ETV Bharat / state

ಸರ್ಕಾರಿ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ಪ್ರತಿಪಕ್ಷಗಳ ವಿರುದ್ಧ ಅಪಪ್ರಚಾರಕ್ಕೆ ಬಳಸುತ್ತಿದ್ದಾರೆ: ರಾಷ್ಟ್ರಪತಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ - etv bharat karnataka

ಪ್ರಧಾನಿ ರಾಜಕೀಯ ಭಾಷಣಗಳಿಗೆ ಸರ್ಕಾರದ ಆಡಳಿತಯಂತ್ರ ಬಳಕೆಗೆ ಅವಕಾಶ ನೀಡಬಾರದು ಎಂದು ದಿನೇಶ್ ಗುಂಡೂರಾವ್ ರಾಷ್ಟ್ರಪತಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

minister-dinesh-gundurao-letter-to-the-president-on-prime-minister-modi
ಸರ್ಕಾರಿ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ಪ್ರತಿಪಕ್ಷಗಳ ವಿರುದ್ಧ ಅಪಪ್ರಚಾರಕ್ಕೆ ಬಳಸುತ್ತಿದ್ದಾರೆ: ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರಪತಿಗೆ ಪತ್ರ
author img

By

Published : Jul 2, 2023, 6:30 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರಿ ಕಾರ್ಯಕ್ರಮಗಳನ್ನು ತಮ್ಮ ರಾಜಕೀಯ ಹೇಳಿಕೆ ನೀಡಲು ಮತ್ತು ಪ್ರತಿಪಕ್ಷಗಳನ್ನು ಟೀಕಿಸಲು ಬಳಸದಂತೆ ಸಲಹೆ ನೀಡಬೇಕೆಂದು ಕೋರಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಜು.1ರಂದು ನಡೆದ ರಾಷ್ಟ್ರೀಯ ಸಿಕಲ್ ಸೆಲ್ ಅನೀಮಿಯಾ ನಿವಾರಣೆ ಅಭಿಯಾನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕುಟುಂಬ ರಾಜಕಾರಣ, ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಜೊತೆಗೆ ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳನ್ನು ಮೋಸದ ಸ್ಕೀಂಗಳೆಂದು ಬಿಂಬಿಸಿದ್ದಾರೆ. ಇತರ ಪ್ರತಿಪಕ್ಷಗಳು ಭ್ರಷ್ಟ ಪಕ್ಷಗಳಾಗಿದ್ದು, ಕಳೆದ 70 ವರ್ಷಗಳಲ್ಲಿ ಏನೂ ಸಾಧನೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಧಾನಿಯೊಬ್ಬರು ಸರ್ಕಾರಿ ಕಾರ್ಯಕ್ರಮದಲ್ಲಿ ಇಂಥ ಹೇಳಿಕೆಗಳನ್ನು ಕೊಟ್ಟಿರುವುದು ಆಕ್ಷೇಪಾರ್ಹವಾಗಿದೆ. ಜೊತೆಗೆ ಪ್ರತಿಪಕ್ಷ ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ನಡೆಸಿದ್ದಾರೆ. ಖಾಸಗಿ ಹಾಗೂ ಪಕ್ಷದ ಕಾರ್ಯಕ್ರಮಗಳಲ್ಲಿ ತಮ್ಮ ರಾಜಕೀಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಮುಕ್ತ ಸ್ವತಂತ್ರವಿದೆ. ಆದರೆ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ಈ ರೀತಿಯ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುವುದು ಕ್ಷಮಾರ್ಹವಲ್ಲ ಎಂದು ಪ್ರಧಾನಿ ನಡೆಯನ್ನು ದಿನೇಶ್​ ಗುಂಡೂರಾವ್​ ಖಂಡಿಸಿದ್ದಾರೆ.

ಸಿಕಲ್ ಸೆಲ್ ರಕ್ತಹೀನ ನಿವಾರಣೆ ಮಿಷನ್​ಗೆ ಚಾಲನೆ ನೀಡುವ ಸರ್ಕಾರಿ ಕಾರ್ಯಕ್ರಮವನ್ನ ಪ್ರಧಾನಿ ಮೋದಿಯವರು ವಿಪಕ್ಷಗಳನ್ನ ಹಳಿಯಲು ಬಳಸಿಕೊಂಡಿದ್ದಾರೆ. ವರ್ಚುವಲ್ ಮೂಲಕ ಕಾರ್ಯಕ್ರಮಕ್ಕೆ ಪ್ರಧಾನಿ ಅವರು ಚಾಲನೆ ನೀಡಿಲಿದ್ದು, ರಾಜ್ಯದ ಆರೋಗ್ಯ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ನಮಗೆ ಆಹ್ವಾನಿಸಿತ್ತು. ರಾಜ್ಯದ ಆರೋಗ್ಯ ಸಚಿವನಾಗಿ ನಾನು ವಿಕಾಸ ಸೌಧದಿಂದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದೆ. ಆದರೆ ಮೋದಿಯವರು ಯಾರೊಂದಿಗೂ ಚರ್ಚಿಸದೆ ವಿಪಕ್ಷಗಳನ್ನ ದೂಷಿಸುವ ಭಾಷಣ ಮಾಡಿದರು ಎಂದು ದೂರಿದ್ದಾರೆ.

