ETV Bharat / state

ಪಿಒಪಿ, ಬಣ್ಣದ ಮೂರ್ತಿ ತಯಾರಿಕೆ, ದಾಸ್ತಾನು ಮಾರಾಟ ಮಾಡದಂತೆ ಸಚಿವ ಈಶ್ವರ ಖಂಡ್ರೆ ಸೂಚನೆ - ಬೆಂಗಳೂರು

ಈ ಬಾರಿ ಸೆಪ್ಟೆಂಬರ್ 18ರಂದು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ನಮ್ಮ ಭಕ್ತಿ, ಭಾವ, ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣಪತಿ ತಂದು ಪೂಜಿಸಿ ಹಬ್ಬ ಆಚರಿಸೋಣ ಎಂದು ಸಚಿವ ಈಶ್ವರ ಖಂಡ್ರೆ ರಾಜ್ಯದ ಜನತೆಯಲ್ಲಿ ಮುಂಚಿತವಾಗಿಯೇ ಮನವಿ ಮಾಡಿದ್ದಾರೆ.

Minister Eshwar Khandre
ಸಚಿವ ಈಶ್ವರ ಖಂಡ್ರೆ
author img

By

Published : Aug 6, 2023, 6:39 AM IST

ಬೆಂಗಳೂರು: ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣಪತಿ ಮೂರ್ತಿಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನಜಾಗೃತಿ ಮೂಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ನೀರಿನಲ್ಲಿ ಸರಿಯಾಗಿ ಕರಗದ ಮತ್ತು ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ, ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡದಂತೆ ಜನಜಾಗೃತಿ ಮೂಡಿಸಲು ಅವರು ಸೂಚಿಸಿದ್ದಾರೆ.

ಕಲುಷಿತ ನೀರು ಸೇವನೆಯಿಂದ ರಾಜ್ಯದ ವಿವಿಧೆಡೆಗಳಲ್ಲಿ ಜೀವಹಾನಿಯೂ ಆಗಿದೆ. ಅಮೂಲ್ಯವಾದ ಜನ, ಜಾನುವಾರುಗಳ ಜೀವ ಉಳಿಸಲು ಮತ್ತು ಆರೋಗ್ಯ ರಕ್ಷಿಸಲು ಪಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ)ನಿಂದ ತಯಾರಿಸಿದ ಹಾಗೂ ಲೋಹಯುಕ್ತ ಅಪಾಯಕಾರಿ ರಾಸಾಯನಿಕ ಬಣ್ಣ ಬಳಸಿದ ಮೂರ್ತಿಗಳ ತಯಾರಿಕೆ, ದಾಸ್ತಾನು, ಮಾರಾಟ ಮಾಡದಂತೆ ಜಾಗೃತಿ ಮೂಡಿಸಲು ಮಾಲಿನ್ಯ ನಿಯಂತ್ರಣ ಮಂಡಳಿಗೆ ಖಂಡ್ರೆ ಹೇಳಿದ್ದಾರೆ.

ಹಬ್ಬಕ್ಕೆ ಇನ್ನೂ ಒಂದೂವರೆ ತಿಂಗಳು ಬಾಕಿ ಇದ್ದು, ಈಗಿನಿಂದಲೇ ಪಿಒಪಿ ಗೌರಿ, ಗಣಪತಿ ಮೂರ್ತಿಗಳನ್ನು ತಯಾರಿಸದಂತೆ, ಬೇರೆ ರಾಜ್ಯದಿಂದ ಮಾರುಕಟ್ಟೆ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲು ಅವರು ನಿರ್ದೇಶನ ನೀಡಿದ್ದಾರೆ. ಈ ಬಾರಿ ಸೆಪ್ಟೆಂಬರ್ 18ರಂದು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ನಮ್ಮ ಭಕ್ತಿ, ಭಾವ, ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣಪತಿ ತಂದು ಪೂಜಿಸಿ ಹಬ್ಬ ಆಚರಿಸೋಣ. ಆದರೆ, ನಮ್ಮ ಆಚರಣೆಯಿಂದ ಜಲ, ನೆಲ, ಗಾಳಿ ಮತ್ತು ಪರಿಸರಕ್ಕೆ ಹಾನಿ ಆಗದಂತೆ ಎಚ್ಚರಿಕೆ ವಹಿಸೋಣ ಎಂದು ಈಶ್ವರ ಖಂಡ್ರೆ ರಾಜ್ಯದ ಜನತೆಯಲ್ಲಿ ಮುಂಚಿತವಾಗಿಯೇ ಮನವಿ ಮಾಡಿದ್ದಾರೆ.

