ETV Bharat / state

ಎರಡು ಬಾರಿ ಸಿಎಂ ಮಾಡಿದಾಗಲೇ ಅಸ್ತಿತ್ವ ಉಳಿಸಿಕೊಳ್ಳಲು ಆಗಿಲ್ಲ, ಈಗ ಪಕ್ಷ ಉಳಿಸಲು ಯತ್ನಿಸುತ್ತಿದ್ದಾರೆ: ಚಲುವರಾಯಸ್ವಾಮಿ ಟೀಕೆ - ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿಗೆ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ವ್ಯಂಗ್ಯವಾಡಿದರು.

minister chaluvarayaswamy
ಸಚಿವ ಚಲುವರಾಯಸ್ವಾಮಿ
author img

By ETV Bharat Karnataka Team

Published : Sep 14, 2023, 3:29 PM IST

ಬೆಂಗಳೂರು: ಎರಡು ಬಾರಿ ಸಿಎಂ ಮಾಡಿದಾಗಲೇ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಆಗಲಿಲ್ಲ. ಈಗ ಪಕ್ಷ ಉಳಿಸಿಕೊಳ್ಳೋ ಪ್ರಯತ್ನ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿಗೆ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಎರಡೂ ಕಡೆ ಅಸಮಾಧಾನ ಸ್ಫೋಟ ಆಗಿದೆ. ಎರಡೂ ಕಡೆ ಶಾಸಕರು ರಾಗ ತೆಗೆದಿದ್ದಾರೆ. ಇನ್ನೂ ಕೆಲಕಾಲ ನೋಡೋಣ. ಬಹಳ ಸ್ಪೀಡ್ ಆಗಿರೋದು ನಮ್ಮ ಬ್ರದರ್. ಬ್ರದರ್ ಮತ್ತು ಬೊಮ್ಮಾಯಿ ಇಬ್ಬರೇ ಮೈತ್ರಿಯಾಗಲಿ ಅಂತ ಮಾತಾಡ್ತಿರೋದು. ಯಡಿಯೂರಪ್ಪ ಮಾತ್ರ ನೋಡೋಣ ಏನಾಗಲಿದೆ ಅಂತಿದ್ದಾರೆ ಎಂದು ಬಿಜೆಪಿ ಜೆಡಿಎಸ್‌ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ಯೋಗೇಶ್ವರ್‌ಗೂ ಮೈತ್ರಿ ಈಗ ಅನಿವಾರ್ಯ. ಅವರು ನನ್ನ ಸ್ನೇಹಿತರು. ಅವರಿಗೆ ಒಳ್ಳೆಯದಾಗಲಿ ಎಂದು ಯೋಗೇಶ್ವರ್ ಕೂಡ ಮೈತ್ರಿಯಾಗಲಿ ಅನ್ನೋ ಹೇಳಿಕೆಗೆ ಸಚಿವರು ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಚಿತ್ರದಲ್ಲಿ ಬರ ಮೂಡಿಸಿರೋ ಬಿಜೆಪಿ ಟ್ವೀಟ್ ಕುರಿತು ಉತ್ತರಿಸಿದ ಚಲುವರಾಯಸ್ವಾಮಿ, ಬಿಜೆಪಿಯವರಿಗೆ ಭಯ ಬಂದಿದೆ. ಪಾರ್ಲಿಮೆಂಟ್ ಚುನಾವಣೆ ಎದುರಿಸಲು ಆಗ್ತಿಲ್ಲ. ಹೀಗಾಗಿ ಸಿದ್ದರಾಮಯ್ಯ ಬಗ್ಗೆ ಮಾತಾಡ್ತಿದ್ದಾರೆ. ಬರಗಾಲ ಯಾರಾದ್ರೂ ಹೇಳಿ ಕೇಳಿ ಕರೆಯಲು ಸಾಧ್ಯವಾ?. ಸಂಸ್ಕಾರವಿಲ್ಲದೇ ಮಾತನಾಡ್ತಿದ್ದಾರೆ. ಮೋದಿ ಅವರು ರಾಜ್ಯಕ್ಕೆ ಬಂದಾಗ ವಿಶ್ ಮಾಡದೇ ಹೋಗಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ನಮ್ಮನ್ನು ದೆಹಲಿಗೆ ಕರೀತಾರೆ ಅಂತ ತಿಳಿದುಕೊಂಡಿದ್ದಾರೆ. ನಾಲ್ಕು ತಿಂಗಳಾದ್ರೂ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಜೆಡಿಎಸ್‌ ಜೊತೆ ಹೋಗ್ತಿದ್ದಾರೆ ಎಂದು ಕಿಡಿ ಕಾರಿದರು.

