ETV Bharat / state

ಅತ್ಯಂತ ಹಳೆಯ ಪಕ್ಷಕ್ಕೆ ಸಂಸತ್ತಿನಲ್ಲಿ ಹೇಗೆ ನಡೆದುಕೊಳ್ಳಬೇಕೆಂಬುದೇ ಗೊತ್ತಿಲ್ಲ: ಕಾಂಗ್ರೆಸ್ ವಿರುದ್ಧ ಕಾರಜೋಳ ಕಿಡಿ - Govinda Karajola outrage against congress party in bengalore

ದೇಶದಲ್ಲೇ ಅತ್ಯಂತ ಹಳೆಯ ಪಕ್ಷಕ್ಕೆ ಸಂಸತ್‌ನಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂಬುದೇ ಗೊತ್ತಿಲ್ಲ. ಕಾಂಗ್ರೆಸ್ ನವರು ಕುಟುಂಬದ ಹಾಗೂ ಮನೆತನದ ಹಿನ್ನೆಲೆ ಉಳ್ಳವರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಆಡಳಿತ ನಡೆಸುತ್ತಿರುವವರು ಅವರು. ಈಗ ಬಿಜೆಪಿಗೆ ಆಡಳಿತ ನಡೆಸಲು ಬಿಡುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.

Govinda Karajola visits Jagannath Bhavan
ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಿದ ಗೋವಿಂದ ಕಾರಜೋಳ
author img

By

Published : Aug 18, 2021, 4:40 PM IST

Updated : Aug 18, 2021, 4:46 PM IST

ಬೆಂಗಳೂರು: ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್​ಗೆ ಸಂಸತ್ತಿನಲ್ಲಿ ಹೇಗೆ ನಡೆದುಕೊಳ್ಳಬೇಕೆಂಬುದು ಗೊತ್ತಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದ ಆಡಳಿತ ನಡೆಸಿದ್ದವರು ಈಗ ಲಜ್ಜೆಗೆಟ್ಟು ಬಿಜೆಪಿಗೆ ಆಡಳಿತ ನಡೆಸಲು ಬಿಡುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿದರು. ಕಾರ್ಯಕರ್ತರ ಅಹವಾಲು ಆಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 22 ರಿಂದ ಆಗಸ್ಟ್ 13ರ ವರೆಗೂ ಸಂಸತ್ ಕಲಾಪ ನಡೆಯಿತು. ಕೊರೊನಾ, ದೇಶದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್ ಪಕ್ಷದವರು ಸಂಸತ್ ಅಧಿವೇಶನ ನಡೆಯಲು ಬಿಡದೆ ಹೊರ ನಡೆದಿದ್ದಾರೆ, ಇದು ಖಂಡನೀಯ ಎಂದರು.

ದೇಶದಲ್ಲೇ ಅತ್ಯಂತ ಹಳೆಯ ಪಕ್ಷಕ್ಕೆ ಸಂಸತ್‌ನಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂಬುದೇ ಗೊತ್ತಿಲ್ಲ. ಕಾಂಗ್ರೆಸ್ ನವರು ಕುಟುಂಬದ ಹಾಗೂ ಮನೆತನದ ಹಿನ್ನೆಲೆ ಉಳ್ಳವರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಆಡಳಿತ ನಡೆಸುತ್ತಿರುವವರು ಅವರು. ಈಗ ಲಜ್ಜೆಗೆಟ್ಟು ಬಿಜೆಪಿಗೆ ಆಡಳಿತ ನಡೆಸಲು ಬಿಡುತ್ತಿಲ್ಲ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದುಳಿದ ಹಾಗೂ ಮಹಿಳೆಯರಿಗೆ ಸಾಮಾಜಿಕ ನ್ಯಾಯ ಪರ ನಿಂತಿದ್ದಾರೆ. ನಡ್ಡಾ ನೇತೃತ್ವದ ನಮ್ಮ ಪಕ್ಷ ದೇಶದುದ್ದಕ್ಕೂ ಹಿಂದುಳಿದವರನ್ನ ಮುಂದೆ ತರಲು ಮುಂದಾಗಿದ್ದಾರೆ. ಇದನ್ನ ದೇಶದ ಜನ ಸ್ವಾಗತಿಸುತ್ತಿದ್ದಾರೆ ಎಂದರು.

ದೀನ - ದಲಿತರ ಕಲ್ಯಾಣದ ಪರ: ಕಾಂಗ್ರೆಸ್ ಪಕ್ಷದವರು ಬೂಟಾಟಿಕೆ ಮಾತು ಆಡುತ್ತಾ ಸಾಮಾಜಿಕ ನ್ಯಾಯಕ್ಕೆ ಅನ್ಯಾಯ ಮಾಡಿದ್ದಾರೆ. ನರೇಂದ್ರ ಮೋದಿ ಸರ್ಕಾರ ಕೆಳ ವರ್ಗದವರಿಗೆ, ಹಿಂದುಳಿದವರಿಗೆ ಹಾಗೂ ಶೋಷಿತರ ಪರವಾಗಿದೆ. ಅದೇ ರೀತಿ ರಾಜ್ಯ ಸರ್ಕಾರ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ದೀನ - ದಲಿತರ ಕಲ್ಯಾಣದ ಪರವಾಗಿ ಕೆಲಸ ಮಾಡುತ್ತಿದೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಬಡವರ, ರೈತರ ಮಕ್ಕಳ ಪರವಾಗಿ ಯೋಜನೆ ಘೋಷಣೆ ಮಾಡಲಾಗಿದೆ ಎಂದರು.

ಓದಿ: RSS ನವರು ಭಾರತದ ನಿಜವಾದ ತಾಲಿಬಾನಿಗಳು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ

Last Updated : Aug 18, 2021, 4:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.