ಗೌರಿ ಮತ್ತು ಗಣೇಶನ ಹಬ್ಬದ ವೇಳೆ ಮಾವಿನ ತೋರಣ ಕಟ್ಟಿ, ತೆಂಗಿನ ಗರಿಯಿಂದ ಮಂಟಪ ಮಾಡಿ, ಬಾಳೆ ಕಂದು ಕಟ್ಟಿ ಮಣ್ಣಿನ ಮೂರ್ತಿಗಳನ್ನು ತಂದು, ಹೂ, ಪತ್ರೆಗಳಿಂದ ಪೂಜಿಸಿ, ನೀರಿನಲ್ಲಿ ನಿಮಜ್ಜನ ಮಾಡುವುದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯವಾಗಿದೆ. ನಮ್ಮ ಪೂರ್ವಿಕರು ಕೆರೆಯಲ್ಲೇ ಸಿಗುವ ಜೇಡಿಮಣ್ಣಿನಲ್ಲಿ ಗೌರಿ, ಗಣಪತಿ ವಿಗ್ರಹ ಮಾಡಿ ಅದಕ್ಕೆ ನೈಸರ್ಗಿಕ ಬಣ್ಣ ಲೇಪಿಸಿ, ಪೂಜಿಸಿ, ನೀರಲ್ಲಿ ನಿಮಜ್ಜನ ಮಾಡುತ್ತಿದ್ದರು. ಆ ವಿಗ್ರಹಗಳು 2-3 ದಿನದಲ್ಲಿ ಕರಗುತ್ತಿದ್ದವು. ಆದರೆ ಕಳೆದ ಕೆಲವು ದಶಕದಿಂದ ಪಿಒಪಿ. ಗಣಪತಿ ವಿಗ್ರಹ ಮಾಡುತ್ತಿದ್ದು, ಇದಕ್ಕೆ ರಾಸಾಯನಿಕ ಬಣ್ಣ ಲೇಪಿಸುತ್ತಾರೆ. ಈ ಬಣ್ಣಗಳಿಂದಾಗಿ ಜಲಚರಗಳು ಸಾವಿಗೀಡಾಗುತ್ತಿದ್ದು, ಈ ವಿಗ್ರಹಗಳು ನೀರಲ್ಲಿ ಕರಗುವುದೂ ಇಲ್ಲ. ಜತೆಗೆ ಜಲ‌ ಮೂಲಗಳನ್ನು ಕಲುಷಿತಗೊಳಿಸುತ್ತಿದೆ.

ಗಣಪತಿ ಮಂಟಪದ ಅಲಂಕಾರಕ್ಕೆ ಪ್ಲಾಸ್ಟಿಕ್ ತೋರಣ, ಪ್ಲಾಸ್ಟಿಕ್ ಅಲಂಕಾರಿಕ ವಸ್ತು ಬಳಸದೆ ಹತ್ತಿಯಿಂದ ಮಾಡಿದ ಸಾಂಪ್ರದಾಯಿಕ ಗೆಜ್ಜೆ, ವಸ್ತ್ರ ಬಳಸಿ ಪರಿಸರ ಉಳಿಸಬೇಕು. ನಾವು ಭಕ್ತಿಯಿಂದ ಪೂಜಿಸುವ ಗೌರಿ, ಗಣಪತಿಯ ಪಿಓಪಿ ವಿಗ್ರಹಗಳು ನೀರಲ್ಲಿ ಹತ್ತಾರು ದಿನ ಕಳೆದರೂ ಕರಗುವುದಿಲ್ಲ. ಅವುಗಳು ಕೆರೆ, ಕಟ್ಟೆಗಳ ಬಳಿ ಅರ್ಧ ಕರಗಿ, ಮುರಿದು ಬಿದ್ದಿರುವ ಸ್ಥಿತಿ ನೋಡಿದಾಗ ಮನಸ್ಸಿಗೆ ತುಂಬಾ ನೋವಾಗುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಇದನ್ನೂ ಓದಿ: ಮಣ್ಣಿನ ಕೊರತೆ ಎದುರಿಸುತ್ತಿರುವ ಗಣೇಶ ಮೂರ್ತಿ ತಯಾರಕರು.. ಸರ್ಕಾರದ ವಿರುದ್ಧ ಆಕ್ರೋಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.