ಬೆಂಗಳೂರು: ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದು, ತಮ್ಮ ಗಾಯನದಿಂದಲ್ಲೇ ಭಾರತದ ಸಂಗೀತ ರಸಿಕರನ್ನು ಮುಗ್ದಗೊಳಿಸಿದ್ದ ಎಸ್.ಪಿ ಬಾಲಸುಬ್ರಹ್ಮಣ್ಯಂ ಇಂದು ಮಧ್ಯಾಹ್ನ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿರುವುದು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಸ್ವರ ಭಾಸ್ಕರ ಎಂದೇ ಹೆಸರಾಗಿದ್ದ ಬಾಲಸುಬ್ರಹ್ಮಣ್ಯಂ ಅವರ ನಿಧನ ಚಿತ್ರರಂಗಕ್ಕೆ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ಆಘಾತವಾಗಿದೆ. ಅವರ ಹಾಡುಗಳನ್ನು ಕೇಳುವ ಮೂಲಕ ಅವರ ಬಗ್ಗೆ ಅಭಿಮಾನ ಇಟ್ಟುಕೊಂಡಿದ್ದ ನನಗೆ ನಿಜಕ್ಕೂ ದುಃಖ ಇಮ್ಮಡಿಸಿದೆ.
ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ, ಅಪ್ತ ಬಳಗಕ್ಕೆ, ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.