ETV Bharat / state

ಸಿದ್ದರಾಮಯ್ಯ ಕುರಿತು ವಿವಾದಿತ ಹೇಳಿಕೆ: ಸದನದಲ್ಲಿ ವಿಷಾದ ವ್ಯಕ್ತಪಡಿಸಿದ ಸಚಿವ ಅಶ್ವತ್ಥನಾರಾಯಣ - Ex CM Siddaramaiah Statements

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ನೀಡಿದ್ದ ವಿವಾದಿತ ಹೇಳಿಕೆಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿಷಾದ ವ್ಯಕ್ತಪಡಿಸಿದರು.

Minister Ashwath Narayan clarification on his statement

author img

By

Published : Feb 16, 2023, 3:43 PM IST

Updated : Feb 16, 2023, 6:32 PM IST

ಬೆಂಗಳೂರು: ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಿಪ್ಪುವಿಗೆ ಹೋಲಿಕೆ ಮಾಡಿದ್ದೇನೆ. ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಬೇಕೆಂದು ಹೇಳಿದ್ದೇನೆಯೇ ಹೊರತು, ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿಲ್ಲ. ನನ್ನ ಮಾತಿನಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿಧಾನಸಭೆಯಲ್ಲಿ ಹೇಳಿದರು.

ಶೂನ್ಯವೇಳೆಯಲ್ಲಿ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಮಾಡಿದ ಪ್ರಸ್ತಾವಕ್ಕೆ ಪ್ರತಿಕ್ರಿಯಿಸಿದ ಅಶ್ವತ್ಥನಾರಾಯಣ, ನಾವು ಯುದ್ಧ ಕಾಲದಲ್ಲಿ ಇಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಅಂದು ಯುದ್ಧ ನಡೆಯುತ್ತಿತ್ತು, ಇಂದು ಚುನಾವಣೆ ನಡೆಯುತ್ತದೆ. ನಾನು ರಾಜಕೀಯ ಪರಿಭಾಷೆಯಲ್ಲಿ ಮಾತನಾಡಿದ್ದೇನೆಯೇ ಹೊರತು, ವೈಯಕ್ತಿಕವಾಗಿ ಅವರ ಬಗ್ಗೆ ದ್ವೇಷವಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯರ ಬಗ್ಗೆ ನನಗೆ ಗೌರವವಿದೆ. ರಾಜಕೀಯವಾಗಿ ಮತ್ತು ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯವಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಬೇಕು ಎಂದು ನಮ್ಮ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದೆ. ಟಿಪ್ಪು ಒಬ್ಬ ಮತಾಂಧ. ಆತನನ್ನು ಯಾರು ವೈಭವೀಕರಿಸುತ್ತಾರೋ ಅಂಥವರನ್ನು ಸೋಲಿಸಲು ಹೇಳಿದ್ದೆ. ಕಳೆದ ಹಲವು ದಿನಗಳಿಂದ ಟಿಪ್ಪುವನ್ನು ಅತಿಯಾಗಿ ವೈಭವೀಕರಿಸಲಾಗುತ್ತದೆ, ಹೀಗಾಗಿ ಹೇಳಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಟಿಪ್ಪು ಒಬ್ಬ ನರಹಂತಕ. ಅಂಥವರನ್ನು ವೈಭವೀಕರಿಸಿದವರಿಗೆ ಇದೇ ರೀತಿ ಹೇಳಬೇಕಾಗುತ್ತದೆ ಎಂದರು. ಆಗ ಸದನದಲ್ಲಿ ಮಾತಿನ ಚಕಮಕಿ, ಆರೋಪ-ಪ್ರತ್ಯಾರೋಪ ನಡೆದು ಯಾರು ಏನು ಹೇಳುತ್ತಿದ್ದಾರೆ ಎಂಬುದು ತಿಳಿಯದ ಪರಿಸ್ಥಿತಿ ನಿರ್ಮಾಣವಾಯಿತು. ಅಶ್ವತ್ಥನಾರಾಯಣ ಬೆಂಬಲಕ್ಕೆ ಸಚಿವ ಸುಧಾಕರ್ ಮತ್ತಿತರರು ಧಾವಿಸಿದರು.

ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಯು.ಟಿ.ಖಾದರ್, ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ, ಅಶಾಂತಿ ಸೃಷ್ಟಿಸುವ ಹೇಳಿಕೆಗಳನ್ನು ಸಚಿವರು ಮತ್ತು ಶಾಸಕರು ನೀಡುತ್ತಿದ್ದಾರೆ. ಉಳ್ಳಾಲದಿಂದ ಹಿಡಿದು, ಚಿಕ್ಕಮಗಳೂರು, ಮತ್ತಿತರ ಕಡೆ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಂವಿಧಾನಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರ ಬಾಯಿಯಿಂದಲೇ ಇಂತಹ ಹೇಳಿಕೆಗಳು ಬಂದರೆ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರು ಯಾರು? ಬಿಜೆಪಿಯವರ ಕೋಮು ಭಾವನೆಗಳನ್ನು ಕೆರಳಿಸಿ ನಮ್ಮನ್ನು ಪ್ರಚೋಧನೆ ಮಾಡುತ್ತಿದ್ದಾರೆ, ಯಾರೂ ಅವರ ಬಲೆಯಲ್ಲಿ ಬೀಳಬಾರದು ಎಂದು ನಾವು ಹೇಳಿಕೆ ಕೊಟ್ಟಿರಲಿಲ್ಲ. ಆದರೆ, ರಾಜ್ಯದ ಒಬ್ಬ ಜನನಾಯಕ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದಾಗ ಸುಮ್ಮನಿರಬೇಕೇ ಎಂದು ಪ್ರಶ್ನಿಸಿದರು.

ಈ ದೇಶದಲ್ಲಿ ಕಲಿಯದೇ ಇರುವವರಿಗಿಂತ ಕಲಿತವರಿಂದಲೇ ಹೆಚ್ಚು ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಅಶ್ವತ್ಥನಾರಾಯಣ ಅವರು ಮೂಲತಃ ವೈದ್ಯರು. ಅವರ ಬಾಯಿಂದ ಇಂತಹ ಮಾತುಗಳು ಬರಬಾರದು. ಬಾಯಿಗೆ ಬಂದಂತೆ ಕೆಲವರು ಮಾತನಾಡುತ್ತಿದ್ದಾರೆ. ಮೀರ್ ಸಾಧಿಕ್ ವಂಶಸ್ಥರು ತುಂಬಾ ಜನರಿದ್ದಾರೆ. ನೇರಾನೇರಾ ಹೋರಾಟ ಮಾಡದೇ ಹಿಂದಿನಿಂದ ಜನರನ್ನು ಪ್ರಚೋದನೆ ಮಾಡುತ್ತಾರೆ. ಅದರಲ್ಲೂ ಹಿರಿಯ ಸಚಿವರ ಬಾಯಲ್ಲಿ ಇಂಥ ಮಾತು ಬರಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಅಶ್ವತ್ಥನಾರಾಯಣ ಅವರ ವಿರುದ್ಧ ಸ್ವಯಂ ದೂರು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು. ಸುಪ್ರೀಂ ಕೋರ್ಟ್ ಕೂಡ ದ್ವೇಷ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಇದನ್ನೂ ಓದಿ: 'ಬೊಮ್ಮಾಯಿ ಸರ್ಕಾರ 'BAD', ರಾಜ್ಯದ ಅಭಿವೃದ್ಧಿಗೆ ಶಾಪ': ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಾಪ್ರಹಾರ

Last Updated : Feb 16, 2023, 6:32 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.