಯ ಶೆಟ್ಟಿಗೆರೆ ಗ್ರಾಮದ ಸರ್ವೆ ನಂಬರ್ 79ರ 17 ಎಕರೆ 35 ಸರ್ಕಾರಿ ಜಾಗವನ್ನು ಕೆಂಚಣ್ಣ , ಸುಬ್ರಮಣಿ, ಬಸಮ್ಮ, ಶಾಂತಮ್ಮ, ಭಾಗಮ್ಮ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ, ಈ ದಾಖಲೆಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಕೊಟ್ಟು ಪರಿಹಾರ ಪಡೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಇದರ ವಿರುದ್ಧ ಬಿಎಸ್​ಪಿ ಪಕ್ಷ ಹೋರಾಟ ನಡೆಸಿದ್ದು, ಈ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರು ಉತ್ತರ ವಿಶೇಷ ಜಿಲ್ಲಾಧಿಕಾರಿ ಎಂ.ಕೆ.ಜಗದೀಶ್‌ ಅವರು ಈ ದಾಖಲೆಗಳು ಬೋಗಸ್‌ ಎಂದು ಸೆಪ್ಟೆಂಬರ್‌ 24 ಆದೇಶ ಹೊರಡಿಸಿದ್ದರು.

ಈ ಆದೇಶದ ಅನ್ವಯ ರಘುಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್‌.ಶಿವಮೂರ್ತಿ ಸೆಪ್ಟೆಂಬರ್‌ 29ರಂದು ಶಿಫಾರಸು ಮಾಡಿದ್ದರು. ಆದರೆ ಅಮಾನತು ಆಗಬೇಕಿದ್ದ ರಘುಮೂರ್ತಿ ಅವರನ್ನು ವರ್ಗಾವಣೆ ಮಾಡಿರುವುದಕ್ಕೆ ಬಿಎಸ್‌ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿದ ರಘುಮೂರ್ತಿ ಅವರನ್ನು ವಾರದೊಳಗೆ ಸೇವೆಯಿಂದ ಅಮಾನತು ಮಾಡದಿದ್ದರೆ ಸಿಎಂ ಗೃಹ ಕಚೇರಿ ಕೃಷ್ಣಾದ ಎದುರು ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಘುಮೂರ್ತಿ ಅವರನ್ನು ಅಮಾನತು ಮಾಡಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್ವರ ರಾವ್ ಸಿದ್ಧತೆ ನಡೆಸಿದ್ದರು. ಆದರೆ ಕಂದಾಯ ಸಚಿವ ಆರ್‌.ಅಶೋಕ ಅವರು ಕಡತವನ್ನು ತರಿಸಿಕೊಂಡು ಒಂದು ವಾರ ತಮ್ಮಲ್ಲೇ ಇಟ್ಟುಕೊಂಡು. ಈಗ ಅಮಾನತು ಮಾಡುವ ಬದಲು ವರ್ಗಾವಣೆ ಮಾಡಿದ್ದಾರೆ, ಈ ಮೂಲಕ ಕಂದಾಯ ಸಚಿವ ಆರ್ ಅಶೋಕ್ ಭ್ರಷ್ಟ ಅಧಿಕಾರಿಯ ರಕ್ಷಣೆಗೆ ನಿಂತಿದ್ದಾರೆಂದು ಆರೋಪ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.