ಸಿಕಲ್ ಸೆಲ್ ರಕ್ತಹೀನ ಕಾಯಿಲೆ ನಿವಾರಣೆ ಕುರಿತು ಪ್ರಧಾನಿ ಮೋದಿಯವರು ಈಗ ಮಾತಾಡುತ್ತಿದ್ದಾರೆ. ಆದರೆ ಸಿಕಲ್ ಸೆಲ್ ನಿವಾರಣೆ ಕುರಿತು ದೇಶದಲ್ಲೇ ಮೊದಲು ಜಾಗೃತಗೊಂಡಿದ್ದ ರಾಜ್ಯ ಕರ್ನಾಟಕ. 2016 ರಿಂದಲೇ ಕರ್ನಾಟಕ ಸರ್ಕಾರ ಸಿಕಲ್ ಸೆಲ್ ಕಾಯಿಲೆ ವಿರುದ್ಧ ಕಾರ್ಯಕ್ರಮಗಳನ್ನ ಹಾಕಿಕೊಂಡು ಬಂದಿದೆ. 2016 ರಲ್ಲಿ ರಾಜ್ಯದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೈಸೂರು ಭಾಗದ ಬುಡಕಟ್ಟು ಜನರ ತಪಾಸಣೆ ನಡೆಸಿ ಪಾಸಿಟಿವ್ ಬಂದವರಿಗೆ ಉಚಿತ ಆರೋಗ್ಯ ಚಿಕಿತ್ಸೆ ನೀಡುತ್ತಿದೆ ಎಂದಿದ್ದಾರೆ.

ಸಿಕಲ್ ಸೆಲ್ ಕಾಯಿಲೆಯನ್ನು ಕರ್ನಾಟಕ ರಾಜ್ಯ ತಡೆಗಟ್ಟುತ್ತಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಯವರು ರಾಜ್ಯ ಸರ್ಕಾರದ ಅಭಿಪ್ರಾಯ ಕೇಳುತ್ತಾರೆ ಎಂಬ ನಿರೀಕ್ಷೆಯಲ್ಲಿ ರಾಜ್ಯದ ಆರೋಗ್ಯ ಸಚಿವನಾಗಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಆದರೆ ಪ್ರಧಾನಿ ಅವರು ತಮ್ಮ ಪಕ್ಷದ ಚುನಾವಣಾ ಭಾಷಣಕ್ಕೆ ನಮ್ಮ ಸಮಯ ವ್ಯರ್ಥ ಮಾಡಿದರು. ಮೋದಿಯವರು ಎಲ್ಲರಿಗೂ ನಿರಾಶೆ ಉಂಟುಮಾಡಿದರು ಎಂದು ಪತ್ರದಲ್ಲಿ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸಿಕಲ್ ಸೆಲ್ ಅನೀಮಿಯಾ ಎಲಿಮಿನೇಷನ್ ಮಿಷನ್​ನ ಪ್ರಾರಂಭವು ಪೀಡಿತ ಜನರು ಮತ್ತು ಮಿಷನ್ ಕಾರ್ಯತಂತ್ರದ ಬಗ್ಗೆ ಆಗಿರಬೇಕಾಗಿತ್ತು. ಆದರೆ ಪ್ರಧಾನಿಯವರು ಬುಡಕಟ್ಟು ಜನಾಂಗದ ಸಮಸ್ಯೆಗಳ ಬಗ್ಗೆ ಗಮನಹರಿಸಲಿಲ್ಲ. ಬದಲಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಮೇಲೆ ದಾಳಿ ಮಾಡುವಲ್ಲಿ ಈ ಸಂದರ್ಭವನ್ನು ಮೋದಿಯವರು ವ್ಯರ್ಥ ಮಾಡಿದರು ಎಂದು ಆರೋಪಿಸಿದ್ದಾರೆ.

ಬುಡಕಟ್ಟು ಪ್ರದೇಶಗಳಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವಾಗ, ಆದಿವಾಸಿಗಳಿಗೆ ಸಂಬಂಧಿಸಿದ ಘಟನೆಗಳ ಬಗ್ಗೆ ಪ್ರಧಾನಿ ಸಂಪೂರ್ಣ ಮೌನ ವಹಿಸಿದ್ದರು. ಆರೋಗ್ಯ ಸೇವೆಗಳಲ್ಲಿ ಕರ್ನಾಟಕದ ಸಾಧನೆ ಮತ್ತು ಸಿಕಲ್ ಸೆಲ್ ಕಾಯಿಲೆಯ ವಿರುದ್ಧ ಹೋರಾಡಲು ರಾಜ್ಯದ ಐತಿಹಾಸಿಕ ಪ್ರಯತ್ನಗಳನ್ನ ಪ್ರಧಾನಿ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. 2024ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ರಾಜಕೀಯ ಭಾಷಣಗಳಿಗೆ ಸರ್ಕಾರದ ಆಡಳಿತಯಂತ್ರ ಬಳಕೆಗೆ ಅವಕಾಶ ನೀಡಬಾರದು ಎಂದು ಸಚಿವರು ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಾಲಿಗೆ ಕರ್ನಾಟಕ ಸರ್ಕಾರ ಖಜಾನೆ ಇದ್ದಂತೆ : ಎನ್ ರವಿಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.