ETV Bharat / state

ರಾಜ್ಯದ 17 ನದಿಗಳು ಕಲುಷಿತ.. ಕೈಗಾರಿಕೆಗಳ ತ್ಯಾಜ್ಯ ನೀರು ಸಂಸ್ಕರಣೆ ಕಡ್ಡಾಯ

ಕೃಷ್ಣಾ, ಕಾವೇರಿ ನದಿ ಸೇರಿದಂತೆ ರಾಜ್ಯದ 17 ನದಿಗಳು ಕಲುಷಿತಗೊಂಡಿವೆ. ನದಿ ನೀರಿನ ಮಾಲಿನ್ಯ ನಿಯಂತ್ರಿಸಲು ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ನಗರಸಭೆ, ಪುರಸಭೆ, ಸ್ಥಳೀಯ ಸಂಸ್ಥೆಗಳು ಹಾಗೂ ಕಾರ್ಖಾನೆಗಳಿಗೆ ನೋಟಿಸ್‌ ಜಾರಿ ಮಾಡಲಾಗುವುದು ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದರು.

Bangalore
ರಾಜ್ಯದ 17 ನದಿಗಳು ಕಲುಷಿತ..ಸಂಬಂಧಪಟ್ಟವರಿಗೆ ನೋಟಿಸ್: ಸಚಿವ ಸಿ.ಪಿ. ಯೋಗೇಶ್ವರ್
author img

By

Published : Feb 20, 2021, 5:07 PM IST

ಬೆಂಗಳೂರು: ಜನವಸತಿ ಪ್ರದೇಶ ಹಾಗೂ ಕಾರ್ಖಾನೆಗಳ ತ್ಯಾಜ್ಯ ನೀರಿನಿಂದ ಕೃಷ್ಣಾ, ಕಾವೇರಿ ನದಿ ಸೇರಿದಂತೆ ರಾಜ್ಯದ 17 ನದಿಗಳು ಕಲುಷಿತಗೊಂಡಿವೆ. ನದಿ ನೀರಿನ ಮಾಲಿನ್ಯ ನಿಯಂತ್ರಿಸಲು ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ನಗರಸಭೆ, ಪುರಸಭೆ, ಸ್ಥಳೀಯ ಸಂಸ್ಥೆಗಳು ಹಾಗೂ ಕಾರ್ಖಾನೆಗಳಿಗೆ ನೋಟಿಸ್‌ ಜಾರಿ ಮಾಡಲಾಗುವುದು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದರು.

ಸಚಿವ ಸಿ.ಪಿ. ಯೋಗೇಶ್ವರ್ ಸುದ್ದಿಗೋಷ್ಠಿ

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ‌. ಇನ್ನೂ ಚರ್ಚೆ ಹಂತದಲ್ಲಿದೆ, ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದರು.

ಅಯೋಧ್ಯೆಯಲ್ಲಿ ಕರ್ನಾಟಕ ಭವನ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಜಾಗದಲ್ಲಿ ಕರ್ನಾಟಕದ ಪ್ರವಾಸೋದ್ಯಮ ಭವನ ನಿರ್ಮಿಸಲು 10 ಎಕರೆ ಜಮೀನು ಕೇಳಲಾಗಿದೆ. ತಿರುಪತಿ ಹಾಗೂ ದೆಹಲಿ ಕರ್ನಾಟಕ ಭವನದ ಮಾದರಿಯಲ್ಲೇ ಅಲ್ಲಿ ಭವನ ನಿರ್ಮಾಣ ಮಾಡಲು ಉದ್ದೇಶವಿದೆ ಎಂದು ಸಚಿವರು ತಿಳಿಸಿದರು.

