ಬೆಂಗಳೂರು : ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ( ಬೈರತಿ) ಅವರು ಇಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ಭೇಟಿ ಮಾಡಿದ ಸಚಿವರು, ಸಭಾಧ್ಯಕ್ಷರ ಕ್ಷೇತ್ರವಾಗಿರುವ ಶಿರಸಿ ವ್ಯಾಪ್ತಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಆಗಬೇಕಾದ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು.
ಇದೇ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಕಾಗೇರಿ ಶಿರಸಿ ಕ್ಷೇತ್ರದಲ್ಲಿ ಆಗಬೇಕಿರುವ ಕಾಮಗಾರಿಗಳ ಕುರಿತ ಮಾಹಿತಿಯನ್ನು ಸಚಿವರಿಗೆ ನೀಡಿದರು.