ಬೆಂಗಳೂರು: ಕೊರೊನಾ ವಿರುದ್ಧ ಹೋರಾಟ ನಡೆಸುವವರಿಗೆ ನೀಡಲಾಗುವ ಕೊರೊನಾ ವಾರಿಯರ್ಸ್ ಕಾರ್ಡ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ನೀಡಲಾಗಿದೆ.
ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನಾ ತುರ್ತು ಆರೋಗ್ಯ ಸೇವೆ ಯೋಧರ ಒಂದು ಕಾರ್ಯಪಡೆಯನ್ನೇ ರಚಿಸಲಾಗಿದೆ. ಈ ಕಾರ್ಯಪಡೆಯ ಎಲ್ಲರಿಗೂ ಕೊರೊನಾ ವಾರಿಯರ್ ಕಾರ್ಡ್ ಹೆಸರಿನ ಗುರುತಿನ ಚೀಟಿ ನೀಡಲಾಗುತ್ತಿದ್ದು, ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅವರಿಗೂ ನೀಡಲಾಯಿತು.
ಕೋವಿಡ್-19 ನಿಯಂತ್ರಣದ ಜವಾಬ್ದಾರಿ ನಿರ್ವಹಿಸುತ್ತಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಕೊರೊನಾ ವಾರಿಯರ್ಸ್ ಕಾರ್ಡ್ ಅನ್ನು ಸಿಎಂ ಬಿಎಸ್ವೈಗೆ ನೀಡಿದರು. ಈ ವೇಳೆ ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ಥ್ ನಾರಾಯಣ್, ಲಕ್ಷ್ಮಣ್ ಸವದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.