ETV Bharat / state

ಮೊಬೈಲ್ ಫೀವರ್ ಕ್ಲಿನಿಕ್‌ಗೆ ಸಚಿವ ಗೋಪಾಲಯ್ಯ ಚಾಲನೆ - Minister gopalayya news

ನಾಗಪುರ ಹಾಗೂ ಮಾರಪ್ಪನಪಾಳ್ಯ ವಾರ್ಡ್‌ಗಳಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ತೆರೆಯಲಾಗಿದ್ದು, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಚಾಲನೆ ನೀಡಿದರು.

Gopalayya
Gopalayya
author img

By

Published : Aug 2, 2020, 3:26 PM IST

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರ ಹಾಗೂ ಮಾರಪ್ಪನಪಾಳ್ಯ ವಾರ್ಡ್‌ಗಳಲ್ಲಿ ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ಮನೆಮನೆಗೆ ತೆರಳಿ ಮೊಬೈಲ್ ಫೀವರ್ ಕ್ಲಿನಿಕ್, ಆಕ್ಸಿ ಮೀಟರ್ ಮತ್ತು ಟೆಂಪರೇಚರ್ ಚೆಕಪ್ ಮಾಡುವ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ 7 ವಾರ್ಡ್‌ಗಳಲ್ಲಿ ಈ ಮೊಬೈಲ್ ಫೀವರ್ ಕ್ಲಿನಿಕ್ ತೆರೆಯಲಾಗುವುದು. ಪ್ರತಿಯೊಬ್ಬರ ಮನೆ ಮನೆಗೆ ಹೋಗಿ ತಪಾಸಣೆ ನಡೆಸಲಾಗುತ್ತದೆ. ಕೊರೊನಾ ಸೋಂಕಿನಿಂದ ರಕ್ಷಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಿ, ಸಮರ್ಪಕ ಚಿಕಿತ್ಸೆಗೆ ವೈದ್ಯಕೀಯ ನೆರವು ನೀಡುವ ಮೂಲಕ ಎಲ್ಲರಿಗೂ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಕೋವಿಡ್ ಸೆಂಟರ್ ತೆರೆಯಲಾಗಿದ್ದು ಯಾರು ಭಯ ಬೀಳದೆ ಧೈರ್ಯದಿಂದ ಎದುರಿಸಬೇಕು ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಮಹದೇವ, ಸ್ಥಳೀಯ ಬಿಜೆಪಿ ಕಾರ್ಯಕರ್ತರು, ಖಾಸಗಿ ಆಸ್ಪತ್ರೆಗಳ ವೈದ್ಯರು, ನರ್ಸ್‌ಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.