ETV Bharat / state

ಪರಿಸರ ಸ್ನೇಹಿ ದೀಪಾವಳಿಗೆ ಒತ್ತು: ಗೋಮಯ ಹಣತೆ ಬಳಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ - Minister BC Patil latest news

ಈ ಬಾರಿ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಗೊಳಿಸಲು ಮುಂದಾಗಿರುವ ಕೃಷಿ ಇಲಾಖೆ ಸಗಣಿಯಿಂದ ತಯಾರಿಸಿದ ಗೋಮಯ ಹಣತೆ ಬಳಸಲು‌ ಮುಂದಾಗಿದೆ.

BC Patil
BC Patil
author img

By

Published : Oct 24, 2020, 6:54 PM IST

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯನ್ನ ಪರಿಸರ ಸ್ನೇಹಿ ದೀಪಾವಳಿಯನ್ನಾಗಿ ಆಚರಿಸಲು ಒತ್ತು ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಈ ಬಾರಿಯ ಹಬ್ಬವನ್ನು ಕಾಮಧೇನು ದೀಪಾವಳಿಯನ್ನಾಗಿಸಲು ಕರೆ ನೀಡಿದ್ದಾರೆ.

ರಾಸಾಯನಿಕಯುಕ್ತ ಹಣತೆ, ಅಪಾಯಕಾರಿ ಪಟಾಕಿಗಳನ್ನು ಬಳಸುವುದನ್ನು ಬಿಟ್ಟು ಮನಸಿಗೆ ಮುದ ನೀಡುವ ಹಾನಿಕಾರಕವಲ್ಲದ ಗೋಮಯ ದೀಪಗಳನ್ನು ಬಳಸಲು ಸಲಹೆ ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೈತರ ಸ್ವಾವಲಂಬನೆ ಹಾಗೂ ಆದಾಯ ದ್ವಿಗುಣ ಕಾರ್ಯ ಯೋಜನೆ ಹಾಗೂ ಆತ್ಮನಿರ್ಭರ್ ಭಾರತ ಸಂಕಲ್ಪವನ್ನು ಸಾಕಾರ ಗೊಳಿಸಲು ಕೇಂದ್ರ ಪಶು ಸಂಗೋಪನಾ ಸಚಿವಾಲಯದ ರಾಷ್ಟ್ರೀಯ ಕಾಮಧೇನು ಆಯೋಗದಿಂದ ಪ್ರಾಯೋಜಿತವಾದ ಸಗಣಿಯಿಂದ ತಯಾರಿಸಿದ ಗೋಮಯ ಹಣತೆಯನ್ನು ಈ ದೀಪಾವಳಿಯ ಸಂದರ್ಭದಲ್ಲಿ ದೇಶಾದ್ಯಂತ ಉರಿಸುವ ಯೋಜನೆ ರೂಪಿಸಿದೆ.

ಈ ನಿಟ್ಟಿನಲ್ಲಿ ರಾಷ್ಟ್ರೀಯ ಕಾಮಧೇನು ಆಯೋಗ, ರಾಷ್ಟ್ರೋತ್ಥಾನ ಗೋಶಾಲೆ, ಗೋಸೇವಾ ಗತಿವಿಧಿ ಹಾಗೂ ಪ್ರಾಣಿ ಕಲ್ಯಾಣ ಮಂಡಳಿ ಈ ಬಾರಿಯ ದೀಪಾವಳಿಯನ್ನು ಪರಿಸರ ಸ್ನೇಹಿ ಗೋಮಯ ದೀಪಗಳಿಂದ ಆಚರಿಸಬೇಕೆಂದು ಯೋಜ‌ನೆ ರೂಪಿಸಿದ್ದು, ದೇಶದಲ್ಲಿ 33 ಕೋಟಿ ದೀಪಗಳನ್ನು ರಾಜ್ಯದಲ್ಲಿ 3 ಕೋಟಿ ಗೋಮಯ ದೀಪಗಳನ್ನು ಬಳಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದ್ದಾರೆ.

ಈ ಗೋಮಯ ದೀಪಗಳನ್ನು ಬಳಸುವುದರಿಂದ ರೈತರ ಬೆನ್ನೆಲುಬಾದ ಭಾರತೀಯ ದೇಶಿ ಗೋತಳಿಯ ಉಳಿವಿಗೆ ಪ್ರಯತ್ನ ಮಾಡುವುದರ ಜೊತೆಗೆ ಆರೋಗ್ಯದ ಹಿತದೃಷ್ಟಿಯಿಂದಲೂ ಉತ್ತಮವಾಗಿದೆ. ಅಲ್ಲದೇ ಇದರಿಂದ ದೇಶೀಯ ದೀಪಗಳಿಗೆ ಉತ್ತೇಜನ ತಯಾರಿಕರಿಗೆ ಪ್ರೋತ್ಸಾಹ ದೊರೆಯುವಂತಾಗುತ್ತದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.