ETV Bharat / state

ಬಿಟಿಎಸ್ ಬೆಳ್ಳಿ ಹಬ್ಬ ಉದ್ಘಾಟನೆಗೆ ಪ್ರಧಾನಿಗೆ ಆಹ್ವಾನ: ಸಚಿವ ಅಶ್ವತ್ಥ್ ನಾರಾಯಣ - ಬಿಟಿಎಸ್ ಬೆಳ್ಳಿ ಹಬ್ಬ ಕುರಿತು ಸಚಿವ ಅಶ್ವತ್ಥ್ ನಾರಾಯಣ್ ಮಾಹಿತಿ

ಬಿಟಿಎಸ್-25 ಸಮಾವೇಶದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ಹೇಳಿದರು.

ಸಚಿವ ಅಶ್ವತ್ಥ್​ ನಾರಾಯಣ
ಸಚಿವ ಅಶ್ವತ್ಥ್​ ನಾರಾಯಣ
author img

By

Published : Jun 8, 2022, 10:02 PM IST

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ (ಬಿಟಿಎಸ್) 25ನೇ ವರ್ಷದ ಸಮಾವೇಶವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಜಾಗತಿಕ ನಾವೀನ್ಯತಾ ಸಹಭಾಗಿ (ಜಿಐಎ) ರಾಷ್ಟ್ರಗಳ ಕಾನ್ಸುಲ್ ಜನರಲ್, ಡೆಪ್ಯುಟಿ ಕಾನ್ಸುಲ್ ಜನರಲ್ ಮತ್ತು ಗೌರವ ಕಾನ್ಸುಲ್ ಜನರಲ್‌ಗಳೊಂದಿಗೆ ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ಬುಧವಾರ ಸಮಾಲೋಚನೆ ನಡೆಸಿದರು.

ಬಿಟಿಎಸ್-25ರ ಭಾಗವಾಗಿರುವ ಜಾಗತಿಕ ನಾವೀನ್ಯತಾ ಸಹಭಾಗಿ (ಜಿಐಎ) ದೇಶಗಳನ್ನು ಆಹ್ವಾನಿಸಲು ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟಿಎಸ್-25 ಸಮಾವೇಶದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದರು.

ರಾಜ್ಯವು ಈಗಾಗಲೇ 30ಕ್ಕೂ ಹೆಚ್ಚು ಜಿಐಎ ಸಹಭಾಗಿಗಳನ್ನು ಹೊಂದಿದ್ದು, 50ಕ್ಕೂ ಹೆಚ್ಚು ಮಹತ್ವದ ಯೋಜನೆಗಳು ಪ್ರಗತಿಯಲ್ಲಿವೆ. ಮುಖ್ಯವಾಗಿ ಅಗ್ರಿಟೆಕ್, ಫಿನ್ಟೆಕ್, ಮೆಡ್-ಟೆಕ್, ಕೃತಕ ಬುದ್ಧಿಮತ್ತೆ, ಮಶೀನ್ ಲರ್ನಿಂಗ್ ಮತ್ತು ಇಂಟರ್​ನೆಟ್​ ಆಫ್ ಥಿಂಗ್ಸ್ (ಐಒಟಿ) ಕ್ಷೇತ್ರಗಳಲ್ಲಿ ನಾವೀನ್ಯತಾ ಸಹಭಾಗಿತ್ವದ ಒಡಂಬಡಿಕೆಗಳನ್ನು ಮಾಡಿಕೊಳ್ಳಲಾಗಿದೆ.

