ಬೆಂಗಳೂರು: ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ಸಭೆ ನಡೆಯುತ್ತಿದ್ದು, ಸಚಿವ ಡಿ.ಕೆ. ಶಿವಕುಮಾರ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಅತೃಪ್ತ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಪತನದ ಭೀತಿ ಎದುರಿಸುತ್ತಿದೆ. ಈ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಸಚಿವ ಡಿಕೆಶಿ ಮುಂದಿನ ನಡೆ ಮತ್ತು ಕಾಂಗ್ರೆಸ್ನ ಕಾರ್ಯತಂತ್ರ ಬಗ್ಗೆ ದೊಡ್ಡಗೌಡರ ಜೊತೆ ಚರ್ಚೆ ನಡೆಸುತ್ತಿದ್ದಾರೆ.
ಪದ್ಮನಾಭನಗರದಲ್ಲಿನ ದೇವೇಗೌಡ ಅವರ ನಿವಾಸದಲ್ಲಿ ಹೆಚ್.ಡಿ. ರೇವಣ್ಣ, ಡಿಸಿ ತಮ್ಮಣ್ಣ, ಹೆಚ್.ಕೆ. ಕುಮಾರಸ್ವಾಮಿ, ಕುಪೇಂದ್ರ ರೆಡ್ಡಿ, ಕೋನಾರೆಡ್ಡಿ, ಟಿ.ಎ. ಶರವಣ ಸೇರಿದಂತೆ ಹಲವು ಜೆಡಿಎಸ್ ನಾಯಕರು ಆಗಮಿಸಿದ್ದು, ಕ್ಷಿಪ್ರ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಅತೃಪ್ತರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಚಿವ ಡಿಕೆಶಿಯವರು ದೇವೇಗೌಡರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.