ETV Bharat / state

ಮಹರ್ಷಿ ವಾಲ್ಮೀಕಿ ಜೀವನ ತತ್ತ್ವಾದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು: ಸಚಿವ ಗೋಪಾಲಯ್ಯ - ಸಚಿವ ಕೆ.ಗೋಪಾಲಯ್ಯ ಭಾಗಿ

ವಾಲ್ಮೀಕಿ ಮಹರ್ಷಿ ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಅವರ ಆದರ್ಶ, ಶ್ರದ್ಧೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವಂತಾಗಬೇಕು. ಇದರಿಂದ ಪ್ರೀತಿ, ವಿಶ್ವಾಸದಿಂದ ಬದುಕಲು ಸಾಧ್ಯ ಎಂದು ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಸಚಿವ ಗೋಪಾಲಯ್ಯ
ಸಚಿವ ಗೋಪಾಲಯ್ಯ
author img

By

Published : Oct 20, 2021, 9:57 PM IST

ಬೆಂಗಳೂರು: ಮಾನವಿಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿಯ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಅವರ ತತ್ತ್ವ , ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರದಲ್ಲಿರುವ ಶಾಸಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾಕಾವ್ಯ ರಾಮಾಯಣವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಕೀರ್ತಿ ವಾಲ್ಮೀಕಿಗೆ ಸಲ್ಲುತ್ತದೆ. ಆದಿಕವಿ, ಮಹಾಕವಿ ಎಂದು ಅವರನ್ನು ಕರೆಯುತ್ತಾರೆ. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ ಎಂದು ಬಣ್ಣಿಸಿದರು.

ವಾಲ್ಮೀಕಿ ಮಹರ್ಷಿ ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಅವರ ಆದರ್ಶ, ಶ್ರದ್ಧೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವಂತಾಗಬೇಕು. ಇದರಿಂದ ಪ್ರೀತಿ, ವಿಶ್ವಾಸದಿಂದ ಬದುಕಲು ಸಾಧ್ಯ ಎಂದು ತಿಳಿಸಿದರು.

ರಾಮರಾಜ್ಯದ ಪರಿಕಲ್ಪನೆಯೂ ವಾಲ್ಮೀಕಿಯದ್ದೇ

ಇಡೀ ವಿಶ್ವಕ್ಕೆ ರಾಮರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರದ್ದಾಗಿದೆ. ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರಮವಿದ್ದಲ್ಲಿ ಸಾಧನೆ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಪ್ರಶಂಸಿದರು.

ಶ್ರೀರಾಮನನ್ನು ಕುರಿತು ಇಡೀ ಬ್ರಹ್ಮಾಂಡವೇ ಮೆಚ್ಚಿಕೊಳ್ಳುವಂತಹ ರಾಮಾಯಣ ಒಂದು ಅದ್ಭುತ ಗ್ರಂಥ. ದೇಶದ ಅನೇಕ ಭಾಷೆಗಳಲ್ಲಿ ರಾಮಾಯಣ ಮಹಾಕಾವ್ಯ ರಚನೆಯಾಯಿತು. ದೇಶ-ವಿದೇಶದ ಭಾಷೆಗಳಲ್ಲಿಯೂ ರಚಿಸಲ್ಪಟ್ಟ ಮಹಾ ಗ್ರಂಥವಾಗಿದೆ ಎಂದು ಗೋಪಾಲಯ್ಯ ‌ಹೇಳಿದರು.

ವಿಶ್ವಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗೆಯೇ ಮಾನವಿಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ್ದಾರೆ ಎಂದು ತಿಳಿಸಿದರು.

