ETV Bharat / state

ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ನಿಯಮ ಅನಿವಾರ್ಯ: ಸಚಿವ ಡಾ.ಕೆ.ಸುಧಾಕರ್ - ಕರ್ನಾಟಕ ಕೊರೊನಾ

ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ. ಹೀಗಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ. ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

Minister Dr. K sudhakar
ಸಚಿವ ಡಾ.ಕೆ.ಸುಧಾಕರ್
author img

By

Published : Mar 16, 2021, 1:24 PM IST

ಬೆಂಗಳೂರು: ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಮುಖ್ಯಮಂತ್ರಿಗಳು ಜನರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ. ಹೀಗಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ. ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಅಂತ ಸಿಎಂ ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು.

ಇದನ್ನು ಓದಿ: 17ನೇ ದಿನವೂ ಪೆಟ್ರೋಲ್, ಡೀಸೆಲ್​ ಬೆಲೆ ಸ್ಥಿರ.. ಮಾ.16ರ ರೇಟ್ ಹೀಗಿದೆ..

ಇಂದಿನಿಂದ ಜಾಹೀರಾತುಗಳ ಮೂಲಕ ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಇದುವರೆಗೂ 15 ಲಕ್ಷ ಜನರಿಗೆ ನೀಡಿದ್ದೇವೆ. ನಿತ್ಯ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ ವ್ಯಕ್ತಿಗೆ 20 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮಾಡಲೇಬೇಕು ಎಂದು ಸಚಿವರು ಸೂಚನೆ ನೀಡಿದರು.

ಗಡಿ ರಾಜ್ಯಗಳಲ್ಲಿ ಸೋಂಕು ಏರಿಕೆ ಆಗಿರೋದೇ ಜಿಲ್ಲೆಗಳಲ್ಲಿ ಕೊರೊನಾ ಏರಿಕೆಗೆ ಪ್ರಮುಖ ಕಾರಣವಾಗಿದೆ. ಸಭೆ ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ಮಾಡಲಾಗುವುದು ಎಂದರು.

ಪ್ರತಿಭಟನೆ, ಸಿನಿಮಾ ಹಾಲ್​ಗಳಿಗೆ ಟಫ್ ರೂಲ್ಸ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾಳೆ ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸುತ್ತಾರೆ. ಬಹಿರಂಗ ಸಭೆ - ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ವಿಚಾರ ಕೂಡ ಆ ಬಳಿಕ ನಿರ್ಧಾರ ಆಗುತ್ತದೆ ಎಂದು ಸಚಿವ ಡಾ.ಕೆ ಸುಧಾಕರ್ ವಿವರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.