ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಮನೆ ಮುಂದಿದ್ದ ಕಾರು ಧ್ವಂಸ ಮಾಡಿ ಕಾನೂನು ಕೈಗೆತ್ತಿಕೊಂಡವರನ್ನು ತಪ್ಪಿಸಿಕೊಳ್ಳಲು ಬಿಡಲ್ಲ. ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಕೈಗೆತ್ತಿಕೊಂಡವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಈ ಘಟನೆಯನ್ನು ಸಂಪೂರ್ಣವಾಗಿ ನಾನು ಖಂಡಿಸುತ್ತೇನೆ. ಇಂತಹ ಸಮಸ್ಯೆಗಳು ನಿರ್ಮಾಣವಾಗಬಾರದು. ಈ ಕೃತ್ಯವೆಸಗಿದ ವ್ಯಕ್ತಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.
ಓದಿ: ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಕಿರಾತಕರು - CCTVಯಲ್ಲಿ ದುಷ್ಕೃತ್ಯ ಸೆರೆ
ಈ ಘಟನೆ ಹಿಂದೆ ಯಾರ ಕೈವಾಡ ಇದೆ ಎಂಬುವುದನ್ನು ಪತ್ತೆ ಹಚ್ಚುವ ಕೆಲಸ ಆಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದರು.