ETV Bharat / state

ಖಾಸಗಿ ಆಸ್ಪತ್ರೆ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚು ಪಡೆದರೆ ಕಠಿಣ ಕ್ರಮ: ಸಚಿವ ಬೈರತಿ

ಮಹದೇವಪುರ ವಲಯ ಕೋವಿಡ್ ಉಸ್ತುವಾರಿಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್​ ಅವರಿಗೆ ನೀಡಲಾಗಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದರು.

Minister Byrati basavaraj
Minister Byrati basavaraj
author img

By

Published : Jul 12, 2020, 2:11 AM IST

ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಕೋವಿಡ್ ಪರೀಕ್ಷೆ ಹಾಗೂ ಚಿಕಿತ್ಸೆಗೋಸ್ಕರ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚು ಪಡೆದರೆ ಆಸ್ಪತ್ರೆ ಪರವಾನಿಗೆ ರದ್ದುಗೊಳಿಸಿ, ಕಾನೂನು ಕ್ರಮ ಜರುಗಿಸುವುದಾಗಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್​ ಎಚ್ಚರಿಕೆ ನೀಡಿದ್ದಾರೆ.

ಸಚಿವ ಬೈರತಿ ಮಾಹಿತಿ

ಮಹದೇವಪುರ ವಲಯ ಕೋವಿಡ್ ಉಸ್ತುವಾರಿಯನ್ನು ನಗರಾಭಿವೃದ್ಧಿ ಸಚಿವರಿಗೆ ವಹಿಸಿರುವ ಕಾರಣ ವೈಟ್ ಫೀಲ್ಡ್ ಖಾಸಗಿ ಹೋಟೆಲ್​ನಲ್ಲಿ ಶಾಸಕ ಅರವಿಂದ ಲಿಂಬಾವಳಿ, ಮಹದೇವಪುರ ವಲಯ ಬಿಬಿಎಂಪಿ ಪಾಲಿಕೆ ಸದಸ್ಯರು, ಆರೋಗ್ಯ ಇಲಾಖೆ, ಪೊಲೀಸ್ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Minister Byrati basavaraj
ಸಭೆ ನಡೆಸಿದ ಬೈರತಿ ಬಸವರಾಜ್​

ಕೋವಿಡ್​ ನಿಯಂತ್ರಿಸುವ ಸಲುವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಪ್ರಮುಖವಾಗಿ ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯಲ್ಲಿ 11 ಗ್ರಾಮ ಪಂಚಾಯತಿ ಹಾಗೂ 17 ಬಿಬಿಎಂಪಿ ವಾರ್ಡ್​​ಗಳಿದ್ದು, ಕೋವಿಡ್ ನಿರ್ವಹಣೆ ಘಟಕ ಸ್ಥಾಪನೆ ಮಾಡಿ ಒಬ್ಬ ನೂಡಲ್​ ಅಧಿಕಾರಿಯನ್ನು ನೇಮಿಸಿ, ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ಪ್ರತಿದಿನ ಕೊರೊನಾ ಪ್ರಕರಣಗಳ ಮಾಹಿತಿ ಕಲೆ ಹಾಕಿ ಅದರ ನಿರ್ವಹಣೆ ಜವಾಬ್ದಾರಿ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ಮಹದೇವಪುರ ವಲಯ ವ್ಯಾಪ್ತಿಗೆ ಒಂದು ಸಹಾಯವಾಣಿ ಕೇಂದ್ರ ತೆರೆದು ಪ್ರತಿ ವಾರ್ಡ್​ಗೆ ಎರಡು ಹಾಗೂ ಪಂಚಾಯತಿಗೆ ಒಂದು ಅಂಬ್ಯುಲೆನ್ಸ್ ನಿಗದಿ ಪಡಿಸಲಾಗಿದೆ. ಪ್ರತಿವಾರ್ಡ್​ಗೆ ಪೊಲೀಸ್ ಇಲಾಖೆ ವತಿಯಿಂದ ವಾರ್ಡ್​​ ವಾಚ್ ಕಮಿಟಿ ನೇಮಕ, ಪೂರ್ವ ತಾಲೂಕಿನ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಕೋವಿಡ್ ಚಿಕಿತ್ಸಾ ಕೇಂದ್ರ ಸ್ಥಾಪನೆ ಸೇರಿದಂತೆ ಇನ್ನು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.