25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶವು ಟೆಕ್ 4 ನೆಕ್ಸ್-ಜೆನ್ ಘೋಷವಾಕ್ಯದೊಂದಿಗೆ ನ. 16, 17 ಮತ್ತು 18ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, 48ಕ್ಕೂ ಹೆಚ್ಚು ದೇಶಗಳು ಪಾಲ್ಗೊಳ್ಳಲಿವೆ. ಬೆಂಗಳೂರಿನಲ್ಲಿ ಈಗಾಗಲೇ 40 ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ಇವೆ. ಇನ್ನೂ ಹೆಚ್ಚಿನ ಕಂಪನಿಗಳ ಇಂತಹ ಕೇಂದ್ರಗಳು ಇಲ್ಲಿ ಆರಂಭಗೊಳ್ಳಬೇಕು. ಇದಕ್ಕೆ ಪೂರಕವಾಗಿ ರಾಜ್ಯವು ಸ್ಟಾರ್ಟ್​ ಅಪ್​ ಕರ್ನಾಟಕ, ಇನ್ನೊವೇಟ್ ಕರ್ನಾಟಕ ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಶನ್ ತರಹದ ಉಪಕ್ರಮಗಳನ್ನು ಕೈಗೊಂಡಿದೆ.

ಅಭಿವೃದ್ಧಿ ವಿಚಾರದಲ್ಲಿ ಸುಸ್ಥಿರತೆ ಮರೆಯಬಾರದು: ಅಭಿವೃದ್ಧಿ ವಿಚಾರದಲ್ಲಿ ಸುಸ್ಥಿರತೆ, ಕೈಗೆಟುಕುವಿಕೆ, ಪರಿಸರಸ್ನೇಹಿ ತಂತ್ರಜ್ಞಾನ ಮತ್ತು ಮಾಲಿನ್ಯರಹಿತತೆ ಇವುಗಳನ್ನು ಮರೆಯಬಾರದು.

ಜಾಗತಿಕ ಮಟ್ಟದ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದಲೆಂದೇ ಕರ್ನಾಟಕವು 2017ರಲ್ಲೇ ಜಿಐಎ ಉಪಕ್ರಮ ಆರಂಭಿಸಿದೆ. ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ರಾಷ್ಟ್ರಗಳೊಂದಿಗೆ ಬಹುಪಕ್ಷೀಯ ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯದ ಆರ್ಥಿಕತೆಯನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ.

39 ಯೂನಿಕಾರ್ನ್ ಕಂಪನಿಗಳು ನಗರದಲ್ಲಿವೆ: ಭಾರತದಲ್ಲಿರುವ 100 ಯೂನಿಕಾರ್ನ್ ಕಂಪನಿಗಳ ಪೈಕಿ 39 ಬೆಂಗಳೂರಿನಲ್ಲೇ ಇವೆ. ನಾವೀನ್ಯತಾ ಸಹಭಾಗಿತ್ವಕ್ಕೆ ಬೇಕಾದ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯ ಪರಿಸರವೂ ನಮ್ಮಲ್ಲಿದೆ.

ದೇಶದ ಶೇ. 38ರಷ್ಟು ಹೂಡಿಕೆ: ಕಳೆದ ವರ್ಷ (2021-22) ಭಾರತಕ್ಕೆ 83.57 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ಹರಿದುಬಂದಿದೆ. ಇದರಲ್ಲಿ ಶೇ. 38ರಷ್ಟು ಹೂಡಿಕೆ ರಾಜ್ಯದಲ್ಲೇ ಆಗಿದೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ನಾನಾ ದೇಶಗಳ ರಾಜತಾಂತ್ರಿಕ ಪ್ರತಿನಿಧಿಗಳು ಮಾತನಾಡಿ, ಸೈಬರ್ ಸೆಕ್ಯುರಿಟಿ, ಏರೋಸ್ಪೇಸ್, ರೋಬೋಟಿಕ್ಸ್, ಐಒಟಿ, ಅಗ್ರಿಟೆಕ್, ಫಿನ್ಟೆಕ್, ಮೆಡ್-ಟೆಕ್ ಮುಂತಾದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆ ಸಹಭಾಗಿತ್ವ ಸ್ಥಾಪನೆಗೆ ಒಲವು ವ್ಯಕ್ತಪಡಿಸಿದರು.

ಇದನ್ನೂ ಓದಿ: ನವೋದ್ಯಮಗಳು ಆದಾಯದಲ್ಲಿ R&Dಗೆ ಶೇ.30ರಷ್ಟು ಹಣ ಮೀಸಲಿಡಿ: ಸಚಿವ ಅಶ್ವತ್ಥನಾರಾಯಣ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.