ಬೆಂಗಳೂರು: ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ಯಾವಾಗ, ಏನು ಮಾಡಬೇಕು? ಎನ್ನುವುದು ಸಿಎಂ ಬಸವರಾಜ ಬೊಮ್ಮಾಯಿ ಅವರ ವಿವೇಚನೆಗೆ ಬಿಟ್ಟದ್ದಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಆರ್.ಟಿ ನಗರದಲ್ಲಿರುವ ಸಿಎಂ ಖಾಸಗಿ ನಿವಾಸಕ್ಕೆ ಇಂದು ಸಚಿವ ಕಾರಜೋಳ ಭೇಟಿ ನೀಡಿದರು. ಮುಖ್ಯಮಂತ್ರಿಗಳ ಜತೆ ಅಂತಾರಾಜ್ಯ ಜಲವ್ಯಾಜ್ಯಗಳ ಕುರಿತು ಸಮಾಲೋಚನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಹೈಕಮಾಂಡ್ ಜೊತೆ ಚರ್ಚೆ ನಡೆಸಿ ಯಾವಾಗ ವಿಸ್ತರಣೆ, ಪುನಾರಚನೆ ಮಾಡಬೇಕು ಎಂದು ಸಿಎಂ ತೀರ್ಮಾನ ಮಾಡುತ್ತಾರೆ ಎಂದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಜಲ ವ್ಯಾಜ್ಯಗಳ ಬಗ್ಗೆ ಇಂದು ಸಭೆ ಮಾಡುತ್ತಿದ್ದೇವೆ. ಸಭೆಯಲ್ಲಿ ಜಲ ವಿವಾದ ಪ್ರಕರಣಗಳ ಬಗ್ಗೆ ಚರ್ಚಿಸಲಾಗುತ್ತದೆ. ಸುಪ್ರೀಂಕೋರ್ಟ್ನಲ್ಲಿ ನಮ್ಮ ವಕೀಲರು ಸಮರ್ಥವಾಗಿ ರಾಜ್ಯದ ಪರ ವಾದ ಮಂಡಿಸುತ್ತಿದ್ದಾರೆ. ವಕೀಲರು ವಿಳಂಬ ಮಾಡುತ್ತಿಲ್ಲ.
ಇನ್ನು ಸುಪ್ರೀಂಕೋರ್ಟ್ ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳ ಪೀಠ ಬದಲಾಗಿದೆ. ಇದೇ 25 ಕ್ಕೆ ಮೇಕೆದಾಟು ವಿಚಾರಣೆ ಇದೆ ಎಂದು ತಿಳಿಸಿದರು.
ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದ ಅಂತಿಮ ಒಪ್ಪಿಗೆ: ನಳಿನ್ ಸಂತಸ