ETV Bharat / state

Saalumarada Thimmakka: ವೃಕ್ಷಮಾತೆ ತಿಮ್ಮಕ್ಕರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಸಚಿವ ಈಶ್ವರ ಖಂಡ್ರೆ - ಪದ್ಮಶ್ರೀ ಪ್ರಶಸ್ತಿ

Saalumarada Thimmakka: ಬೆನ್ನುಮೂಳೆಗೆ ಪೆಟ್ಟುಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲುಮರದ ತಿಮ್ಮಕ್ಕ ಅವರನ್ನು ಇಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

minister-eshwar-khandre-met-salu-marada-thimmakka-in-bengaluru
ವೃಕ್ಷಮಾತೆ ತಿಮ್ಮಕ್ಕರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ ಖಂಡ್ರೆ
author img

By

Published : Aug 7, 2023, 6:48 PM IST

ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದ ಕಾರಣ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕರನ್ನು ಅರಣ್ಯ ಹಾಗೂ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. "ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿ ಜನರಷ್ಟೇ ಅಲ್ಲದೇ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ" ಎಂದು ಸಚಿವರು ಹಾರೈಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀವು ಬೇಗ ಗುಣಮುಖರಾಗಿ ವೃಕ್ಷ ಪ್ರೇಮಿಗಳಿಗೆ ಮಾರ್ಗದರ್ಶನ ಮಾಡಬೇಕು, ಪ್ರೇರಣೆ ನೀಡಬೇಕು ಎಂದಿರುವುದಾಗಿ ಇದೇ ಸಂದರ್ಭದಲ್ಲಿ ತಿಮ್ಮಕ್ಕ ಅವರಿಗೆ ಸಚಿವರು ತಿಳಿಸಿದರು. ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ತಿಮ್ಮಕ್ಕರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಖಂಡ್ರೆ, ಹೆಚ್ಚಿನ ಕಾಳಜಿ ವಹಿಸುವಂತೆ ಸೂಚನೆ ನೀಡಿದರು.

ಸಾಲುಮರದ ತಿಮ್ಮಕ್ಕ ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಂಆರ್‌ಐ ಸ್ಕ್ಯಾನಿಂಗ್ ಮಾಡಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಯಾವುದೇ ತೊಂದರೆಯಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದರು.

ನಿನ್ನೆ ಹಾಸನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ತಿಮ್ಮಕ್ಕ, ಸಂಜೆ 4:30 ರ ಸಮಯದಲ್ಲಿ ಬೆಂಗಳೂರಿನ ಮಂಜುನಾಥ ನಗರದ ಬಾಡಿಗೆ ಮನೆಯಲ್ಲಿ ಕಾಲು ಜಾರಿ ಬಿದ್ದರು. ಗೃಹ ಸಚಿವ ಜಿ.ಪರಮೇಶ್ವರ್​ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು ಎಂದು ತಿಮ್ಮಕ್ಕನವರ ಪುತ್ರ ಉಮೇಶ್ ತಿಳಿಸಿದ್ದಾರೆ.

ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿರುವ ತಿಮ್ಮಕ್ಕ, ಅಪ್ಪಟ ಪರಿಸರಪ್ರೇಮಿ. ಸುಮಾರು 65 ವರ್ಷಗಳ ಕಾಲ 8 ಸಾವಿರಕ್ಕೂ ಹೆಚ್ಚು ಮರಗಳನ್ನು ನೆಟ್ಟು ವೃಕ್ಷಮಾತೆಯೆಂಬ ಬಿರುದು ಪಡೆದಿದ್ದಾರೆ. ಮರಗಳನ್ನು ತಮ್ಮ ಸ್ವಂತ ಮಕ್ಕಳಂತೆ ಆರೈಕೆ ಮಾಡಿ, ಪೋಷಿಸಿ ಹೆಮ್ಮರವಾಗಿ ಬೆಳೆಸಿ ಪರಿಸರ ರಕ್ಷಿಸಿದ್ದಾರೆ. ಇವರ ನಿಸ್ವಾರ್ಥ ಸೇವೆಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

ಇದನ್ನೂ ಓದಿ: ನಾಳೆ ಮಧ್ಯಾಹ್ನದ ಹೊತ್ತಿಗೆ ಸ್ಪಂದನಾ ವಿಜಯ್​ ಪಾರ್ಥಿವ ಶರೀರ ಬೆಂಗಳೂರಿಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.