ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ಬ ಸಚಿವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ, ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೆ. ಗೋಪಾಲಯ್ಯಗೆ ಕೊರೊನಾ ಸೋಂಕು ತಗುಲಿದೆ.
ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಇಂದು ಮಧ್ಯಾಹ್ನ 4 ಗಂಟೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಕ್ವಾರಂಟೈನ್ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಮನವಿ ಮಾಡಿದ್ದಾರೆ..