ETV Bharat / state

ಬಿಟ್ ಕಾಯಿನ್ ಬಗ್ಗೆ ಪ್ರತಿಪಕ್ಷಗಳ ಆರೋಪವು 'ಭೂತ ಬಂತು ಭೂತ' ಎಂಬಂತಿದೆ : ಸಚಿವ ಕಾರಜೋಳ ವ್ಯಂಗ್ಯ - ಬಿಟ್ ಕಾಯಿನ್ ಹಗರಣದ ಬಗ್ಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ

ಈ ಹಗರಣದ ಬಗ್ಗೆ ಇರುವ ಪುರಾವೆಗಳನ್ನು ತನಿಖಾ ಸಂಸ್ಥೆಗಳಿಗೆ ಪ್ರತಿಪಕ್ಷಗಳು ನೀಡಲಿ. ಅದನ್ನು ಬಿಟ್ಟು ಸುಮ್ಮನೆ ಬಿಟ್ ಕಾಯಿನ್ ಸ್ಕ್ಯಾಮ್ ಅಂದರೆ ಯಾರಿಗೂ ಅಂಜಿಕೆಯಿಲ್ಲ. ಏಕೆಂದರೆ, ನಾವು ಇದನ್ನಾಗಲೇ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಿದ್ದೇವೆ. ನಮ್ಮಲ್ಲಿ ಮುಚ್ಚಿಡುವುದು ಏನೂ ಇಲ್ಲ ಎಂದು ಅವರು ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದ್ದಾರೆ..

minister-govind-karajola-reaction-on-bitcoin-scam
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ
author img

By

Published : Nov 17, 2021, 7:15 PM IST

ಬೆಂಗಳೂರು : ಪ್ರತಿಪಕ್ಷಗಳು ಮಾಡುತ್ತಿರುವ 'ಬಿಟ್ ಕಾಯಿನ್ʼ ಸ್ಕ್ಯಾಮ್' (karnataka Bitcoin scam) ಎನ್ನುವುದು ಒಂದು 'ಭೂತ ಬಂತು ಭೂತ' ಎಂದು ಮಕ್ಕಳನ್ನು ಹೆದರಿಸುವ ಆಟಿಕೆಯಂತಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ.

ಭೂತ ಏನು ಎಂಬುದನ್ನು ಆಪಾದನೆ ಮಾಡುತ್ತಿರುವ ಪ್ರತಿಪಕ್ಷಗಳು ಮೊದಲು ಸಾಮಾನ್ಯ ಜನರಿಗೆ ಅರ್ಥ ಆಗುವ ಎಲ್ಲ ವಿವರ ಮತ್ತು ಆಧಾರಗಳೊಂದಿಗೆ ಸ್ಪಷ್ಟೀಕರಿಸಲಿ ಎಂದು ಮಾಧ್ಯಮ ಹೇಳಿಕೆಯಲ್ಲಿ ಅವರು ಒತ್ತಾಯಿಸಿದ್ದಾರೆ.

ಮೊದಲನೆಯದಾಗಿ ಇದು ಬಿಟ್ ಕಾಯಿನ್ ಸ್ಕ್ಯಾಮ್ ಅಲ್ಲ. ಇದು ಬಿಟ್ ಕಾಯಿನ್ ಒಳಗೊಂಡ ಹಗರಣ, ಇದೊಂದು ಸೈಬರ್ ಕ್ರೈಂ ಆಗಿದೆ. ಶ್ರೀಕಿ ಒಬ್ಬ ಹ್ಯಾಕರ್, ಸರ್ಕಾರಿ ಸೈಟ್ ಅನ್ನು ಹ್ಯಾಕ್ ಮಾಡಿಕೊಂಡಿರುವುದಾಗಿ ಆತನೇ ಹೇಳಿಕೊಂಡಿದ್ದಾನೆ.

ಕಿಂಗ್​ ಪಿನ್​ ಶ್ರೀಕಿಯನ್ನು ಬಿಟ್ ಕಾಯಿನ್ ಬಳಕೆಯಿಂದ ಮಾದಕವಸ್ತು ಕಳ್ಳಸಾಗಾಣೆಗಾಗಿ ಎನ್​​ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಕಾರಜೋಳ ಹೇಳಿದ್ದಾರೆ.

ಈ ಹಗರಣದ ಬಗ್ಗೆ ಇರುವ ಪುರಾವೆಗಳನ್ನು ತನಿಖಾ ಸಂಸ್ಥೆಗಳಿಗೆ ಪ್ರತಿಪಕ್ಷಗಳು ನೀಡಲಿ. ಅದನ್ನು ಬಿಟ್ಟು ಸುಮ್ಮನೆ ಬಿಟ್ ಕಾಯಿನ್ ಸ್ಕ್ಯಾಮ್ ಅಂದರೆ ಯಾರಿಗೂ ಅಂಜಿಕೆಯಿಲ್ಲ. ಏಕೆಂದರೆ, ನಾವು ಇದನ್ನಾಗಲೇ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಿದ್ದೇವೆ. ನಮ್ಮಲ್ಲಿ ಮುಚ್ಚಿಡುವುದು ಏನೂ ಇಲ್ಲ ಎಂದು ಅವರು ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಇದೊಂದು ಪ್ರಗತಿಯ ಹಂತದಲ್ಲಿರುವ ತನಿಖೆ. ಹೀಗಾಗಿ, ಪ್ರತಿಪಕ್ಷಗಳು ಮಾಡುತ್ತಿರುವ ಹುರುಳಿಲ್ಲದ ಹಾಗೂ ತಿರುಳಿಲ್ಲದ ಆರೋಪಗಳಿಗೆ ನಾವು ಉತ್ತರಿಸುವ ಅವಶ್ಯಕತೆ ಇಲ್ಲ ಎಂದ ಕಾರಜೋಳ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಈ ವಿಚಾರದಲ್ಲಿ ಮುಕ್ತ ಮನಸ್ಸು ಹೊಂದಿದೆ.

ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳನ್ನು ಸಾಬೀತುಪಡಿಸುವ ಜವಾಬ್ದಾರಿ ಅವರ ಮೇಲೆಯೇ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇವರ ದಯೆಯಿಂದ ಇನ್ನೂ ದೇಶಕ್ಕೆ ಮೂರನೇ ಅಲೆ ಕಾಲಿಟ್ಟಿಲ್ಲ: ಸಚಿವ ಡಾ.ಕೆ.ಸುಧಾಕರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.