ರಾಮಾಯಣ ನಿತ್ಯಕಥೆಯೇ ಹೊರತು ಮಹಾಕಾವ್ಯವಲ್ಲ

ವಾಲ್ಮೀಕಿ ರಾಮಾಯಣ ನಿತ್ಯ ಕಥೆಯಾಗಿದೆಯೇ ಹೊರತು ಮಹಾಕಾವ್ಯವಲ್ಲ. ವಾಲ್ಮೀಕಿ ರಾಮಾಯಣ ಪ್ರತಿನಿತ್ಯ ನಡೆಯುವ ಘಟನೆಗಳಾಗಿವೆ. ಶಾಂತಿ, ಸಹಬಾಳ್ವೆ, ಅಹಿಂಸೆಯನ್ನು ಪ್ರತಿಪಾದಿಸಿದ್ದ ವಾಲ್ಮೀಕಿಯಿಂದ ಪಂಪ, ರನ್ನ, ಪೊನ್ನ, ಹರಿಹರ, ರಾಘವಾಂಕ ಮತ್ತಿತರ ಮಹಾನ್ ಕವಿಗಳು ಬೆಳಕಿಗೆ ಬರಲು ಕಾರಣವಾಯಿತು ಎಂದು ಅಭಿಪ್ರಾಯಪಟ್ಟರು.

ವಾಲ್ಮೀಕಿ, ಬುದ್ಧ, ಬಸವ, ಕನಕದಾಸ, ಅಂಬೇಡ್ಕರ್ ಅವರು ಸಾಮಾಜಿಕ ಸಮಾನತೆಗಾಗಿ ಹೋರಾಟ ಮಾಡಿದ್ದಾರೆ. ಆದ್ದರಿಂದ ಇವರನ್ನು ಸದಾ ಸ್ಮರಿಸಬೇಕಿದೆ ಎಂದು ಕರೆಕೊಟ್ಟರು. ನಾಗರಿಕತೆಯ ಬದಲಾವಣೆಗೆ ವಾಲ್ಮೀಕಿ ಬದುಕು ಒಂದು ಉತ್ತಮ ನಿದರ್ಶನವಾಗಿದೆ. ವಾಲ್ಮೀಕಿ ಬರೆದ ರಾಮಾಯಣ ಕೃತಿ ಪ್ರಪಂಚದ ಮಹಾನ್ ಗ್ರಂಥವಾಗಿದೆ ಎಂದರು.

ಮಾನವ ಕುಲಕ್ಕೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ಹಿಂದಿನ ಕಾಲದ ಆದರ್ಶ ಮಹನೀಯರ ಉತ್ತಮ ವಿಚಾರಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು. ನುಡಿದಂತೆ ನಡೆದುಕೊಳ್ಳುವುದು ವಾಲ್ಮೀಕಿ ರಾಮಾಯಣದಿಂದ ತಿಳಿದು ಬರುತ್ತದೆ ಎಂದು ಹೇಳಿದರು.

ರಾಮಾಯಣ ಮಹಾಕಾವ್ಯವನ್ನು ರಚಿಸಿ ರಾಮತತ್ತ್ವವನ್ನು ಜಗತ್ತಿಗೆಲ್ಲ ಪಸರಿಸಿದ ಮಹಾಕವಿ, ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯಂದು ಆ ಪುಣ್ಯಪುರುಷನಿಗೆ ಕೋಟಿ ನಮನಗಳು. ಅವರ ವಿಚಾರಗಳು ನಮ್ಮ ಧರ್ಮ, ಇತಿಹಾಸ, ಸಂಸ್ಕೃತಿ, ಸಂಪ್ರದಾಯಗಳ ಆಧಾರಗಳಾಗಿವೆ ಎಂದು ಗೋಪಾಲಯ್ಯ ಬಣ್ಣಿಸಿದರು.

ಇದೇ ವೇಳೆ ವಾಲ್ಮೀಕಿ ಸಮುದಾಯದ ಸದಸ್ಯರನ್ನು ಗೋಪಾಲಯ್ಯನವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ರಾಜ್ಯ ಒ.ಬಿ.ಸಿ ಅಧ್ಯಕ್ಷ ನೆಲ ನರೇಂದ್ರ ಬಾಬು ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಪಾಲಿಕೆ ಮಾಜಿ ಉಪ ಮೇಯರ್ ಹರೀಶ್ ಮುಖಂಡರುಗಳಾದ ವೆಂಕಟೇಶ ಮೂರ್ತಿ, ಶವಾನಂದ್, ನಿಸರ್ಗ ಜಗದೀಶ್ ರಾಘವೇಂದ್ರ ಮುಂತಾದವರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.