ETV Bharat / state

ಕನಸು ಭಗ್ನಗೊಂಡ ಹೆಚ್​ಡಿಕೆ ಭಗ್ನ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ: ಸಚಿವ ದಿನೇಶ್ ಗುಂಡೂರಾವ್ ಟೀಕೆ - ಬೆಂಗಳೂರು

ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಹೆಚ್​ಡಿಕೆ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ- ಸಚಿವ ದಿನೇಶ್ ಗುಂಡೂರಾವ್ ಟ್ವೀಟ್​.

Dinesh Gundurao and  HD Kumaraswamy
ದಿನೇಶ್ ಗುಂಡೂರಾವ್ ಹಾಗೂ ಹೆಚ್​.ಡಿ ಕುಮಾರಸ್ವಾಮಿ
author img

By

Published : Aug 6, 2023, 11:02 AM IST

ಬೆಂಗಳೂರು: ಕನಸು ಭಗ್ನಗೊಂಡ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಭಗ್ನ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು "ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಹೆಚ್​ಡಿಕೆ ಅವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಅವರು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ? ಎಂದು ಪ್ರಶ್ನಿಸಿದ್ದಾರೆ.

  • 1
    ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ HDKಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌.
    ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ HDK ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ.

    ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ?

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 6, 2023 " class="align-text-top noRightClick twitterSection" data=" ">

ಇದನ್ನೂ ಓದಿ: ಜೆಡಿಎಸ್​​​ ಅಸ್ತಿತ್ವಕ್ಕಾಗಿ ಕುಮಾರಸ್ವಾಮಿ ಅವರಿಂದ ಇಲ್ಲಸಲ್ಲದ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ

ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ: ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ. ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ನಾವ್ಯಾರು ಕುಮಾರಸ್ವಾಮಿಯವರ ಕೈಯನ್ನು ಕಟ್ಟಿ ಹಾಕಿಲ್ಲ‌ ಎಂದು ಸವಾಲು ಹಾಕಿದ್ದಾರೆ.

'ಕಿಂಗ್ ಮೇಕರ್' ಕನಸನ್ನು ನುಚ್ಚುನೂರು: ಅವರು ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು?. ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ 'ಕಿಂಗ್ ಮೇಕರ್' ಕನಸನ್ನು ನುಚ್ಚುನೂರು ಮಾಡಿದರು ಎಂದು ವ್ಯಂಗ್ಯವಾಡಿದ್ದಾರೆ.

  • 2
    HDKಯವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ.

    ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ.

    ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ.

    HDKಯವರು ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು?

ಕನಸು ಭಗ್ನಗೊಂಡ ಹೆಚ್​ಡಿಕೆ ಭಗ್ನ ಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿಕೆ ಕಿಡಿ: ನಾನು ಹಿಟ್ ಅಂಡ್​ ರನ್ ವ್ಯಕ್ತಿಯಲ್ಲ, ಯಾವತ್ತೂ ಕೂಡ ನಾನು ಆ ರೀತಿ ಮಾಡಿದವನಲ್ಲ. ಕಾಂಗ್ರೆಸ್​ನವರು ನನ್ನ ಹೆಸರೇಳಿ ಹಿಟ್ ಅಂಡ್​ ರನ್ ಅಂತಾರೆ. ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಹಿಂದೆ ಪೇಸಿಎಂ ಅಂತಾ ಪೋಸ್ಟರ್ ಬೇರೆ ಅಂಟಿಸಿದ್ದರು. ಎಲ್ಲದಕ್ಕೂ ದಾಖಲೆ ಕೊಡುತ್ತೇವೆ ಅಂತಾ ಹೇಳುತ್ತಿದ್ದರು. ಆದರೆ ಅವರೀಗ ಮಾಡ್ತಿರೋದು ಏನು?. ಅವರ ಯಾವುದೇ ಆರೋಪಗಳಿಗೆ ದಾಖಲೆಗಳಿವೆಯಾ? ಎಂದು ಕಾಂಗ್ರೆಸ್​ ನಾಯಕರ ಹೇಳಿಕೆಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದರು.

  • 3
    HDKಯವರು ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಆಗುವ ಕನಸು ಕಂಡಿದ್ದರು.

    ಆದರೆ ಜನರು ಚುನಾವಣೆಯಲ್ಲಿ HDK 'ಕಿಂಗ್ ಮೇಕರ್' ಕನಸನ್ನು ನುಚ್ಚುನೂರು ಮಾಡಿದರು.

    ಕನಸು ಭಗ್ನಗೊಂಡ HDK, ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ.

    ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ.

ನಿನ್ನೆ(ಶನಿವಾರ) ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ನಡೆಸಿದ ಹೆಚ್ ಡಿ ಕುಮಾರಸ್ವಾಮಿ ಅವರು, ಪರಮೇಶ್ವರ್ ಬಗ್ಗೆ ನನಗೆ ಗೌರವವಿತ್ತು. ಅವರ ಜೊತೆ ನಾನು ‌ಕೆಲಸ ಮಾಡಿದ್ದೆ. ಬಿಡಿಎ ವಿಚಾರದಲ್ಲಿ ನಾನು ಕೈಹಾಕಿರಲಿಲ್ಲ. ಪೊಲೀಸ್ ವಿಚಾರ ಡಿಜಿಗೆ ಬಿಟ್ಟಿದ್ದೆ. ಹಿಂದೆ ನಾವು ಇಂಟರ್ ಫಿಯರ್ ಆಗಿರಲಿಲ್ಲ. ಇದೀಗ ಹಿಟ್ ಆ್ಯಂಡ್ ರನ್ ಅಂತ ಹೇಳ್ತೀರ ಎಂದು ಪರಮೇಶ್ವರ್ ವಿರುದ್ಧವೂ ಹೆಚ್​ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: 'ನಾನು ಹಿಟ್ ಅಂಡ್​ ರನ್ ವ್ಯಕ್ತಿಯಲ್ಲ', ದೆಹಲಿಯಲ್ಲೇ ದಾಖಲೆ ಬಿಡುಗಡೆ ಮಾಡ್ತೇನಿ: ಮಾಜಿ ಸಿಎಂ ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.