ETV Bharat / state

ಅತಿವೃಷ್ಟಿಯಿಂದ ರಸ್ತೆ ಹಾನಿ : ತಕ್ಷಣದ ಕಾಮಗಾರಿಗೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಸಿ ಸಿ ಪಾಟೀಲ್ - bangalore news

ಕೇವಲ ಅನುದಾನ ಖರ್ಚು ಮಾಡಲು ಯೋಜನೆ ರೂಪಿಸಬಾರದು. ಸಾರ್ವಜನಿಕರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ರಾಷ್ಟ್ರೀಯ ಗುಣಮಟ್ಟಕ್ಕೆ ಪೂರಕವಾಗಿ ಪೂರ್ಣಗೊಳಿಸಬೇಕು. ಯಾವ ವಲಯ ಮತ್ತು ಉಪವಿಭಾಗಗಳಲ್ಲಿ ಸಾಧನೆಗಳು ಕಡಿಮೆ ಇದೆಯೋ, ಅವುಗಳನ್ನು ಆದ್ಯತೆಯ ಮೇರೆಗೆ ಕೈಗೊಂಡು ಪ್ರಗತಿ ಸಾಧಿಸುವುದು ಅತ್ಯಗತ್ಯ..

ತಕ್ಷಣದ ಕಾಮಗಾರಿಗೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಸಿ.ಸಿ.ಪಾಟೀಲ್

author img

By

Published : Aug 18, 2021, 5:23 PM IST

ಬೆಂಗಳೂರು : ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಅನೇಕ ಕಡೆ ರಸ್ತೆ, ಸೇತುವೆ ಮತ್ತಿತರ ಕಟ್ಟಡಗಳು ಹಾನಿಯಾಗಿರುವುದರಿಂದ ಇವುಗಳ ರಿಪೇರಿ ಕೆಲಸಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು. ಜೊತೆಗೆ ಮಂಜೂರಾದ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಗುಣಮಟ್ಟದೊಂದಿಗೆ ಪೂರ್ತಿಗೊಳಿಸಲು ಕ್ರಮಕೈಗೊಳ್ಳಬೇಕೆಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ವಿಕಾಸಸೌಧದಲ್ಲಿ ಇಂದು ಸಂಜೆ ಲೋಕೋಪಯೋಗಿ ಇಲಾಖೆಯ ಎಲ್ಲಾ ವಲಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಈಗಾಗಲೇ ಕಾಮಗಾರಿಗಳನ್ನು ಪೂರೈಸಿರುವ ಗುತ್ತಿಗೆದಾರರಿಗೆ ಅನುದಾನವನ್ನು ಬಿಡುಗಡೆ ಮಾಡಲು ಯಾವುದೇ ರೀತಿಯ ವಿಳಂಬ ಮಾಡಬಾರದು. ಇದರಿಂದ ಅಕ್ರಮಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದರು.

ಯಾವುದೇ ಕಟ್ಟಡಗಳನ್ನು ನಿರ್ಮಿಸುವಾಗ ಮುಂದಿನ 25-30 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು, ಮುಂದೆ ಅತ್ಯಾಧುನಿಕ ಸೌಲಭ್ಯಗಳನ್ನೂ ಅಳವಡಿಸಿಕೊಳ್ಳಲು ಅನುಕೂಲವಾಗುವಂತೆ ಯೋಜನೆಯನ್ನು ವಿನ್ಯಾಸಗೊಳಿಸಿ, ಅನುಷ್ಠಾನಗೊಳಸಬೇಕು ಎಂದು ಅವರು ಸಲಹೆ ನೀಡಿದರು.

ಕೇವಲ ಅನುದಾನ ಖರ್ಚು ಮಾಡಲು ಯೋಜನೆ ರೂಪಿಸಬಾರದು. ಸಾರ್ವಜನಿಕರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ರಾಷ್ಟ್ರೀಯ ಗುಣಮಟ್ಟಕ್ಕೆ ಪೂರಕವಾಗಿ ಪೂರ್ಣಗೊಳಿಸಬೇಕು. ಯಾವ ವಲಯ ಮತ್ತು ಉಪವಿಭಾಗಗಳಲ್ಲಿ ಸಾಧನೆಗಳು ಕಡಿಮೆ ಇದೆಯೋ, ಅವುಗಳನ್ನು ಆದ್ಯತೆಯ ಮೇರೆಗೆ ಕೈಗೊಂಡು ಪ್ರಗತಿ ಸಾಧಿಸುವುದು ಅತ್ಯಗತ್ಯ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಶಾಲಾ-ಕಾಲೇಜುಗಳ ಕಟ್ಟಡವನ್ನು ನಿರ್ಮಿಸುವಾಗ ಶೌಚಾಲಯಗಳಂತಹ ಮೂಲಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ಮತ್ತು ಸುತ್ತಮುತ್ತಲ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಪರಿಸರ ನೈರ್ಮಲ್ಯ ಕಾಪಾಡಿಕೊಳ್ಳಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕ್ರಮಕೈಗೊಳ್ಳಬೇಕೆಂದು ಸಚಿವರು ಸೂಚಿಸಿದರು.

ರಾಜ್ಯದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ಯೋಜನೆಗಳನ್ನು ಅವಲೋಕಿಸಿದ ಸಚಿವರು, ಈ ಯೋಜನೆಗಳ ಸೂಕ್ತ ಅನುಷ್ಠಾನಕ್ಕೆ ಅಗತ್ಯ ಮಾರ್ಗದರ್ಶನ ನೀಡಿದರು. ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಶ್ರೀಕೃಷ್ಣಾರೆಡ್ಡಿ ಹಾಗೂ ಇತರ ಹಿರಿಯ ಅಧಿಕಾರಿಗಳು ಇಲಾಖೆಯ ಕಾರ್ಯಸಾಧನೆಗಳನ್ನು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.