ಪರಿಶೀಲನಾ ಸಭೆಯಲ್ಲಿ ನಡೆದ ಚರ್ಚೆ ವಿಷಯ: ನದಿಗಳ ಉಗಮ ಸ್ಥಾನದಿಂದ ಅಣೆಕಟ್ಟುಗಳಿಗೆ, ನದಿ ನೀರು ಹರಿಯುವ ಪ್ರದೇಶಗಳಲ್ಲಿ ನಗರಸಭೆ, ಪುರಸಭೆ, ಸ್ಥಳೀಯ ಸಂಸ್ಥೆಗಳು ಹಾಗೂ ಕಾರ್ಖಾನೆಗಳು ತ್ಯಾಜ್ಯ ನೀರನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡದೆ ನೇರವಾಗಿ ನದಿಗೆ ಬಿಡುತ್ತಿರುವುದರಿಂದ ನದಿ ನೀರು ಬಳಸಲು ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ. ಹೀಗಾಗಿ ಇನ್ನು ಮುಂದೆ ಮಹಾನಗರ ಪಾಲಿಕೆಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಕಾರ್ಖಾನೆಗಳು ಕಡ್ಡಾಯವಾಗಿ ಆಧುನಿಕ ತಂತ್ರಜ್ಞಾನದ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಿ, ಉದ್ಯಾನವನಗಳಿಗೆ ಹಾಗೂ ಇತರೆ ಬಳಕೆಗೆ ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳಬೇಕು. ಆದಷ್ಟು ಮಟ್ಟಿಗೆ ಮಳೆ ನೀರು ಮಾತ್ರ ನದಿಯಲ್ಲಿ ಹರಿಯಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ.

ನದಿ ನೀರು ಎಷ್ಟರ ಮಟ್ಟಿಗೆ ಕಲುಷಿತಗೊಂಡಿದೆ ಎಂದರೆ ಎಳನೀರು ಕುಡಿದರೂ ಅದರಲ್ಲಿ ವಿಷಯುಕ್ತ ಅಂಶಗಳನ್ನು ಕಾಣಬಹುದಾಗಿದೆ. ಹೀಗಾಗಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಲ ಕಾಯ್ದೆ 1974, ವಾಯು ಕಾಯ್ದೆ 1981, ಪರಿಸರ ಸಂರಕ್ಷಣಾ ಕಾಯ್ದೆ 1986, ಅಪಾಯಕಾರಿ ಹಾಗೂ ಇತರೆ ತ್ಯಾಜ್ಯ ನಿಯಮಗಳು 2016, ಜೈವಿಕ ವೈವಿಧ್ಯ ನಿರ್ವಹಣೆ-ನಿಯಮಗಳು-2016, ಘನ ತ್ಯಾಜ್ಯ ನಿರ್ವಹಣೆ, ಇ-ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆ ಹಾಗೂ ಕಟ್ಟಡ ನಿರ್ಮಾಣ ಮತ್ತು ಕೆಡಹುವಿಕೆ ತ್ಯಾಜ್ಯ ನಿರ್ವಹಣೆ, ನಿಯಮಗಳು-2016 ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ರಾಜ್ಯ ಕೈಗಾರಿಕಾ ಅಭಿವೃದ್ಧಿ ಮಂಡಳಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶಗಳಲ್ಲಿ ತ್ಯಾಜ್ಯ ಸಂಸ್ಕರಣೆಗೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿಲ್ಲ. ಹೀಗಾಗಿ ಕೈಗಾರಿಕಾ ಪ್ರದೇಶಗಳಿಂದ ಸಾಕಷ್ಟು ಪರಿಸರ ಮಾಲಿನ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕೈಗಾರಿಕಾ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಯೋಜನೆ ರೂಪಿಸಲಾಗುವುದು.

ಔಷಧಿ, ಸಿಮೆಂಟ್‌ ಹಾಗೂ ಕಾಗದ ಕಾರ್ಖಾನೆ ಸೇರಿದಂತೆ ಅತೀ ಹೆಚ್ಚು ಮಾಲಿನ್ಯ ಉಂಟು ಮಾಡುವ 17 ಪ್ರವರ್ಗದ ಕಾರ್ಖಾನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಕೊಳ ಹಾಗೂ ಕೆರೆಗಳಲ್ಲಿ ನೀರಿನ ಗುಣಮಟ್ಟ ಮಾಪನ ಅಳವಡಿಸಲಾಗುವುದು. ವಿಷನ್‌ 2022 ಆನ್‌ಲೈನ್‌ ಯೋಜನೆಯನ್ನು ರೂಪಿಸಲಾಗಿದೆ. ಮೊಬೈಲ್‌ ಆ್ಯಪ್​‌ ಮೂಲಕ ಗಾಳಿ, ನೀರು, ಮಾಲಿನ್ಯದ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದರು.

ಇ-ತ್ಯಾಜ್ಯ ನಿರ್ವಹಣೆ: ವೈಜ್ಞಾನಿಕ ರೀತಿಯಲ್ಲಿ ಇ-ತ್ಯಾಜ್ಯ ನಿರ್ವಹಣೆ ಮಾಡುವುದರಿಂದ ಸಾಕಷ್ಟು ಲಾಭಗಳಿಸಬಹುದು. ಮೊಬೈಲ್‌, ಕಂಪ್ಯೂಟರ್‌, ಪ್ರಿಂಟರ್‌ಗಳು ಹಾಗೂ ಟಿವಿ, ಫ್ರಿಡ್ಜ್‌ಗಳು, ಎಸಿ ಹಾಗೂ ಇತರೆ ಎಲೆಕ್ಟ್ರಾನಿಕ್‌ ಉಪಕರಣಗಳಿಂದ ಉತ್ಪಾದನೆಯಾಗುವ ಇ-ತ್ಯಾಜ್ಯವನ್ನು ನಾವು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡುತ್ತಿಲ್ಲ. ಇ-ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡಿದರೆ ಎಲೆಕ್ಟ್ರಾನಿಕ್‌ ಉಪಕರಣಗಳಲ್ಲಿರುವ ಅತ್ಯಂತ ಬೆಲೆ ಬಾಳುವ ಖನಿಜಗಳನ್ನು ಬೇರ್ಪಡಿಸಿ ಸಾಕಷ್ಟು ಹಣ ಸಂಪಾದಿಸಬಹುದು. ತಾಮ್ರ, ಚಿನ್ನ ಸೇರಿದಂತೆ ವಿವಿಧ ರೀತಿಯ ಖನಿಜಾಂಶಗಳು ಎಲೆಕ್ಟ್ರಾನಿಕ್‌ ಉಪಕರಣಗಳಲ್ಲಿ ಇರುತ್ತವೆ. ಮುಂದಿನ ದಿನಗಳಲ್ಲಿ ಇ-ತ್ಯಾಜ್ಯ ನಿರ್ವಹಣೆಗೆ ಒಂದು ವೈಜ್ಞಾನಿಕ ಪದ್ಧತಿಯನ್ನು ಅನುಷ್ಠಾನಕ್ಕೆ ತರಲಾಗುತ್ತದೆ.

ಶಬ್ದಮಾಲಿನ್ಯ ಹಾಗೂ ವಾಯುಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದ್ದು, ರಾಜ್ಯದ ಎಲ್ಲಾ ನಗರ ಹಾಗೂ ಪಟ್ಟಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಬ್ದ ಹಾಗೂ ವಾಯು ಗುಣಮಟ್ಟ ಮಾಪನಗಳನ್ನು ಅಳವಡಿಸಲಾಗುವುದು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಟ್ಟು 709 ಹುದ್ದೆಗಳಿದ್ದು, ಅದರಲ್ಲಿ 400 ಹುದ್ದೆಗಳು ಖಾಲಿ ಇವೆ. 174 ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹೈದ್ರಾಬಾದ್‌-ಕರ್ನಾಟಕ ಪ್ರದೇಶಕ್ಕೆ 32 ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ರಾಜ್ಯ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, 4 ಹುದ್ದೆಗಳ ಅಂತಿಮ ಆಯ್ಕೆಯ ಪಟ್ಟಿಯನ್ನು ರವಾನಿಸಿದ್ದಾರೆ. ಉಳಿದ 28 ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಆಯೋಗದಿಂದ ನಿರೀಕ್ಷಿಸಲಾಗಿದೆ ಎಂದು ಸಚಿವ ಯೋಗೇಶ್ವರ್ ತಿಳಿಸಿದರು.

ಓದಿ: ಪ್ರವಾಸೋದ್ಯಮ ಉತ್ತೇಜಿಸಲು ಸ್ಟಾರ್ ಹೋಟೆಲ್​ಗಳನ್ನು ಕೈಗಾರಿಕೆ ವ್ಯಾಪ್ತಿಗೆ ತರಲು ನಿರ್ಧಾರ: ಸಚಿವ ಯೋಗೇಶ್ವರ್​​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.