ETV Bharat / state

ಯಾದಗಿರಿಯಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅನುಮತಿ: ಸಚಿವ ಡಾ.ಕೆ ಸುಧಾಕರ್

ಯಾದಗಿರಿ ಮೆಡಿಕಲ್ ಕಾಲೇಜು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಿದ್ದು, ಈ ಭಾಗದ ಆರೋಗ್ಯ ಮೂಲ ಸೌಕರ್ಯದಲ್ಲಿ ಗಣನೀಯ ಸುಧಾರಣೆ ತರಲಿದೆ. ಯಾದಗಿರಿ ಜನತೆಯ ಬಹುದಿನಗಳ ಕನಸು ನನಸಾಗಿಸಲು ಕಾರಣೀಭೂತರಾದ ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟ್ವೀಟ್ ಮೂಲಕ ಯಾದಗಿರಿ ಜನತೆಯ ಪರವಾಗಿ ಸಚಿವ ಡಾ. ಕೆ. ಸುಧಾಕರ್ ಧನ್ಯವಾದಗಳನ್ನು ತಿಳಿಸಿದ್ದಾರೆ.

author img

By

Published : Jul 28, 2022, 10:43 PM IST

ಸಚಿವ ಡಾ. ಕೆ ಸುಧಾಕರ್
ಸಚಿವ ಡಾ. ಕೆ ಸುಧಾಕರ್

ಬೆಂಗಳೂರು: ಯಾದಗಿರಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರಾಷ್ಟ್ರೀಯ ಆರೋಗ್ಯ ಆಯೋಗದ (NMC) ಅನುಮತಿ ದೊರೆತಿದ್ದು, ಇದೇ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳಿಗೆ ಪ್ರವೇಶಾತಿ ಪ್ರಾರಂಭವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಯಾದಗಿರಿ ಮೆಡಿಕಲ್ ಕಾಲೇಜು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಿದ್ದು, ಈ ಭಾಗದ ಆರೋಗ್ಯ ಮೂಲ ಸೌಕರ್ಯದಲ್ಲಿ ಗಣನೀಯ ಸುಧಾರಣೆ ತರಲಿದೆ. ಯಾದಗಿರಿ ಜನತೆಯ ಬಹುದಿನಗಳ ಕನಸು ನನಸಾಗಿಸಲು ಕಾರಣೀಭೂತರಾದ ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟ್ವೀಟ್ ಮೂಲಕ ಯಾದಗಿರಿ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

ಅದೇ ರೀತಿ ಹಾವೇರಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮುಂಬರುವ 2022 - 23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದೆ.

ಹಾವೇರಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಾಗೂ ಈ ಯೋಜನೆಯನ್ನು ಪೂರ್ಣಗೊಳಿಸಲು ಸಂಪೂರ್ಣ ಬೆಂಬಲ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ತೃತೀಯ ಹಂತದ ಚಿಕಿತ್ಸೆಗೆ ಹುಬ್ಬಳ್ಳಿ - ಧಾರವಾಡದ ಮೇಲೆ ಅವಲಂಬಿತರಾಗಬೇಕಿದ್ದ ಹಾವೇರಿ ಜಿಲ್ಲೆಯ ಜನತೆಗೆ ಈ ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ತಮ್ಮ ಸಮೀಪದಲ್ಲೇ ಉತ್ಕೃಷ್ಟ ತೃತೀಯ ಹಂತದ ವೈದ್ಯಕೀಯ ಸೇವೆ ಸಿಗಲಿದೆ. ವೈದ್ಯರಾಗುವ ಕನಸು ಹೊತ್ತಿರುವ ನಾಡಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 150 ಅಧಿಕ ಎಂಬಿಬಿಎಸ್ ಸೀಟುಗಳು ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ಓದಿ: ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಂದು ಹತ್ಯೆ: ಯುವಕನ ಬರ್ಬರ ಕೊಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.