ಬೆಂಗಳೂರು: ನಗರದ ಹಲವೆಡೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಅನಗತ್ಯ ಓಡಾಟ ನಿಲ್ಲಿಸಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಮನವಿ ಮಾಡಿದ್ದಾರೆ.
ಅಗತ್ಯ ಕಾರ್ಯಗಳಿಗೆ ಹೊರ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹೋಗಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ವ್ಯಾಪಾರ-ವಹಿವಾಟು ಹಾಗೂ ಇತರ ಕೆಲಸಗಳನ್ನು ನಡೆಸಬೇಕಾಗಿ ವಿನಂತಿಸುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಜ್ಯದಲ್ಲೂ ದಿನೇ ದಿನೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಹಾಗಾಗಿ ತಮ್ಮ ಆರೋಗ್ಯದ ದೃಷ್ಟಿಯಿಂದ ಅನಗತ್ಯ ಓಡಾಟ ನಿಲ್ಲಿಸಬೇಕಾಗಿದೆ. ಸೋಂಕಿನಿಂದ ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕಾಗಿದೆ. ಹೀಗಾಗಿ ಅಗತ್ಯ ಇದ್ದರೆ ಮಾತ್ರ ಮನೆಯಿಂದ ಹೊರಗೆ ಬನ್ನಿ. ಅನವಶ್ಯಕವಾಗಿ ಹೊರಗಡೆ ಓಡಾಡಬೇಡಿ ಎಂದು ಮನವಿ ಮಾಡಿದ್ದಾರೆ.