ಬೆಂಗಳೂರು: ಎಲ್ಲೆಲ್ಲಿ ಕಾಲೇಜು ಅಭಿವೃದ್ಧಿ ಮಂಡಳಿಯವರು ಸಮವಸ್ತ್ರ ನಿಗದಿ ಮಾಡಿದ್ದಾರೋ ಅಲ್ಲಿ ಹಿಜಾಬ್, ಕೇಸರಿ ಶಾಲು ಹಾಕಲು ಅವಕಾಶ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಗೊಂದಲ ಬೇಡ. ಸ್ಪಷ್ಟವಾಗಿ ಹೇಳಿಕೆ ನೀಡಲಾಗಿದೆ. ಈಗಲೂ ಪದವಿ ಕಾಲೇಜುಗಳಲ್ಲಿ ಎಲ್ಲೆಲ್ಲಿ ಕಾಲೇಜು ಅಭಿವೃದ್ಧಿ ಮಂಡಳಿಯವರು ಸಮವಸ್ತ್ರ ನಿಗದಿ ಮಾಡಿದ್ದಾರೆ. ಅಲ್ಲಿ ಹಿಜಾಬ್ ಆಗಲಿ, ಕೇಸರಿ ಶಾಲ್ ಆಗಲಿ ಹಾಕುವಂತೆ ಇಲ್ಲ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಯಾವ ಕಾಲೇಜುಗಳಲ್ಲಿ ಸಮವಸ್ತ್ರ ನಿಗದಿ ಮಾಡಿಲ್ಲವೋ ಅಲ್ಲಿ ಯಾವುದೇ ರೀತಿಯ ನಿರ್ಬಂಧ ಇಲ್ಲ. ಹಿಜಾಬ್, ಕೇಸರಿ ಶಾಲು ಏನು ಬೇಕಾದ್ರೂ ಹಾಕಿಕೊಳ್ಳಬಹುದು. ಈ ಬಗ್ಗೆ ನಾನೂ ಈಗಾಗಲೇ ಲಿಖಿತ ರೂಪದಲ್ಲಿ ತಿಳಿಸಿದ್ದೇನೆ ಎಂದರು.
ಇದನ್ನೂ ಓದಿ: ಹಿಜಾಬ್ ವಿವಾದ: ಅರ್ಜಿಗಳ ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್