ಸಿದ್ದರಾಮಯ್ಯ ಗ್ಯಾರಂಟಿ ಹಂಚಿಕೆ ಮಾಡುತ್ತಿದ್ದಾರೆ. ಅದರ ಜೊತೆ ಬೇರೆ ಕೆಲಸಗಳೂ ನಡೆಯುತ್ತಿದೆ. 196 ತಾಲೂಕು ಬರ ಅಂತ ಘೋಷಣೆ ಮಾಡಲಾಗಿದೆ. 34 ತಾಲೂಕುಗಳು ಗೈಡ್ ಲೈನ್ಸ್​ನಲ್ಲಿ ಬರ್ತಿಲ್ಲ. ಅದನ್ನೂ ಗೈಡ್ ಲೈನ್ಸ್ ಒಳಗೆ ತಂದು ಬರ ಅಂತ ಘೋಷಣೆ ಮಾಡೋ ಪ್ರಯತ್ನ ಮಾಡುತ್ತಿದ್ದೇವೆ. ರೈತರಿಗೆ ಐದು ಲಕ್ಷ ಬಡ್ಡಿ ರಹಿತ ಸಾಲ ಕೊಡ್ತಿದ್ದೇವೆ. ಹಾಲು ದರ ಏರಿಸಿ ರೈತರಿಗೆ ಕೊಡಲಾಗ್ತಿದೆ. ಇದನ್ನೆಲ್ಲ ಸಿದ್ದರಾಮಯ್ಯ ಅವರೇ ಮಾಡಿದ್ದು ಎಂದು ತಿರುಗೇಟು ನೀಡಿದರು.

ಬರ ಪರಿಹಾರ ನೀಡುವಂತೆ ವಿರೋಧ ಪಕ್ಷಗಳ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, ಬರ ಪರಿಹಾರ ಸುಮ್ಮನೆ ಮಾಡಲು ಆಗಲ್ಲ. ಅದಕ್ಕಾಗಿ ಸರ್ವೆ ಮಾಡಬೇಕು. ಸರ್ವೆ ಮಾಡಿ ಎಷ್ಟು ಅಂತ ಅಂದಾಜು ಮಾಡಬೇಕು. ಬಳಿಕ ಪರಿಹಾರ ನೀಡಬೇಕು. ಕೇಂದ್ರ ಮತ್ತು ರಾಜ್ಯ ಎರಡರಿಂದಲೂ ಪರಿಹಾರ ಆಗಬೇಕು. ಬಿಜೆಪಿಯವರು ಕೇಂದ್ರದ ಬಳಿ ಪರಿಹಾರ ಕೇಳಲಿ. 25 ಜನ ಎಂಪಿ ಇದ್ದಾರೆ. ಒಬ್ಬರೂ ಬರದ ಬಗ್ಗೆ ಮಾತನಾಡುತ್ತಿಲ್ಲ. ಮೋದಿ ಬಳಿಯಾದ್ರೂ ಹೋಗಿ ಮಾತನಾಡಲಿ. ರಾಜ್ಯಕ್ಕೆ ಪರಿಹಾರ ಕೊಡಿಸಬೇಕು ಎಂದು ಬಿಜೆಪಿ ನಾಯಕರ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: B S Yediyurappa: ದೆಹಲಿಯಿಂದ ವಾಪಸಾದ ಯಡಿಯೂರಪ್ಪ.. ರಾಜ್ಯದ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದ ಮಾಜಿ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.