ETV Bharat / state

ಕೃಷಿ ಉತ್ಪಾದನೆ‌ ಹೆಚ್ಚಳಕ್ಕೆ ಚಿಂತನೆ, ಸೌರಶಕ್ತಿ ಬ್ಲಾಕ್‌ಗಳಿಗಾಗಿ ಕೇಂದ್ರಕ್ಕೆ ಮನವಿ: ಬಿ‌.ಸಿ.ಪಾಟೀಲ್ - ಕೇಂದ್ರ ಸರ್ಕಾರಕ್ಕೆ ಕೃಷಿ ಸಚಿವ ಬಿ.ಸಿ. ಪಾಟಿಲ್ ಮನವಿ

ಕೇಂದ್ರ ಇಂಧನ ಸಚಿವ ಆರ್.ಕೆ ಸಿಂಗ್ ಭೇಟಿ ಮಾಡಿ ಸೋಲಾರ್ ಬ್ಲಾಕ್ ನೀಡುವ ಬಗ್ಗೆ ಮನವಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಗಮನಕ್ಕೆ ರೈತ ಬೆಳೆ ಸಮೀಕ್ಷೆ ಆ್ಯಪ್ ಯಶಸ್ವಿಯಾಗುತ್ತಿರುವ ಬಗ್ಗೆ ಹಾಗೂ ಆ್ಯಪ್ ಸಮೀಕ್ಷೆಯಿಂದಾಗುತ್ತಿರುವ ಅನುಕೂಲದ ಬಗ್ಗೆ ವಿವರಿಸಲಾಗಿದೆ‌ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದರು.

minister-b-c-patil-meets-central-minister-r-k-singh
ಬಿ‌.ಸಿ.ಪಾಟೀಲ್
author img

By

Published : Aug 29, 2020, 1:46 AM IST

ನವದೆಹಲಿ/ಬೆಂಗಳೂರು : ಕರ್ನಾಟಕದಲ್ಲಿ ಸೌರಶಕ್ತಿ ಯೋಜನೆ ಬಲವರ್ಧನೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಕೃಷಿ ಸಚಿವ ಬಿ.ಸಿ. ಪಾಟಿಲ್ ಮನವಿ ಮಾಡಿದರು.

ನವದೆಹಲಿಯಲ್ಲಿ ಕೇಂದ್ರ ಇಂಧನ ಖಾತೆ ಸಚಿವ ಆರ್.ಕೆ ಸಿಂಗ್ ಅವರನ್ನು ಕೃಷಿ ಸಚಿವ ಬಿ.ಸಿ ಪಾಟೀಲ್ ಭೇಟಿ ಮಾಡಿದರು. ಸೌರಶಕ್ತಿ ಬಲವರ್ಧನೆ ಸಂಬಂಧ ಚರ್ಚಿಸಿ ರಾಜ್ಯಕ್ಕೆ ಸೌರಶಕ್ತಿಗಾಗಿ ಹೆಚ್ಚುವರಿ 10 ಬ್ಲಾಕ್‌ಗಳನ್ನು ನೀಡುವಂತೆ ಮನವಿ ಸಲ್ಲಿಸಿದರು.

ಭಾರತವು ಸೌರಶಕ್ತಿ ಬಳಕೆಗೆ ಹೆಚ್ಚು ಸೂಕ್ತವಾದ ಭೂಪ್ರದೇಶ ಹೊಂದಿರುವುದರಿಂದ ಕೃಷಿಯಲ್ಲಿ ಸೌರಶಕ್ತಿಯನ್ನು ಬಳಸಿ ಉತ್ಪಾದನೆಯನ್ನು ಹೆಚ್ಚಿಸುವುದು ಅತ್ಯವಶ್ಯಕವಾಗಿದೆ. ಕರ್ನಾಟಕ ರಾಜ್ಯದಲ್ಲಿ ಕೃಷಿಯಲ್ಲಿ ಸೌರಶಕ್ತಿ ಮೂಲಕ ನೀರಾವರಿ ಬಳಸುವುದರಿಂದ ಹೆಚ್ಚು ಉತ್ಪಾದನೆ ಮಾಡಬಹುದಾಗಿದೆ. ಹಾಗಾಗಿ ರಾಜ್ಯಕ್ಕೆ ಹೆಚ್ಚಿನ ಅವಕಾಶ ನೀಡುವಂತೆ ಮನವಿ ಮಾಡಿದರು.

ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ.ಸಿ. ಪಾಟೀಲ್, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇನೆ‌. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಯೂರಿಯಾ ಗೊಬ್ಬರ ಕೊರತೆಯಾಗದಂತೆ ಕೇಂದ್ರ ರಾಸಾಯನಿಕ ಗೊಬ್ಬರ ಸಚಿವ ಡಿ.ವಿ.. ಸದಾನಂದಗೌಡ ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ‌. ಅಂತೆಯೇ ಕೇಂದ್ರದ ಮತ್ತೋರ್ವ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿ ನಡೆಸಿ ಅಂಕೋಲಾ-ಹುಬ್ಬಳ್ಳಿ ರೈಲ್ವೆ ಯೋಜನೆ ಬಗ್ಗೆ ಚರ್ಚಿಸಲಾಗಿದೆ‌. ಹುಬ್ಬಳ್ಳಿ ಅಂಕೋಲಾ ರೈಲ್ವೆ ಯೋಜನೆ ಬಗ್ಗೆ ಪ್ರಕಾಶ ಜಾವಡೇಕರ್ ಪೂರಕವಾಗಿ ಸ್ಪಂದಿಸಿದ್ದಾರೆ. ಹಾಗೆಯೇ ಸಂಸದ ಪ್ರಹ್ಲಾದ್ ಜೋಶಿ ಅವರ ಮುಂದೆಯೂ ಇಲಾಖೆ ಪರವಾಗಿ ಹಲವು ಬೇಡಿಕೆಗಳನ್ನು ಇಡಲಾಗಿದೆ‌ ಎಂದು ವಿವರಿಸಿದರು.

ಕೇಂದ್ರ ಇಂಧನ ಸಚಿವ ಆರ್.ಕೆ ಸಿಂಗ್ ಭೇಟಿ ಮಾಡಿ ಸೋಲಾರ್ ಬ್ಲಾಕ್ ನೀಡುವ ಬಗ್ಗೆ ಮನವಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಗಮನಕ್ಕೆ ರೈತ ಬೆಳೆ ಸಮೀಕ್ಷೆ ಆ್ಯಪ್ ಯಶಸ್ವಿಯಾಗುತ್ತಿರುವ ಬಗ್ಗೆ ಹಾಗೂ ಆ್ಯಪ್ ಸಮೀಕ್ಷೆಯಿಂದಾಗುತ್ತಿರುವ ಅನುಕೂಲದ ಬಗ್ಗೆ ವಿವರಿಸಲಾಗಿದೆ‌. ಅಲ್ಲದೇ ರಾಜ್ಯದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳಿಗೆ ಅನುದಾನಕ್ಕೆ ಮನವಿ ಮಾಡಿರುವುದಾಗಿ ಬಿ.ಸಿ.ಪಾಟೀಲ್ ಹೇಳಿದರು.

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ನಡೆದ ದಾಂಧಲೆ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್, ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಮಹಾರಾಜ್ ಇಬ್ಬರು ದೇಶಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಾರೆ. ಇಂತಹ ಹೋರಾಟಗಾರರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಪ್ರಯತ್ನಗಳನ್ನು ಕೆಲವು ಕಿಡಿಗೇಡಿಗಳು ಮಾಡುತ್ತಿರುವುದು ದುರದೃಷ್ಟಕರ ಬೆಳವಣಿಗೆ. ತಪ್ಪಿತಸ್ಥರು ಯಾರೇ ಆಗಿರಲಿ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.