ETV Bharat / state

ನಮ್ಮ ಪಕ್ಷ ಕಾಂಗ್ರೆಸ್, ಜೆಡಿಎಸ್ ನಂತೆ ಪ್ರೈವೇಟ್ ಕಂಪನಿಯಲ್ಲ: ಸಚಿವ ಅಶ್ವತ್ಥ್ ನಾರಾಯಣ - ಸ್ವಾತಂತ್ರ್ಯ ಅಮೃತ ಮಹೋತ್ಸವ

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಅಶ್ವತ್ಥನಾರಾಯಣ ಅವರು, ಕಾಂಗ್ರೆಸ್​ ಮತ್ತು ಜೆಡಿಎಸ್​ ಪಕ್ಷಗಳನ್ನು ಒಂದು ಪ್ರೈವೇಟ್​ ಕಂಪನಿಗೆ ಹೋಲಿಸುವ ಮೂಲಕ ಅವುಗಳ ವಿರುದ್ಧ ಕಿಡಿಕಾರಿದರು.

Minister Ashwatthanarayan
ಸಚಿವ ಅಶ್ವತ್ಥ್ ನಾರಾಯಣ
author img

By

Published : Aug 9, 2022, 3:17 PM IST

ಬೆಂಗಳೂರು: ನಮ್ಮ ಪಕ್ಷ, ನಮ್ಮ ಸರ್ಕಾರ ಜನಪರವಾಗಿದೆ. ಇದು ಯಾವುದೋ ಕಾಂಗ್ರೆಸ್, ಜೆಡಿಎಸ್​ನಂತೆ ಪ್ರೈವೇಟ್ ಕಂಪನಿ ತರ ಅಲ್ಲ ಎಂದು ಸಚಿವ ಅಶ್ವತ್ಥನಾರಾಯಣ ಹೇಳಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ನಾವು ಚೆನ್ನಾಗಿ ಕೆಲಸ ಮಾಡ್ತಿದ್ದೇವೆ. ನಮ್ಮಲ್ಲಿ ಯಾರು ಏನು ಬೇಕಾದರೂ ಆಗಬಹುದು. ಆದರೆ ಇವೆರಡರಲ್ಲಿ ಕುಟುಂಬಕ್ಕಷ್ಟೇ ಅಧಿಕಾರ. ಕಾಂಗ್ರೆಸ್​ನಲ್ಲಿ ಸೋನಿಯಾ ಗಾಂಧಿ ಕಂಪನಿ, ರಾಹುಲ್ ಗಾಂಧಿ ಕಂಪನಿ, ಪ್ರಿಯಾಂಕಾ ಗಾಂಧಿ ಕಂಪನಿ ಇರುವುದು. ರಾಮನಗರದಲ್ಲಿ ಕುಮಾರಸ್ವಾಮಿ ಕಂಪನಿ ಇದೆ. ಈ ಸಮಾಜದಲ್ಲಿ ಯಾವುದಾದರೂ ಅರ್ಥ ಇಲ್ಲದೆ ಇರೋ ಪಕ್ಷಗಳು ಅಂದರೆ ಅದು ಇವುಗಳೇ. ಬರುವ ಚುನಾವಣೆಯಲ್ಲಿ ರಾಮನಗರದಲ್ಲಿ ನಾವು ಮೆಜಾರಿಟಿ ತೆಗೆದುಕೊಳ್ತೇವೆ. ಅಲ್ಲಿ ಎಲ್ಲಾ ತರ ಇದ್ದಾರೆ, ಬಂಡೆ ಜೊತೆ ಕುಮಾರಸ್ವಾಮಿನೂ ಇದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಅಧಿವೇಶನ ಕರೆಯಲು ಸರ್ಕಾರ ಹಿಂದೇಟು ಹಾಕುವ ಬಗ್ಗೆ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಎಲ್ಲಿದ್ಯಪ್ಪಾ ಕುಮಾರಸ್ವಾಮಿ?. ಅಧಿವೇಶನ ಇದ್ದಾಗಲೇ ಅವರು ಸದನಕ್ಕೆ ಬರೋದಿಲ್ಲ. ಎಲ್ಲಿದ್ಯಪ್ಪ ಕುಮಾರಸ್ವಾಮಿ ಅಂತಾ ಅವರನ್ನು ಹುಡುಕಬೇಕು. ಸದನ ಕರೀರಿ ಅನ್ನೋದು, ಆಮೇಲೆ ಬರದೆ ಇರೋದು. ಸಿದ್ದರಾಮಯ್ಯ ಮಾತಿನಂತೆ ಇವರೂ ಮಾತಾಡ್ತಿರೋದು. ಬಾಯಿಗೆ ಬಂದಂತೆ, ದಿಕ್ಕು ಇಲ್ಲದಂತೆ ಗುಂಡು ಹೊಡೆಯುತ್ತಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ: ನಾನು ಎಂಎಲ್ಎ, ಮಂತ್ರಿ, ಮುಖ್ಯಮಂತ್ರಿ ಆಗಲು ಅಂಬೇಡ್ಕರ್ ಕೊಟ್ಟಂತಹ ಸಂವಿಧಾನ ಕಾರಣ: ಸಿದ್ದರಾಮಯ್ಯ

ಬಿಜೆಪಿಯವರು ನಾಟಕ ಮಾಡ್ತಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಯಾರಿಗಾದರೂ ಚೆನ್ನಾಗಿ ನಾಟಕ ಮಾಡೋಕೆ ಬರುತ್ತೆ ಅಂದರೆ ಅದು ಸಿದ್ದರಾಮಯ್ಯನವರಿಗೆ ಮಾತ್ರ. ನಾಟಕದ ಅನುಭವವನ್ನು ಅವರು ಬೇರೆಯವರಿಗೆ ಹೇಳ್ತಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡೋದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲಿ ತಪ್ಪು ಕಂಡು ಹಿಡಿಯೋದು, ದೋಷ ಎತ್ತಿ ಹಿಡಿಯೋದು ಸರಿಯಲ್ಲ.

ಒಳ್ಳೆಯದು ಮಾಡೋಕೆ ಆಗಿಲ್ಲ ಅಂದರೆ ಸಮಾಜದಲ್ಲಿ ಗೊಂದಲ ಸೃಷ್ಟಿಸಬೇಡಿ. ಒಳ್ಳೆಯದು ಮಾಡೋಕೆ ಯೋಗ್ಯತೆ ಇಲ್ಲ ಅಂದರೆ ಕೆಟ್ಟದ್ದನ್ನು ಹೇಳಬೇಡಿ. ನಿಮ್ಮ ಭಕ್ತಿ ದೇಶದ ಮೇಲೆ ಇದ್ರೆ, ಅದನ್ನು ಕರ್ತವ್ಯದ ಮೂಲಕ ಮಾಡಿ. ಅದು ಬಿಟ್ಟು ಇಂತಹ ಡೋಂಗಿ ಹೇಳಿಕೆಗಳನ್ನು ನಿಲ್ಲಿಸಿ ಎಂದು ಸಚಿವ ಅಶ್ವತ್ಥನಾರಾಯಣ್ ವಾಗ್ದಾಳಿ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.